Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಪ್ಪುಗಟ್ಟಿದ ಸರೋವರದಲ್ಲಿ ಸಿಲುಕಿದ ಜಿಂಕೆ: ಪ್ರಾಣಪಣಕ್ಕಿಟ್ಟು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಅಮೆರಿಕದ ಮಿನ್ನೇಸೋಟದ ಹಿಮಾವೃತ ಪೈಕ್ ಸರೋವರವೊಂದರಲ್ಲಿ ಜಿಂಕೆ ಸಿಲುಕಿಗೊಂಡಿರುವಂತಹ ಘಟನೆ ನಡೆದಿತ್ತು. ಸಂಪೂರ್ಣ ಮಂಜುಗಡ್ಡೆ ಆದ ಹಿನ್ನೆಲೆ ಜಿಂಕೆ ಸರೋವರದಿಂದ ಹೊರಬರಲಾರದೇ ಕಷ್ಟಪಟ್ಟಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜಿಂಕೆಯ ಜೀವ ಉಳಿಸಿದ್ದಾರೆ.

ಹೆಪ್ಪುಗಟ್ಟಿದ ಸರೋವರದಲ್ಲಿ ಸಿಲುಕಿದ ಜಿಂಕೆ: ಪ್ರಾಣಪಣಕ್ಕಿಟ್ಟು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
ಜಿಂಕೆ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 03, 2023 | 6:38 PM

ಮೂಕ ಪ್ರಾಣಿಗಳು ಗೊತ್ತೋ ಗೊತ್ತಿಲ್ಲದೆ ಕೆಲವೊಮ್ಮೆ ತೊಂದರೆಗೆ ಸಿಲುಕಿಕೊಳ್ಳುತ್ತೇವೆ. ಸದ್ಯ ಇಂತಹದೊಂದು ಘಟನೆ ಅಮೆರಿಕದ ಮಿನ್ನೇಸೋಟದಲ್ಲಿ ಕಂಡುಬಂದಿದೆ. ಹಿಮಾವೃತ ಸರೋವರವೊಂದರಲ್ಲಿ ಜಿಂಕೆ (Deer) ಸಿಲುಕಿಗೊಂಡಿದೆ. ಚಳಿ ಇರುವುದರಿಂದ ಮಿನ್ನೇಸೋಟದ ಪೈಕ್ ಸರೋವರ ಸಂಪೂರ್ಣ ಮಂಜುಗಡ್ಡೆ ಆಗಿದೆ. ಹಾಗಾಗಿ ಜಿಂಕೆ ಸರೋವರದಿಂದ ಹೊರಬರಲಾರದೇ ಕಷ್ಟಪಟ್ಟಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜಿಂಕೆಯ ಜೀವ ಉಳಿಸಿದ್ದಾರೆ.

ಸದ್ಯ ಈ ರಕ್ಷಣಾ ಕಾರ್ಯಚರಣೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ಸ್ಮೈಲ್ ಪ್ಲೀಸ್, ಒನ್ ಸೆಲ್ಫಿ : ಸೆಲ್ಫಿಗೆ ಸಖತ್​​​ ಪೋಸ್ ಕೊಟ್ಟ ಶ್ವಾನ

ಪೈಕ್ ಸರೋವರದಲ್ಲಿ ಜಿಂಕೆ ಸಿಲುಕಿಕೊಂಡಿರುವ ವಿಷಯವನ್ನು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಸಂಪೂರ್ಣ ಮಂಜುಗಡ್ಡೆಯಾಗಿದ್ದ ಸರೋವರದಿಂದ ಹೊರಬರಲಾರದೇ ಜಿಂಕೆ ಹೆಣಗಾಡುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ತಮ್ಮ ರಕ್ಷಣಾತ್ಮಕ ಸಾಧನಗಳನ್ನು ಬಳಸಿ ಮತ್ತು ಎಚ್ಚರಿಕೆಯಿಂದ ಮಂಜುಗಡ್ಡೆ ಮೇಲೆ ತೆವಳುತ್ತ ಸಾಗಿ ಸಿಲುಕಿಕೊಂಡಿದ್ದ ಜಿಂಕೆಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವೀಡಿಯೊವನ್ನು ನವೆಂಬರ್ 27 ರಂದು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದುವರೆಗೂ 31 ಸಾವಿರಕ್ಕೂ ಹೆಚ್ಚು ಜನರು ವೀಕ್ಷಣೆ ಮತ್ತು 100 ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ. ಅನೇಕ ಜನರು ಅಗ್ನಿಶಾಮಕ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿಕ್ಲಿಕ್​ ಮಾಡಿ

ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ