
ಅಮೆರಿಕದ ಮಹಿಳೆಯೊಬ್ಬರು ತನ್ನ ಮಕ್ಕಳೊಂದಿಗೆ ದೆಹಲಿ ಬಿಟ್ಟು, ಬೆಂಗಳೂರಿಗೆ ಬಂದಿರುವ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಇವರು ಹಂಚಿಕೊಂಡಿರುವ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೆಹಲಿಯ ವಾತಾವರಣದಲ್ಲಿ (Delhi Air Pollution) ಬದಲಾವಣೆ ಆಗಿದೆ. ರಾಷ್ಟ್ರರಾಜಧಾನಿಯಲ್ಲಿ ವಿಪರೀತ ವಾಯುಮಾಲಿನ್ಯ ಉಂಟಾಗಿದ್ದು, ಅಲ್ಲಿನ ಕೆಲವು ಭಾಗದ ಜನರಿಗೆ ಉಸಿರಾಡಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯನ್ನು ತಿಳಿದು ಈ ಮಹಿಳೆ ದೆಹಲಿಯನ್ನು ತ್ಯಜಿಸಿ, ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಗಾಳಿಯ ಗುಣಮಟ್ಟ ಕಳಪೆಯಾಗಿರುವುದರಿಂದ ತನ್ನ ಅವಳಿ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ದೆಹಲಿಯನ್ನು ತೊರೆದಿರುವುದಾಗಿ ಮಹಿಳೆ ಈ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಹೀಗೆ ಹೇಳಿಕೊಂಡಿದ್ದಾರೆ. “ನನ್ನ ಅವಳಿ ಮಕ್ಕಳೊಂದಿಗೆ ನಾನು ಮೂರು ವರ್ಷಗಳಿಂದ ದೆಹಲಿಯಲ್ಲಿ ವಾಸಿಸುತ್ತಿದ್ದೆ. ಆದರೆ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾತಾವರಣ ತುಂಬಾ ಹದಗೆಡುತ್ತಿದೆ. ಈ ಹಿಂದೆ ದೆಹಲಿ ವಾತಾವರಣ ತುಂಬಾ ಇಷ್ಟವಾಗಿತ್ತು. ಇತ್ತೀಚಿಗಿನ ದಿನಗಳಲ್ಲಿ ಅಲ್ಲಿ ಉಸಿರಾಡಲು ಕಷ್ಟವಾಗುತ್ತಿದೆ. ಇದು ನನ್ನ ಮಕ್ಕಳ ಮೇಲೆ ಪರಿಣಾಮವನ್ನು ಉಂಟು ಮಾಡಬಹುದು. ನಾನು ದೆಹಲಿಯ ನಗರಗಳನ್ನು ಪ್ರೀತಿಸುತ್ತೇನೆ. ಇಲ್ಲಿ ಶೇಕಾಡ 70ರಷ್ಟು ಸಮಯ ಉತ್ತಮವಾಗಿರುತ್ತದೆ. ಆದರೆ ಚಳಿಗಾಲದಲ್ಲಿ ವಿಷಕಾರಿ ಮತ್ತು ಅಪಾಯಕಾರಿ ವಾತಾವರಣಕ್ಕೆ ಬದಲಾಗುತ್ತದೆ. ಅದಕ್ಕಾಗಿ ಈ ಬಾರಿ ಅಮೆರಿಕಕ್ಕೆ ಹೋದವಳು, ಮತ್ತೆ ಬಂದದ್ದು ಬೆಂಗಳೂರು ನಗರಕ್ಕೆ” ಎಂದು ಡಾನಾ ಮೇರಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಭಾರತದ ಮೇಲೆ ದಾಳಿ ಮಾಡಲಿದೆ ಚೀನಾ, ಪಾಕ್: ಅಚ್ಚರಿ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್
ಈ ಪೋಸ್ಟ್ ದೆಹಲಿಯಲ್ಲಿ ವಾತಾವರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದೆ. ಕಳೆದ 25 ವರ್ಷಗಳಿಂದ ಇದು ಹಾಗೆಯೇ ಇದೆ ಎಂದು ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ವ್ಯಕ್ತಿ, ನಾನು ಎಂಟು ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ಆದರೆ ನನ್ನ ಕುಟುಂಬ ದೆಹಲಿಯಲ್ಲಿ ಅದೇ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿರುವ ಪ್ರತಿಯೊಬ್ಬ ಪೋಷಕರು ನಿಮ್ಮಂತೆ ಯೋಚನೆ ಮಾಡಿದ್ರೆ ಖಂಡಿತ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಬಹುದು, ಆದರೆ ಅವರು ಸ್ವಾರ್ಥಿಗಳು ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ