Video: ವಿಮಾನ ನಿಲ್ದಾಣದಲ್ಲಿ ಸಿಪಿಆರ್ ಮೂಲಕ ವ್ಯಕ್ತಿಯ ಜೀವ ಉಳಿಸಿದ ಸಿಐಎಸ್ಎಫ್ ಅಧಿಕಾರಿ

|

Updated on: Aug 22, 2024 | 5:06 PM

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದುಬಿದ್ದಿದ್ದು ಅಲ್ಲೇ ಕರ್ತವ್ಯದಲ್ಲಿದ್ದ ಸಿಐಎಸ್ಎಫ್ ಅಧಿಕಾರಿಗಳು ಸಿಪಿಆರ್ ಮೂಲಕ ವ್ಯಕ್ತಿಯ ಜೀವ ಉಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಭಾರೀ ವೈರಲ್​ ಆಗಿದೆ.

ದೆಹಲಿ: ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಏಕಾಏಕಿ ಹೃದಯ ಸ್ತಂಭನದಿಂದ ಕುಸಿದುಬಿದ್ದಿದ್ದು ಅಲ್ಲೇ ಕರ್ತವ್ಯದಲ್ಲಿದ್ದ ಸಿಐಎಸ್ಎಫ್ ಅಧಿಕಾರಿಗಳು ಸಿಪಿಆರ್ ಮೂಲಕ ವ್ಯಕ್ತಿಯ ಜೀವ ಉಳಿಸಿದ್ದಾರೆ. ಈ ಘಟನೆ ಮಂಗಳವಾರ, ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ವರದಿಯ ಪ್ರಕಾರ, ಆಗಸ್ಟ್ 20 ರಂದು ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಶ್ರೀನಗರಕ್ಕೆ ಹೋಗುವ ವಿಮಾನದಲ್ಲಿ ಪ್ರಯಾಣಿಸಲು ಅರ್ಷಿದ್ ಅಯೂಬ್ ಎಂಬ ವ್ಯಕ್ತಿ ಕಾಯುತ್ತಿದ್ದಾಗ ಅಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸಿಐಎಸ್ಎಫ್ ಅಧಿಕಾರಿಗಳು ತಕ್ಷಣ ಸಿಪಿಆರ್ ಮಾಡಿದ್ದು ನಂತರ, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಾಗಿ ಆತನನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ಆರಾಮವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವರದಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ