AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

Cab Driver : ನಾನಿನ್ನೂ ಸಂಸ್ಕೃತ ಕಲಿಯದಿರುವುದು ಅವಮಾನ ಎನ್ನಿಸುತ್ತಿದೆ, ಸದ್ಯದಲ್ಲೇ ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಈ ವಿಡಿಯೋ ನೋಡಿದ ಒಬ್ಬರು. ಪೂಜೆ ನಡೆಯುತ್ತಿದೆ ಎಂಬು ಭಾಸವಾಗುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್
Delhi cab driver talks to passenger in Sanskrit.
TV9 Web
| Edited By: |

Updated on: Nov 17, 2022 | 10:09 AM

Share

Viral Video : ಈ ಹಿಂದೆ ಬೆಂಗಳೂರಿನ ಗಲ್ಲಿ ಕ್ರಿಕೆಟ್​​ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ದೆಹಲಿಯ ಕ್ಯಾಬ್​ ಡ್ರೈವರ್ ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ವಿಡಿಯೋ ಇದೀಗ ವೈರಲ್ ಆಗಿದೆ. ಕ್ಯಾಬನ್ನು ಏರಿದ ಪ್ರಯಾಣಿಕರು ಈತನ ವಿವರವನ್ನು ಸಂಸ್ಕೃತದಲ್ಲಿಯೇ ಕೇಳುತ್ತ ಹೋಗುತ್ತಾರೆ. ಆತ ಸಂಸ್ಕೃತದಲ್ಲಿಯೇ ಉತ್ತರಿಸುತ್ತ ಹೋಗುತ್ತಾನೆ. ನವೆಂಬರ್ 10ರಂದು ಈ ವಿಡಿಯೋ ಟ್ವೀಟ್ ಮಾಡಲಾಗಿದೆ. 2.6 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. 11,000ಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್​ ಬಳಿ ಹೋಗುತ್ತಿರುವಾಗ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ. ಉತ್ತರ ಪ್ರದೇಶದ ಮೂಲದ ಅಶೋಕ ತನ್ನ ಕುಟುಂಬದ ಸದಸ್ಯರ ಬಗ್ಗೆ ಪ್ರಯಾಣಿಕನಿಗೆ ತಿಳಿಸುತ್ತಾನೆ. ಈ ವಿಡಿಯೋ ನೋಡಿದ ಅನೇಕರಿಗೆ ಸಂಸ್ಕೃತ ಕಲಿಯುವ ಉಮೇದು ಬಂದಿದೆ.

ನಾನಿನ್ನೂ ಸಂಸ್ಕೃತ ಕಲಿಯದಿರುವುದು ನನ್ನ ಬಗ್ಗೆ ನನಗೆ ಅವಮಾನ ಎನ್ನಿಸುತ್ತಿದೆ. ಸದ್ಯದಲ್ಲೇ ನಾನು ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಒಬ್ಬರು. ಬಹಳ ಸುಂದರವಾದ ಸಂಭಾಷಣೆ ಎಂದಿದ್ದಾರೆ ಇನ್ನೊಬ್ಬರು. ಈ ಸಾಮಾನ್ಯವಾದ ಸಂಭಾಷಣೆಯೂ ಒಂದು ಪೂಜಾ ಸಂದರ್ಭದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮಗದೊಬ್ಬರು. ಇದು ಕಿವಿಗೆ ತಂಪನ್ನೀಯುತ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ