Viral: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ದೈತ್ಯ ಕಾಳಿಂಗ ಸರ್ಪ; ರಕ್ಷಣಾ ಕಾರ್ಯ ಹೇಗಿತ್ತು ನೋಡಿ

ದೆಹಲಿಯ ಚಾಣಕ್ಯಪುರಿಯ ಬಿಹಾರ ಭವನದ ಸಮೀಪದ ಮರವೊಂದರಲ್ಲಿ ಭಾರೀ ಗಾತ್ರದ ದೈತ್ಯ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಈ ಭಾರೀ ಗಾತ್ರದ ವಿಷ ಸರ್ಪ ಕಾಣಿಸಿಕೊಂಡಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ದೈತ್ಯ ಕಾಳಿಂಗ ಸರ್ಪ; ರಕ್ಷಣಾ ಕಾರ್ಯ ಹೇಗಿತ್ತು ನೋಡಿ
ವೈರಲ್​​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 04, 2024 | 2:23 PM

ಇತ್ತೀಚಿನ ದಿನಗಳಲ್ಲಿ ವಿಷಕಾರಿ ಸರ್ಪಗಳು, ಕಾಡು ಪ್ರಾಣಿಗಳು ಕಾಡನ್ನು ಬಿಟ್ಟು ನಾಡಿನ ಕಡೆಗೆ ಲಗ್ಗೆ ಇಡುವುದು ಸಾಮಾನ್ಯವಾಗಿಬಿಟ್ಟಿದೆ. ಅದರಲ್ಲೂ ಈ ಕಾಳಿಂಗ ಸರ್ಪಗಳು ಆಹಾರವನ್ನರಸುತ್ತಾ ಜನವಸತಿ ಪ್ರದೇಶಗಳ ಕಡೆಗೆ ಬರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ದೆಹಲಿ ನಗರದಲ್ಲೂ ಇದೇ ಮೊದಲ ಬಾರಿಗೆ 10 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಈ ವಿಷ ಸರ್ಪದ ರಕ್ಷಣಾ ಕಾರ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ದೆಹಲಿಯ ಚಾಣಕ್ಯಪುರಿಯ ಬಿಹಾರ ಭವನದ ಮರವೊಂದರಲ್ಲಿ ಈ ದೈತ್ಯ ಹಾವು ಕಾಣಿಸಿಕೊಂಡಿದ್ದು, ಕೆಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಇಂತಹ ದೈತ್ಯ ಹಾವು ಕಾಣಿಸಿಕೊಂಡಿದ್ದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲೇ ಪಕ್ಕದಲ್ಲಿ ಉತ್ತರಾಖಂಡ ಭವನ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಉತ್ತರಾಖಂಡದಿಂದ ಕೆಲವೊಂದು ನಿರ್ಮಾಣ ಸಾಮಾಗ್ರಿಗಳನ್ನು ಈ ಕಟ್ಟಡದ ನಿರ್ಮಾಣಕ್ಕೆ ತರಲಾಗಿದೆ. ಬಹುಶಃ ಈ ಸಾಮಾಗ್ರಿಗಳನ್ನು ಸಾಗಿಸುವ ವಾಹನದಲ್ಲಿ ಈ ದೈತ್ಯ ಕಾಳಿಂಗ ಸರ್ಪ ಇಲ್ಲಿಗೆ ಬಂದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಮೈಸೂರು ಅರಮನೆಯ ಗುಮ್ಮಟದಲ್ಲಿ ಕೆಂಪು ಬಣ್ಣದ ದೀಪ ಉರಿಯುವುದನ್ನು ಏಕೆ ಗೊತ್ತಾ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಅಭಿಷೇಕ್‌ ನಯನ್ (Abhisheknayan81)‌ ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರದಲ್ಲಿ ನೇತಾಡುತ್ತಿದ್ದ 10 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಚೀಲಕ್ಕೆ ತುಂಬಿಸುವಂತಹ ದೃಶ್ಯವನ್ನು ಕಾಣಬಹುದು. ಹೈಡ್ರಾಲಿಕ್‌ ಏಣಿಯನ್ನು ಬಳಸಿಕೊಂಡು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರದಲ್ಲಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಪ್ರಸ್ತುತ ಈ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ರಕ್ಷಣಾ ಕೇಂದ್ರದಲ್ಲಿ ಇರಿಸಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ