AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26ರ ಯುವಕನ ಹೊಟ್ಟೆಯೊಳಗಿತ್ತು 39 ನಾಣ್ಯ ಹಾಗೂ 37 ಆಯಸ್ಕಾಂತಗಳು

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ತನ್ನ ದೇಹದಾರ್ಢ್ಯಕ್ಕಾಗಿ 39 ನಾಣ್ಯಗಳನ್ನು ಮತ್ತು 39 ಆಯಸ್ಕಾಂತಗಳನ್ನು ಏಕಕಾಲದಲ್ಲಿ ನುಂಗಿದ್ದನು ಎಂದು ತಿಳಿದುಬಂದಿದೆ. ಈ ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

26ರ ಯುವಕನ  ಹೊಟ್ಟೆಯೊಳಗಿತ್ತು 39 ನಾಣ್ಯ ಹಾಗೂ 37 ಆಯಸ್ಕಾಂತಗಳು
26ರ ಯುವಕನ ಯುವಕನ ಹೊಟ್ಟೆಯೊಳಗಿತ್ತು 39 ನಾಣ್ಯ ಹಾಗೂ 37 ಆಯಸ್ಕಾಂತImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 27, 2024 | 6:38 PM

Share

ದೆಹಲಿಯ 26 ವರ್ಷದ ಯುವಕ 20 ದಿನಗಳ ಹಿಂದೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಆತ ಆಹಾರ ಹಾಗೂ ನೀರು ತೆಗೆದುಕೊಳ್ಳಲು ಸಾಧ್ಯವಾಗದಂತಹ ಪರಿಸ್ಥಿತಿಗೆ ಬಂದು ತಲುಪಿದ್ದ. ಇತನ ಸ್ಥಿತಿ ಗಮನಿಸಿದ ಪೋಷಕರು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈತನ ಸ್ಥಿತಿ ಗಮನಿಸಿದ ವೈದ್ಯರು ಯುವಕನನ್ನು ಪರೀಕ್ಷೆ ನಡೆಸಿದ್ದಾರೆ. ಸ್ಕ್ಯಾನಿಂಗ್​​​​ ವೇಳೆ ಆತನ ಹೊಟ್ಟೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಮತ್ತು ಆಯಸ್ಕಾಂತಗಳು ಇರುವುದು ಪತ್ತೆಯಾಗಿದೆ. ಬಳಿಕ ತಡ ಮಾಡದೆ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಆತನ ಹೊಟ್ಟೆಯಿಂದ 39 ನಾಣ್ಯಗಳು ಹಾಗೂ 37 ಆಯಸ್ಕಾಂತಗಳನ್ನು ಹೊರತೆಗೆಯಲಾಗಿದೆ.

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ತನ್ನ ದೇಹದಾರ್ಢ್ಯಕ್ಕಾಗಿ 39 ನಾಣ್ಯಗಳನ್ನು ಮತ್ತು 39 ಆಯಸ್ಕಾಂತಗಳನ್ನು ಏಕಕಾಲದಲ್ಲಿ ನುಂಗಿದ್ದನು ಎಂದು ತಿಳಿದುಬಂದಿದೆ. ಈ ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಶಸ್ತ್ರ ಚಿಕಿತ್ಸೆಯ ವೇಳೆ ಯುವಕನ ಹೊಟ್ಟೆಯಿಂದ ಒಂದು, ಎರಡು ಮತ್ತು ಐದು ರೂಪಾಯಿ ನಾಣ್ಯಗಳು ಸೇರಿದಂತೆ ನಕ್ಷತ್ರ, ಬುಲೆಟ್ ಮತ್ತು ತ್ರಿಕೋನ ಆಕಾರದ ಆಯಸ್ಕಾಂತಗಳನ್ನು ಹೊರತೆಗೆಯಲಾಗಿದೆ. ಆತ ನುಂಗಿದ್ದ ಅಷ್ಟೂ ವಸ್ತುಗಳನ್ನು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಯುವಕ ಚೇತರಿಸಿಕೊಳ್ಳುತ್ತಿದ್ದು, ಸತುವು ಆತನ ದೇಹ ರಚನೆಗೆ ಸಹಾಯ ಮಾಡುತ್ತದೆ ಎಂಬ ನಂಬಿ ನಾಣ್ಯ ಮತ್ತು ಆಯಸ್ಕಾಂತಗಳನ್ನು ನುಂಗಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Tue, 27 February 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ