ದೆಹಲಿಯ 26 ವರ್ಷದ ಯುವಕ 20 ದಿನಗಳ ಹಿಂದೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಆತ ಆಹಾರ ಹಾಗೂ ನೀರು ತೆಗೆದುಕೊಳ್ಳಲು ಸಾಧ್ಯವಾಗದಂತಹ ಪರಿಸ್ಥಿತಿಗೆ ಬಂದು ತಲುಪಿದ್ದ. ಇತನ ಸ್ಥಿತಿ ಗಮನಿಸಿದ ಪೋಷಕರು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈತನ ಸ್ಥಿತಿ ಗಮನಿಸಿದ ವೈದ್ಯರು ಯುವಕನನ್ನು ಪರೀಕ್ಷೆ ನಡೆಸಿದ್ದಾರೆ. ಸ್ಕ್ಯಾನಿಂಗ್ ವೇಳೆ ಆತನ ಹೊಟ್ಟೆಯಲ್ಲಿ ಅಪಾರ ಪ್ರಮಾಣದ ನಾಣ್ಯಗಳು ಮತ್ತು ಆಯಸ್ಕಾಂತಗಳು ಇರುವುದು ಪತ್ತೆಯಾಗಿದೆ. ಬಳಿಕ ತಡ ಮಾಡದೆ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಆತನ ಹೊಟ್ಟೆಯಿಂದ 39 ನಾಣ್ಯಗಳು ಹಾಗೂ 37 ಆಯಸ್ಕಾಂತಗಳನ್ನು ಹೊರತೆಗೆಯಲಾಗಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ತನ್ನ ದೇಹದಾರ್ಢ್ಯಕ್ಕಾಗಿ 39 ನಾಣ್ಯಗಳನ್ನು ಮತ್ತು 39 ಆಯಸ್ಕಾಂತಗಳನ್ನು ಏಕಕಾಲದಲ್ಲಿ ನುಂಗಿದ್ದನು ಎಂದು ತಿಳಿದುಬಂದಿದೆ. ಈ ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು
ಶಸ್ತ್ರ ಚಿಕಿತ್ಸೆಯ ವೇಳೆ ಯುವಕನ ಹೊಟ್ಟೆಯಿಂದ ಒಂದು, ಎರಡು ಮತ್ತು ಐದು ರೂಪಾಯಿ ನಾಣ್ಯಗಳು ಸೇರಿದಂತೆ ನಕ್ಷತ್ರ, ಬುಲೆಟ್ ಮತ್ತು ತ್ರಿಕೋನ ಆಕಾರದ ಆಯಸ್ಕಾಂತಗಳನ್ನು ಹೊರತೆಗೆಯಲಾಗಿದೆ. ಆತ ನುಂಗಿದ್ದ ಅಷ್ಟೂ ವಸ್ತುಗಳನ್ನು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಯುವಕ ಚೇತರಿಸಿಕೊಳ್ಳುತ್ತಿದ್ದು, ಸತುವು ಆತನ ದೇಹ ರಚನೆಗೆ ಸಹಾಯ ಮಾಡುತ್ತದೆ ಎಂಬ ನಂಬಿ ನಾಣ್ಯ ಮತ್ತು ಆಯಸ್ಕಾಂತಗಳನ್ನು ನುಂಗಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 6:36 pm, Tue, 27 February 24