AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲಿ ತನ್ನ ಮೇಲೆ ಚಾರ್ಜರ್ ಬಿದ್ದಿದ್ದಕ್ಕೆ ಸಹಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ ವೃದ್ಧ

ದೆಹಲಿ ಮೆಟ್ರೋದಲ್ಲಿ ನಡೆದ ವಿಚಿತ್ರ ಘಟನೆಯೊಂದು ವೈರಲ್ ಆಗಿದೆ. ಜನಸಂದಣಿಯ ನಡುವೆ ಫೋನ್ ಚಾರ್ಜ್ ಮಾಡುವಾಗ, ಚಾರ್ಜರ್ ಆಕಸ್ಮಿಕವಾಗಿ ಹಿರಿಯ ನಾಗರಿಕರೊಬ್ಬರ ಮೇಲೆ ಬಿದ್ದಿದೆ. ಕ್ಷಮೆ ಕೇಳಿದರೂ ವೃದ್ಧ ವ್ಯಕ್ತಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಹಿರಿಯರ ವರ್ತನೆ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಮೆಟ್ರೋದಲ್ಲಿ ತನ್ನ ಮೇಲೆ ಚಾರ್ಜರ್ ಬಿದ್ದಿದ್ದಕ್ಕೆ ಸಹಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ ವೃದ್ಧ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 13, 2025 | 5:51 PM

Share

ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋದಲ್ಲಿ ಆಗುವ ಕೆಲವೊಂದು ವಿಚಿತ್ರ ಘಟನೆಗಳು ವೈರಲ್​​ ಆಗುತ್ತ ಇರುತ್ತದೆ. ಅದರಲ್ಲೂ ಈ ದೆಹಲಿ ಹಾಗೂ ಬೆಂಗಳೂರು ಮೆಟ್ರೋದಲ್ಲಿ ಇಂತಹ ಘಟನೆಗಳು ಪ್ರತಿದಿನ ನಡೆಯುತ್ತ ಇರುತ್ತದೆ. ಇದೀಗ ದೆಹಲಿ ಮೆಟ್ರೋದಲ್ಲಿ (Delhi Metro) ನಡೆದ ಘಟನೆಯೊಂದನ್ನು ವ್ಯಕ್ತಿಯೊಬ್ಬರು ತುಂಬಾ ಬೇಸರದಿಂದ ರೆಡ್ಡಿಟ್​​ನಲ್ಲಿ ಹಂಚಿಕೊಂಡಿದ್ದಾರೆ. ದೆಹಲಿ ಮೆಟ್ರೋದಲ್ಲಿ ಜನಸಂದಣಿ ಆಗುವುದು ಸಾಮಾನ್ಯ, ಏಕೆಂದರೆ ಸುಮಾರು ಜನ ಮೆಟ್ರೋವನ್ನು ಅವಲಂಬಿಸಿರುತ್ತಾರೆ. ಹೀಗೆ ಮೆಟ್ರೋದಲ್ಲಿ ಪ್ರಯಾಣಿಕರೊಬ್ಬರು ಜನದಟ್ಟನೆ ನಡುವೆ ಫೋನ್​​ ಚಾರ್ಜ್​​ ಮಾಡಲು ಹಾಕಿದ್ದಾರೆ. ಈ ವೇಳೆ ಚಾರ್ಜರ್​​ ತಪ್ಪಿ ಅಲ್ಲೇ ಕುಳಿತಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಬಿದ್ದಿದೆ. ಇದರಿಂದ ಕೋಪಗೊಂಡು ಆ ವ್ಯಕ್ತಿ ಕಪಾಳಮೋಕ್ಷ ಮಾಡಿದ್ದಾರೆ. ಇದೀಗ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ನೆಟ್ಟಿಗರು ಹಿರಿಯ ನಾಗರಿಕರ ವರ್ತನೆಯನ್ನು ಖಂಡಿಸಿದ್ದಾರೆ.

ರೆಡ್ಡಿಟ್​​ನಲ್ಲಿ ಹಂಚಿಕೊಂಡ ಪೋಸ್ಟ್​​​ನಲ್ಲಿ ಹೀಗೆ ಹೇಳಿಕೊಳ್ಳಲಾಗಿದೆ. “ನಾನು ಪ್ರಯಾಣಿಸಿದ ಮೆಟ್ರೋ ಜನರಿಂದ ತುಂಬಿ ತುಳುಕುತ್ತಿತ್ತು. ಒಂದು ಕಡೆ ಫೋನ್​​ನಲ್ಲಿ ಚಾರ್​ಜ್​​ ಕೂಡ ಇರಲಿಲ್ಲ. ಮೆಟ್ರೋದ ಚಾರ್ಜ್​​ ಪಾಯಿಂಟ್​​​ನಲ್ಲಿ ಫೋನ್​​​​ ಚಾರ್ಜ್​ ಹಾಕಲು ಹೋದೆ, ಅಲ್ಲೇ ಪಕ್ಕದಲ್ಲಿ ಕುಳಿತಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ನನ್ನ ಚಾರ್ಜರ್​​ ಬಿತ್ತು. ನಾನು ಕ್ಷಮಿಸಿ ಸರ್​ ಎಂದು ಹೇಳಿದ್ರು, ಮೆಟ್ರೋದಲ್ಲಿ ಅಷ್ಟು ಜನರ ಮುಂದೆ ಕಪಾಳಮೋಕ್ಷ ಮಾಡಿದ್ದಾರೆ. ನಾನು ಕೂಡ ಕೋಪದಲ್ಲಿ ಏನಾಯಿತು ನಿಮಗೆ ಎಂದು ಏರು ಧ್ವನಿಯಲ್ಲಿ ಕೇಳಿದೆ, ಆಗಾ ಮತ್ತೊಬ್ಬ ಪ್ರಯಾಣಿಕರು ಮಧ್ಯಪ್ರವೇಶಿಸಿ, ನನ್ನನ್ನು ಬೇರೆ ಕಡೆ ಕಳಿಸಿದರು. ಒಂದೇ ವೇಳೆ ನಾನು ಅವರ ವಯಸ್ಸು ನೋಡದೇ ತಿರುಗಿಸಿ ಹೊಡೆದಿದ್ದರೆ ಏನಾಗುತ್ತಿತ್ತು. ಅಷ್ಟಕ್ಕೂ ನನ್ನ ತಪ್ಪಿನ ಬಗ್ಗೆ ಅರಿವು ಇದೆ. ಅದಕ್ಕೆ ನಾನು ಕ್ಷಮೆಯನ್ನು ಕೇಳಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೆಳತಿಯ ಪೋಷಕರನ್ನು ಮೆಚ್ಚಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Got slapped in the metro. AITA? byu/Extra_Attention_5506 indelhi

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ಹೀಗಿತ್ತು?

ನೀವು ಕ್ಷಮೆ ಕೇಳಿದ ನಂತರ ಅವರು ಹೇಗೆ ಕೈ ಮಾಡಿದ್ರು, ಹಿರಿಯರ ನಾಗರಿಕರು ಕಪಾಳಮೋಕ್ಷ ಮಾಡಲು ಉಚಿತ ಪಾಸ್​​ ತೆಗೆದುಕೊಂಡಿರಬೇಕು ಎಂದು ಒಬ್ಬ ನೆಟ್ಟಿಗ ಕಮೆಂಟ್​​ ಮಾಡಿದ್ದಾರೆ. ಮತ್ತೊಬ್ಬರು ಈ ವರ್ತನೆ ಸ್ವೀಕಾರಾರ್ಹವಲ್ಲ, ಹಿರಿಯರು ತಮ್ಮ ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಬೇಕು. ಇದು ಮೆಟ್ರೋದಲ್ಲಿ ಮಾತ್ರವಲ್ಲ, ಬಸ್​​​​, ರೈಲು, ವಿಮಾನದಲ್ಲೂ ಇಂತಹ ಘಟನೆಗಳು ನಡೆಯುತ್ತದೆ ಎಂದು ಮತ್ತೊಬ್ಬರು ವಿವರಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ