AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬುಲೆಟ್ ಏರಿ ನಡು ರಸ್ತೆಯಲ್ಲಿ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಹಾಕಿದ ದಂಡ ಎಷ್ಟು ಗೊತ್ತಾ? 

ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯಕ್ಕೆ ರೀಲ್ಸ್ ಹುಚ್ಚು ಹಿಡಿದಿದೆ. ರೀಲ್ಸ್ ಮಾಡಲು ಏನೋನೋ ಸರ್ಕಸ್ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಬುಲೆಟ್ ಏರಿ ನಡು ರಸ್ತೆಯಲ್ಲಿ ರೀಲ್ಸ್ ಮಾಡುವ ಭರದಲ್ಲಿ ಟ್ರಾಫಿಕ್ ನಿಮಯವನ್ನೇ ಉಲ್ಲಂಘನೆ ಮಾಡಿದ್ದಾನೆ. ಈತನ ರೀಲ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದನ್ನು ಗಮನಿಸಿದ  ದೆಹಲಿ ಪೊಲೀಸರು ಆತನಿಗೆ ದಂಡ ವಿಧಿಸಿದ್ದು ಮಾತ್ರವಲ್ಲದೆ, ಆತನ ಬುಲೆಟ್ ಬೈಕ್ ಮತ್ತು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ.

Viral Video: ಬುಲೆಟ್ ಏರಿ ನಡು ರಸ್ತೆಯಲ್ಲಿ ರೀಲ್ಸ್ ಮಾಡಿದ ಯುವಕನಿಗೆ ಪೊಲೀಸರು ಹಾಕಿದ ದಂಡ ಎಷ್ಟು ಗೊತ್ತಾ? 
ಮಾಲಾಶ್ರೀ ಅಂಚನ್​
| Edited By: |

Updated on: Apr 03, 2024 | 4:33 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋದು ಹೊಸ ಟ್ರೆಂಡ್ ಆಗಿ ಪರಿಣಮಿಸಿದೆ. ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಹೌದು ರೈಲು, ಮೆಟ್ರೋ, ರಸ್ತೆ  ಇತ್ಯಾದಿ ಸಾವರ್ಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ಕೊಡುವವರ ಸಂಖ್ಯೆ ತೀರಾ ಹೆಚ್ಚಾಗಿದೆ. ಈ ಬಗ್ಗೆ ಆಗಾಗ್ಗೆ ಟೀಕೆ ಟಿಪ್ಪಣಿಗಳು ಸಹ  ಕೇಳಿಬರುತ್ತಿರುತ್ತವೆ. ಅದೇ ರೀತಿ ಇಲ್ಲೊಬ್ಬ ಯುವಕ ಬುಲೆಟ್ ಏರಿ ನಡು ರಸ್ತೆಯಲ್ಲಿ ರೀಲ್ಸ್ ಮಾಡಿ ಆ ರೀಲ್ಸ್ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ದಕ್ಕಾಗಿ ದೆಹಲಿ ಪೊಲೀಸರು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ.  ಆತನಿಗೆ ದಂಡ ವಿಧಿಸಿದ್ದು ಮಾತ್ರವಲ್ಲದೆ ಆತನ ಬುಲೆಟ್ ಮತ್ತು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಯುವಕ ಬುಲೆಟ್ ಏರಿ ನಡು ರಸ್ತೆಯಲ್ಲಿ ರೀಲ್ಸ್ ಮಾಡುವ ಭರದಲ್ಲಿ ಟ್ರಾಫಿಕ್ ನಿಯಮಗಳನ್ನು ಮುರಿದಿದ್ದಾನೆ ಹೌದು ಆತ ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸಿರಲಿಲ್ಲ, ಜೊತೆಗೆ ರಾಂಗ್ ಸೈಡ್ ಅಲ್ಲಿ ಬೈಕ್ ಚಲಾಯಿಸಿದ್ದಾನೆ. ಇದನ್ನು ಗಮನಿಸಿದ ದೆಹಲಿ ಪೊಲೀಸ್ ಆತನ ವಿರುದ್ಧ ಕ್ರಮ ಕೈಗೊಂಡಿದ್ದು, ಮೋಟಾರು ವಾಹನ ಕಾಯ್ದೆಯ ವಿವಿಧ ಸೆಕ್ಷೆನ್ ಗಳ ಅಡಿಯಲ್ಲಿ ಆತನಿಗೆ ದಂಡ ವಿಧಿಸಿದ್ದಾರೆ. ಆತನ ಬುಲೆಟ್ ಮತ್ತು ಮೊಬೈಲ್ ಫೋನ್ ಅನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೆ ಆತನ ಇನ್ಸ್ಟಾಗ್ರಾಮ್ ಖಾತೆಯನ್ನು ನಿರ್ಬಂಧಿಸುವ ಪ್ರಕ್ರಿಯೆಯು ಆರಂಭವಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸ್  (@DelhiPolice)  ಈ ಬಗ್ಗೆ ಅಧೀಕೃತ ಎಕ್ಸ್  ಖಾತೆಯಲ್ಲಿ  ಮಾಹಿತಿಯನ್ನು ಹಂಚಿಕೊಂಡಿದ್ದು,  “ಮೋಟಾರು ವಾಹನ ಕಾಯ್ದೆ ಉಲ್ಲಂಘಿಸಿದ ರೀಲ್ಸ್ ಮಾಡುವ ಯುವಕನ ವಿರುದ್ಧ ದೆಹಲಿ ಪೊಲೀಸ್ ಕಠಿಣ ಕ್ರ ತೆಗೆದು ಕೊಂಡಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​​ ವಿಡಿಯೋ ಇಲ್ಲದೆ:

ವೈರಲ್ ವಿಡಿಯೋದಲ್ಲಿ ಯುವಕನೊಬ್ಬ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿ ನಡುರಸ್ತೆಯಲ್ಲಿ ರೀಲ್ಸ್ ಮಾಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆತನನ್ನು ವಿಚಾರಣೆಗೆ ಒಳಪಡಿಸಿ, ಆತನ ಬುಲೆಟ್ ಅನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮುರಿದ ಕಬ್ಬಿಣದ ಗ್ರಿಲ್​ನಲ್ಲಿ ಮಕ್ಕಳಿಬ್ಬರ ತೂಗುಯ್ಯಾಲೆ ಆಟ; ವೈರಲ್ ಆಯ್ತು ವಿಡಿಯೋ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅತ್ಯುತ್ತಮ ಕೆಲಸ, ರಸ್ತೆಯಲ್ಲಿ ರೀಲ್ಸ್ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ಕೊಡುವಂತವರಿಗೆ ಇದೊಂದು ಪಾಠವಾಗಬೇಕುʼ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ದೆಹಲಿ ಪೊಲೀಸರು ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ, ಅವರಿಗೆ ನಮ್ಮ ಧನ್ಯವಾದಗಳು ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ