ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಓರ್ವ ಸಾವು

|

Updated on: Dec 06, 2024 | 11:04 AM

ದೆಹಲಿಯ ಚಿನ್ಮಯ ವಿದ್ಯಾಲಯದಲ್ಲಿ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಭೀಕರ ಹೊಡೆದಾಟ ನಡೆದ ಪರಿಣಾಮ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ವಿದ್ಯಾರ್ಥಿನಿ ಸಾವಿನ ಬಗ್ಗೆ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಓರ್ವ ಸಾವು
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಭೀಕರ ಹೊಡೆದಾಟ ನಡೆದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಡಿಸೆಂಬರ್ 3ರ ಮಂಗಳವಾರ ಬೆಳಗ್ಗೆ ದೆಹಲಿಯ ಚಿನ್ಮಯ ವಿದ್ಯಾಲಯದಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದಿದ್ದು, ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಶಿಕ್ಷಕರು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ.

ಆದರೆ ಅದಾಗಲೇ ಇಬ್ಬರಿಗೂ ಸ್ವಲ್ಪ ಪೆಟ್ಟು ಬಿದ್ದಿದ್ದು, ಓರ್ವ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅದಾಗಲೇ ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕನ ಬಾಯಿಂದ ನೊರೆ ಬಂದಿದ್ದು, ಬಾಲಕನಿಗೆ ಸೆಳವು ಸಂಬಂಧಿತ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಶಂಕಿಸಿದ್ದಾರೆ.

ಇದನ್ನೂ ಓದಿ: 2024ರ ಕೊನೆಯಲ್ಲಿ ಮಾರಾಟವಾಗಲಿದೆ 5.10 ಲಕ್ಷ ಕೋಟಿ ಮೌಲ್ಯದ 3.05 ಲಕ್ಷ ಅಪಾರ್ಟ್‌ಮೆಂಟ್‌ಗಳು, ಇದರಲ್ಲಿ ಬೆಂಗಳೂರು ಒಂದು: ವರದಿ

ವಿದ್ಯಾರ್ಥಿನಿ ಸಾವಿನ ಬಗ್ಗೆ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏತನ್ಮಧ್ಯೆ, ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶಾಲೆಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:02 am, Fri, 6 December 24