AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​; ವಿಡಿಯೋ ವೈರಲ್​​

ಆರ್ಥಿಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಸತತ 10 ವರ್ಷಗಳ ಪ್ರಯತ್ನದ ನಂತರ ಯುವತಿ ಇದೀಗ ಸಿಎ ಪಾಸ್​​​ ಆಗಿದ್ದಾಳೆ. ಸ್ವತಹ ತನ್ನ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಈ ಕುರಿತು ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗಿದೆ.

Video Viral: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​;  ವಿಡಿಯೋ ವೈರಲ್​​
ಟೀ ಮಾರುತ್ತಿದ್ದ ವ್ಯಕ್ತಿಯ ಪುತ್ರಿ ಅಮಿತಾ ಪ್ರಜಾಪತಿ
Follow us
ಅಕ್ಷತಾ ವರ್ಕಾಡಿ
|

Updated on: Jul 24, 2024 | 11:14 AM

ದೆಹಲಿಯ ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಪುತ್ರಿ ಅಮಿತಾ ಪ್ರಜಾಪತಿ ಕಳೆದ ಹತ್ತು ವರ್ಷಗಳ ನಿರಂತರ ಪ್ರಯತ್ನದ ನಂತರ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಸತತ ಪ್ರಯತ್ನಗಳ ಬಳಿಕ ಮಗಳು ಸಿಎ ಪಾಸ್ ಆಗಿರುವ ಖುಷಿಗೆ ತಂದೆ ಭಾವುಕರಾಗಿದ್ದು, ಅಪ್ಪ ಮಗಳು ಪರಸ್ಪರ ತಬ್ಬಿಕೊಂಡು ಸಂಭ್ರವಿಸಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ.

ಯುವತಿ ತನ್ನ 10 ವರ್ಷಗಳ ಶ್ರಮದ ಪ್ರಯಾಣವನ್ನು ಇದೀಗ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಯುವತಿ ತನ್ನ ತಂದೆಯನ್ನು ತಬ್ಬಿಕೊಂಡು ತಾನು ಸಿಎ ಪಾಸ್​​ ಆಗಿರುವ ಸಂಭ್ರಮವನ್ನು ಹಂಚಿಕೊಳ್ಳುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

” ಈ ಒಂದು ಖುಷಿಯನ್ನು ಸಂಭ್ರಮಿಸಲು 10 ವರ್ಷಗಳು ಬೇಕಾಯಿತು. ಪ್ರತಿದಿನ, ನನ್ನ ಕಣ್ಣುಗಳಲ್ಲಿ ಕನಸುಗಳೊಂದಿಗೆ, ಇದು ಕೇವಲ ಕನಸೇ ಅಥವಾ ಇದು ಎಂದಾದರೂ ನನಸಾಗಬಹುದೇ ಎಂದು ನಾನು ನನ್ನನ್ನು ಕೇಳಿಕೊಳ್ಳುತ್ತಿದ್ದೆ. ಇಂದು ಅದು ನಿಜವಾಯಿತು. ಹೌದು, ಕನಸುಗಳು ನನಸಾಗಿದೆ” ಎಂದು ಪ್ರಜಾಪತಿ ತನ್ನ ಪೋಸ್ಟ್‌ನಲ್ಲಿ ಹೇಳಿದ್ದು, ಈ ಪೋಸ್ಟ್​​ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ