Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

ಮೇಲಿನ ಮಹಡಿಗೆ ಹೋಗಿ ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ನಾಯಿ ಮರಿ ನೇತಾಡುತ್ತಿರುವುದನ್ನು ಡೆಲಿವರಿ ಬಾಯ್ ಗಮನಿಸಿದ್ದಾನೆ. ಕುತ್ತಿಗೆಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ನಾಯಿ ಮರಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾನೆ.

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ
ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್
Follow us
TV9 Web
| Updated By: shruti hegde

Updated on: Nov 03, 2021 | 1:45 PM

ಲಿಫ್ಟ್​ನಲ್ಲಿ ಸಿಲುಕಿಕೊಂಡು ನೇತಾಡುತ್ತಾ ಒದ್ದಾಡುತ್ತಿದ್ದ ನಾಯಿ ಮರಿಯನ್ನು ಡೆಲಿವರಿ ಬಾಯ್ ರಕ್ಷಿಸಿದ್ದಾನೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಚೀನಾದಲ್ಲಿ ನಡೆದಿದೆ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಈ ಹೃದಯ ಸ್ಪರ್ಶಿ ವಿಡಿಯೊ ಸುಮಾರು 1 ಮಿಲಿಯನ್​ಗೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಮುದ್ದಾದ ನಾಯಿ ಮರಿಗೆ ಕುತ್ತಿಗೆ ಹಗ್ಗವನ್ನು ಕಟ್ಟಲಾಗಿದೆ. ನಾಯಿ ಮರಿ ತಾನಾಗಿಯೇ ಲಿಫ್ಟ್​ನೊಳಗೆ ಹೋಗಲು ನಿರ್ಧರಿಸಿದೆ. ಲಿಫ್ಟ್ ಬಾಗಿಲು ತೆಗೆಯುತ್ತಿದ್ದಂತೆಯೇ ನಾಯಿ ಮರಿ ಒಳಹೊಕ್ಕಿದೆ. ಬಾಗಿಲು ಮುಚ್ಚಿ ಲಿಫ್ಟ್ ಮೇಲಕ್ಕೆ ಹೋಗುತ್ತಿದ್ದಂತೆ ಬಾಗಿಲಿಗೆ ಸಿಲುಕಿಕೊಂಡಿದ್ದ ಹಗ್ಗ ಕೂಡಾ ಮೇಲಕ್ಕೇರಿದೆ. ನಾಯಿ ಮರಿ ನೇತಾಡುತ್ತಾ ಒದ್ದಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.ಮೇಲಿನ ಮಹಡಿಗೆ ಹೋಗಿ ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ನಾಯಿ ಮರಿ ನೇತಾಡುತ್ತಿರುವುದನ್ನು ಡೆಲಿವರಿ ಬಾಯ್ ಗಮನಿಸಿದ್ದಾನೆ. ಕುತ್ತಿಗೆಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ನಾಯಿ ಮರಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾನೆ.

ಘಟನೆ ಅಕ್ಟೋಬರ್ 23 ರಂದು ನಡೆದಿದ್ದು ಈ ದೃಶ್ಯ ಸಿಸಿಟಿಯಲ್ಲಿ ರೆಕಾರ್ಡ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಫುಲ್ ವೈರಲ್ ಆಗಿದೆ. ಭದ್ರತಾ ಸಿಬ್ಬಂದಿ ನಾಯಿ ಮರಿನ್ನು ಮಾಲೀಕರಿಗೆ ಹಿಂತಿರುಗಿಸಿದ್ದಾರೆ. ವೈರಲ್ ಆಗಿರುವ ವಿಡಿಯೊ ಸುಮಾರು 1.9 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನಾಯಿ ಮರಿಯ ಜೀವ ಉಳಿಸಿದ ವ್ಯಕ್ತಿಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ.

ಓರ್ವರು, ವ್ಯಕ್ತಿಯ ಶಾಂತತೆ ಮತ್ತು ತಾಳ್ಮೆಯ ಕೆಲಸಕ್ಕೆ ಶ್ಲಾಘಿಸಿದ್ದಾರೆ. ಇದು ತುಂಬಾ ಭಯಾನಕವಾಗಿದೆ, ಸ್ವಲ್ಪ ತಡವಾಗಿದ್ದರೂ ಸಹ ನಾಯಿ ಮರಿಯ ಪ್ರಾಣವೇ ಹಾರಿ ಹೋಗಿಬಿಡುತ್ತಿತ್ತು ಎಂದು ಹೇಳಿದ್ದಾರೆ. ಅದೃಷ್ಟವಶಾತ್ ಆ ವ್ಯಕ್ತಿ ಸಮಯಕ್ಕೆ ಸರಿಯಾಗಿ ಬಂದಿದ್ದಾರೆ, ನಾಯಿ ಮರಿಯ ಜೀವ ಉಳಿದಿದೆ ಎಂದು ಮತ್ತೋರ್ವರು ಹೇಳಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ನದಿಯಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

Viral News: ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ! ಹೃದಯಸ್ಪರ್ಶಿ ಸ್ಟೋರಿ ಓದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ