AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ ಬರೋಬ್ಬರಿ 4 ಲಕ್ಷ ರೂ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಕೊತ್ತಂಬರಿ ಸೊಪ್ಪು ತರ ಕಾಣುವ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ 4 ಲಕ್ಷ ರೂಪಾಯಿ.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ  ಬರೋಬ್ಬರಿ 4 ಲಕ್ಷ ರೂ.
ಅಕ್ಷತಾ ವರ್ಕಾಡಿ
|

Updated on:Nov 10, 2024 | 1:49 PM

Share

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ಯಾಗ್​ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಾಮಾನ್ಯವಾಗಿ ಈ ಬ್ಯಾಗ್​​ ನೋಡಿದಾಗ ಕೊತ್ತಂಬರಿ ಸೊಪ್ಪಿನ ರೀತಿಯಲ್ಲಿ ಕಾಣಿಸಬಹುದು. ಆದರೆ ಇದರ ಬೆಲೆ ಕೇಳಿದರೆ ನೀವು ಒಂದು ಕ್ಷಣ ದಂಗಾಗುವುದಂತೂ ಖಂಡಿತಾ. ಸದ್ಯ Moschino ಬ್ರ್ಯಾಂಡ್ ಇತ್ತೀಚಿನ ದಿನಗಳಲ್ಲಿ ತನ್ನ ಚಿತ್ರ ವಿಚಿತ್ರ ವಿನ್ಯಾಸದ ವಸ್ತುಗಳಿಂದಲೇ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಈ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ $4,470 ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸರಿಸುಮಾರು 4 ಲಕ್ಷ ರೂಪಾಯಿ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

View this post on Instagram

A post shared by Luxurious (@luxuriousbymm)

ಇದನ್ನೂ ಓದಿ: ಹಳೆ ಕಾರನ್ನು ಗುಜರಿಗೆ ಹಾಕುವ ಬದಲು ಅದ್ಧೂರಿಯಾಗಿ ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ

ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಈ ಬ್ಯಾಗನ್ನು ನಾನು ಕೇವಲ 10 ರೂ. ತಯಾರಿಸಬಲ್ಲೇ” ಎಂದು ಒಬ್ಬರು ಬರೆದರೆ, ಮತ್ತೊಬ್ಬರು “ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವಿಚಿತ್ರ ವಿನ್ಯಾಸ ವಸ್ತುಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Sun, 10 November 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್