ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೆಲ ತಿಂಗಳುಗಳ ಹಿಂದಷ್ಟೇ ತಮ್ಮ ಎರಡನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಎರಡೂ ಮಕ್ಕಳ ಕ್ಯೂಟ್ ಕ್ಯೂಟ್ ವಿಡಿಯೋಗಳನ್ನು ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡುತ್ತಿರುತ್ತಾರೆ. ಇದೀಗ ಮಗಳ ಮುದ್ದಾದ ಲಾಲಿ ಹಾಡಿನ ವಿಡಿಯೋವೊಂದನ್ನು ಹಂಚಿಕೊಂಡಿದ್ದು,ಆ್ಯಕ್ಷನ್ ಪ್ರಿನ್ಸ್ ಪುತ್ರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಸೆಪ್ಟೆಂಬರ್ 18 ರಂದು ಗಣೇಶ ಹಬ್ಬದಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದ ದಿನವೇ ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅವರು ತಮ್ಮ ಮಕ್ಕಳ ನಾಮಕರಣವನ್ನು ನೆರವೇರಿಸಿದ್ದರು. ಮಗಳಿಗೆ ‘ರುದ್ರಾಕ್ಷಿ ಡಿ ಸರ್ಜಾ’ ಹಾಗೂ ಮಗನಿಗೆ ‘ಹಯಗ್ರೀವ ಡಿ ಸರ್ಜಾ’ ಎಂದು ಮಕ್ಕಳಿಗೆ ನಾಮಕರಣ ಮಾಡಿದ್ದರು. ಇದೀಗಾ ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಈ ಹೆಡ್ ಪೋನ್ ಬೆಲೆ ಕೇಳಿದ್ರೆ ನೀವು ಶಾಕ್ ಆಗುವುದಂತೂ ಖಂಡಿತಾ
ವಿಡಿಯೋದಲ್ಲಿ ಹಯಗ್ರೀವ ತೊಟ್ಟಿಲ್ಲಲ್ಲಿ ಮಲಗಿರುವುದನ್ನು ಕಾಣಬಹುದು. ಮಗಳು ರುದ್ರಾಕ್ಷಿ ತೊಟ್ಟಿಲ ಬಳಿ ನಿಂತು ತಮ್ಮನಿಗೆ ಲಾಲಿ ಹಾಡಿ ಮಲಗಿಸುತ್ತಾ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.