AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ