AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!

Domino's India : ಈ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡೋಮಿನೋಸ್​ ಇಂಡಿಯಾ ಪ್ರತಿಕ್ರಿಯಿಸಿದೆ.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
ಎಂಥ ಶುಚಿ ಎಂಥ ರುಚಿ ಈ ಪಿಝಾ!
TV9 Web
| Edited By: |

Updated on: Aug 15, 2022 | 3:21 PM

Share

Domino’s Pizza : ರುಚಿಯಾದ ಪಿಝಾಗೆ ಮರುಳಾಗದವರು ಯಾರಿದ್ಧಾರೆ? ಈ ಇಟಾಲಿಯನ್ ತಿನಿಸಿನ ಬಗ್ಗೆ ಎಳೆಯರಿಂದ ಹಿಡಿದು ಮುದುಕರವರೆಗೂ ಒಮ್ಮೆ ಬಾಯಲ್ಲಿ ಚಿಲ್ ಎನ್ನುತ್ತದೆ. ಆದರೆ ಇಲ್ಲಿರುವ ಫೋಟೋ ನೋಡಿದ ಮೇಲೂ ನಿಮಗೆ ಪಿಝಾ ಬಗ್ಗೆ ಅಷ್ಟೇ ವ್ಯಾಮೋಹ ಉಳಿಯುವುದೇ? ಬೆಂಗಳೂರಿನ ಪಿಝಾ ಹಟ್ ಔಟ್​ಲೆಟ್​ನಲ್ಲಿ ಪಿಝಾ ಹಿಟ್ಟಿನ ಟ್ರೇ ಮೇಲೆ ಶೌಚಾಲಯ ಸ್ವಚ್ಛಗೊಳಿಸುವ ಬ್ರಷ್, ಬಟ್ಟೆ, ಬ್ಯಾಗ್​ವುಳ್ಳ ಈ ಫೋಟೋ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಕ್ಕೆ ಡೋಮಿನೋಸ್ ಇಂಡಿಯಾ ಈಗ ಪ್ರತಿಕ್ರಿಯೆ ನೀಡಿದೆ. ಟ್ವಿಟರ್ ಖಾತೆದಾರ ತುಷಾರ್ ಎಂಬುವವರು ಈ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಆ ಚಿತ್ರದ ಬಗ್ಗೆ ವಿವರಣೆ ನೀಡಿ, ದಯವಿಟ್ಟು ಮನೆಯಲ್ಲಿ ಮಾಡಿದ ಅಡುಗೆಗೆ ಆದ್ಯತೆ ಕೊಡಿ ಎಂದಿದ್ದರು.

ಈ ಚಿತ್ರವನ್ನು ನೋಡಿದ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನು ಗಮನಿಸಿದ ಡೋಮಿನೋಸ್ ಇಂಡಿಯಾ, ‘ಅತ್ಯುನ್ನತ ರೀತಿಯಲ್ಲಿ ಶುಚಿತ್ವ ಮತ್ತು ಆಹಾರ ಸುರಕ್ಷತೆ ಬಗ್ಗೆ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತ ಬಂದಿದ್ದೇವೆ. ನಮ್ಮ ಗಮನಕ್ಕೆ ತಂದ ಈ ಘಟನೆಯ ಕುರಿತು ಸಂಪೂರ್ಣ ತನಿಖೆ ಮಾಡಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಗ್ರಾಹಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾವು ಸದಾ ಬದ್ಧರಾಗಿದ್ದೇವೆ ಎಂಬ ಭರವಸೆ ನೀಡುತ್ತೇವೆ’ ಎಂದು ಪ್ರತಿಕ್ರಿಯಿಸಿದೆ.

ಅನೇಕ ನೆಟ್ಟಿಗರು ಈ ಕುರಿತು ತಮಗಾದ ಅನುಭವ ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 5.1 ಸಾವಿರ ಲೈಕ್ಸ್, ಸುಮಾರು 2,000 ಕ್ಕಿಂತಲೂ ಹೆಚ್ಚು ರೀಟ್ವೀಟ್​ ಈ ಪೋಸ್ಟ್ ಒಳಗೊಂಡಿದೆ.

ಏನಂತೀರಿ ಪಿಝಾ ಪ್ರಿಯರೇ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?