Video Viral: ಪ್ರಪಾತಕ್ಕೆ ಉರುಳಿದ ಕಾರು; ಪ್ರಾಣಾಪಾಯದಿಂದ ಪಾರಾದ ಚಾಲಕ

ವೈರಲ್​​ ವಿಡಿಯೋದಲ್ಲಿ ಎರಡು-ಮೂರು ಜನರು ಕಾರನ್ನು ಇಳಿಜಾರಿನಿಂದ ಮೇಲಕ್ಕೆ ತಳ್ಳಲು ಪ್ರಯತ್ನಿಸುತ್ತಿರುವುದು ಸೆರೆಯಾಗಿದೆ. ಈ ಸಮಯದಲ್ಲಿ, ಚಾಲಕನು ಸಹ ಕಾರಿನೊಳಗೆ ಇರುತ್ತಾನೆ, ಆದರೆ ಇದ್ದಕ್ಕಿದ್ದಂತೆ ಕಾರು ಸಮತೋಲನ ಕಳೆದುಕೊಂಡು ಪ್ರವಾತಕ್ಕೆ ಉರುಳಿ ಬಿದ್ದಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Video Viral: ಪ್ರಪಾತಕ್ಕೆ ಉರುಳಿದ ಕಾರು; ಪ್ರಾಣಾಪಾಯದಿಂದ ಪಾರಾದ ಚಾಲಕ

Updated on: Jun 05, 2024 | 11:25 AM

ಕಾರು ಅಪಘಾತದ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಾಸ್ತವವಾಗಿ, ಕಾರು ಇದ್ದಕ್ಕಿದ್ದಂತೆ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗುಡ್ಡಗಾಡು, ತಿರುವಿನ ಪ್ರದೇಶಗಳಲ್ಲಿ ವಾಹನ ಚಲಾಯಿಸುವುದು ಅಷ್ಟು ಸುಲಭವಲ್ಲ. ಏಕೆಂದರೆ ಸಣ್ಣ ತಪ್ಪು ಕೂಡ ನಿಮ್ಮ ಜೀವಕ್ಕೇ ಕುತ್ತು ತರಬಹುದು. ಸದ್ಯ, ಇದೀಗ ವೈರಲ್​​ ಆಗಿರುವ ವಿಡಿಯೋದಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಕಾರೊಂದು ಅಪಾಯಕಾರಿ ಅಪಘಾತಕ್ಕೀಡಾಗಿರುವ ದೃಶ್ಯ ಕಂಡು ಬಂದಿದೆ.

ವೈರಲ್​​ ವಿಡಿಯೋದಲ್ಲಿ ಎರಡು-ಮೂರು ಜನರು ಕಾರನ್ನು ಇಳಿಜಾರಿನಿಂದ ಮೇಲಕ್ಕೆ ತಳ್ಳಲು ಪ್ರಯತ್ನಿಸುತ್ತಿರುವುದು ಸೆರೆಯಾಗಿದೆ. ಈ ಸಮಯದಲ್ಲಿ, ಚಾಲಕನು ಸಹ ಕಾರಿನೊಳಗೆ ಇರುತ್ತಾನೆ, ಆದರೆ ಇದ್ದಕ್ಕಿದ್ದಂತೆ ಕಾರು ಸಮತೋಲನ ಕಳೆದುಕೊಂಡು ಪ್ರವಾತಕ್ಕೆ ಉರುಳಿ ಬಿದ್ದಿದೆ. ಕಾರು ಉರುಳಲು ಪ್ರಾರಂಭಿಸುತ್ತಿದ್ದಂತೆ ಅದರ ನಂತರ ಚಾಲಕ ತ್ವರಿತವಾಗಿ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲೋ ನಡೆದಿದೆ ಎಂದು ಹೇಳಲಾಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

@Prateek34381357 ಎಂಬ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಜೂನ್​​ 2ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 80ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:25 am, Wed, 5 June 24

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us