ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
Follow us
TV9 Web
| Updated By: shruti hegde

Updated on:Jun 29, 2021 | 3:22 PM

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ