ಕಂಠಪೂರ್ತಿ ಕುಡಿದು ನಶೆಯಲ್ಲಿ ತೇಲುವ ಕುಡುಕರಿಗೆ ಕೆಲವೊಮ್ಮೆ ತಾವೇನು ಮಾಡುತ್ತಿದ್ದೇವೆ ಎಂಬುದು ಕೂಡಾ ಅರಿವಿಗೆ ಬರೋಲ್ಲ. ಹೀಗೆ ಕುಡುಕರು ನಶೆಯಲ್ಲಿ ತೂರಾಡುತ್ತಾ, ಬೀದಿ ರಂಪ ಮಾಡುವ, ಎಡವಟ್ಟು ಕೆಲಸ ಮಾಡಿ ಪ್ರಾಣಕ್ಕೆ ಕುತ್ತು ತರುವ ಪಜೀತಿಗಳನ್ನು ಮಾಡುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇಲ್ಲೊಬ್ಬ ಕುಡುಕ ಕೂಡಾ ಕುಡಿದ ಅಮಲಿನಲ್ಲಿ ಎಡವಟ್ಟು ಮಾಡಿಕೊಂಡಿದ್ದು, ರಸ್ತೆಯಲ್ಲಿ ಕಾಣಿಸಿಕೊಂಡ ನಾಗರ ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಕೊನೆಯಲ್ಲಿ ಆತ ಆಸ್ಪತ್ರೆಗೆ ಸೇರಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಇಲ್ಲಿನ ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿಯ ಕಾಲೇಜು ಆವರಣದ ಸಮೀಪ ಕುಡುಕನೊಬ್ಬ ಮದ್ಯದ ಅಮಲಿನಲ್ಲಿ ನಾಗರ ಹಾವಿನ ಜೊತೆ ಆಟವಾಡಲು ಹೋಗಿ, ಆಸ್ಪತ್ರೆ ಸೇರಿದ್ದಾನೆ. ಕುಡುಕ ವ್ಯಕ್ತಿ ನಡೆದುಕೊಂಡು ಬರುತ್ತಿದ್ದ ವೇಳೆ ಸರಸರನೆ ಬಂದ ನಾಗರ ಹಾವೊಂದು ಕಾಲೇಜು ಆವರಣದ ಪೊದೆಯೊಳಗೆ ಹೋಗಲು ಪ್ರಯತ್ನಿಸುತ್ತದೆ. ಇದನ್ನು ಕಂಡ ಕುಡುಕ ಮಹಾಶಯ, ಭಂಡ ಧೈರ್ಯದಿಂದ ಹಾವನ್ನು ಹಿಡಿದು ರಸ್ತೆಗೆ ತಂದು, ಅದರ ಜೊತೆ ಚೆಲ್ಲಾಟವಾಡಿದ್ದಾನೆ. ಸ್ಥಳೀಯರು ಎಚ್ಚರಿಕೆ ನೀಡಿದರೂ ಕೂಡಾ ಹಾವಿಗೆ ತೊಂದರೆ ಕೊಡುವುದನ್ನು ಮಾತ್ರ ಆತ ಬಿಟ್ಟಿಲ್ಲ. ಕೊನೆಗೆ ಈತನ ಕಾಟ ತಾಳಲಾರದೆ ಹಾವು ಆತನಿಗೆ ಕಚ್ಚಿದೆ. ಆ ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
Drunken Antics with Cobra in Kadiri Ends in Hospitalization
In a bizarre and dangerous incident, a young man named Nagaraju from Kadiri in Sathyasai district found himself in the hospital after deciding to play with a cobra while intoxicated.
The drama unfolded near a degree… pic.twitter.com/mjmuBqTAgT
— Sudhakar Udumula (@sudhakarudumula) July 24, 2024
ಸುಧಾಕರ್ (sudhakarudumula) ಎಂಬವರು ಈ ಕುರಿತ ಪೋಸ್ಟ್ ಒಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕುಡಿದ ಅಮಲಿನಲ್ಲಿ ತೂರಾಡುತ್ತಿದ್ದ ಕುಡುಕ ಮಹಾಶಯ ನಾಗರ ಹಾವಿನೊಂದಿಗೆ ಆಟವಾಡುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಜೋರು ಮಳೆಗೆ ಪುಟ್ಟ ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ನಡೆದ ಅಮ್ಮ
ಜುಲೈ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 73 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕುಡುಕರು ತಮ್ಮನ್ನು ತಾವು ಬಾಹುಬಲಿ ಅಂತ ಭಾವಿಸಿದ್ದಾರೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾಗರ ಹಾವಿನ ತಾಳ್ಮೆಯನ್ನು ಮೆಚ್ಚಬೇಕುʼ ಎಂಬ ತಮಾಷೆಯ ಕಾಮೆಂಟ್ ಬರೆದುಕೊಂಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ