AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕುಡಿದು ಟೈಟ್‌ ಆಗಿ ರಸ್ತೆಯಲ್ಲಿ ವಿಚಿತ್ರವಾಗಿ ಡಾನ್ಸ್‌ ಮಾಡಿದ ವ್ಯಕ್ತಿ

ಕುಡುಕರ ಅವಾಂತರಗಳು, ಎಡವಟ್ಟುಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಕುಡುಕನೊಬ್ಬ ಫುಲ್‌ ಟೈಟ್‌ ಆಗಿ ಎಣ್ಣೆ ಏಟಲ್ಲಿ ರಸ್ತೆ ಮಧ್ಯೆ ಚಿತ್ರ ವಿಚಿತ್ರ ಡಾನ್ಸ್‌ ಮಾಡುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 29, 2024 | 5:57 PM

Share

ಎಣ್ಣೆ ಏಟಲ್ಲಿ ಈ ಕುಡುಕರಿಗೆ ತಾವು ಏನು ಮಾಡ್ತಿದ್ದೇವೆ ಎಂಬ ಅರಿವು ಕೂಡಾ ಇರೋಲ್ಲ. ಹೀಗೆ ಕುಡಿದು ಟೈಟ್‌ ಆಗಿ ಕುಡುಕ ಮಹಾಶಯರು ಎಡವಟ್ಟು, ಅವಾಂತರಗಳನ್ನು ಮಾಡಿಕೊಂಡಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ. ಇತರರಿಗೆ ಬೈಯುತ್ತಾ, ಜಗಳವಾಡುತ್ತಾ ಏನಾದ್ರೂ ಒಂದು ಅವಾಂತರಗಳನ್ನು ಮಾಡುತ್ತಲೇ ಇರ್ತಾರೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಇಲ್ಲೊಬ್ಬ ಕುಡುಕ ಮಹಾಶಯ ಫುಲ್‌ ಟೈಟ್‌ ಆಗಿ ಎಣ್ಣೆ ಏಟಲ್ಲಿ ರಸ್ತೆ ಮಧ್ಯೆ ಚಿತ್ರ ವಿಚಿತ್ರ ಡಾನ್ಸ್‌ ಮಾಡುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಎಂದು ನೆಟ್ಟಿಗರು ತಲೆ ಚಚ್ಚಿಕೊಂಡಿದ್ದಾರೆ.

ChotaNewsTelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಮದ್ಯದ ಅಮಲಿನಲ್ಲಿ ಕುಡುಕನೊಬ್ಬ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸಿ ವಾಹನ ಸವಾರರಿಗೆ ಅಡ್ಡಿಯುಂಟು ಮಾಡಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕುಡುಕನೊಬ್ಬ ಕುಡಿದು ಟೈಟ್‌ ಆಗಿ ರಸ್ತೆ ಮಧ್ಯೆಯೇ ನಿಂತು ಡಾನ್ಸ್‌ ಮಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಾ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಿಯರ್‌ ಬಾಟಲ್‌ನಲ್ಲಿ ಪತ್ತೆಯಾಯ್ತು ಸತ್ತ ಹಲ್ಲಿ; ಕಿಕ್ಕೇರಿಸುವ ಮುನ್ನ ಜೋಪಾನ ಮದ್ಯ ಪ್ರಿಯರೇ….

ಅಕ್ಟೋಬರ್‌ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎರಡುವರೆ ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಕುಡುಕನ ಅವಾಂತರವನ್ನು ಕಂಡು ಇದೆಂಥಾ ಅವಸ್ಥೆಎಂದು ನಕ್ಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್