AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಗೆ ಅರೆಬರೆ ಬಟ್ಟೆ ಹಾಕೊಂಡು ಬಾ ಗಂಡನ ಬದಲು ನಾನು ಬರುತ್ತೇನೆ ಎಂದ ಮಾವ

ನೆಲಮಂಗಲದಲ್ಲಿ ಮಾಜಿ ಡಿವೈಎಸ್ಪಿ ಅವರ ಪುತ್ರಿ ಅನಿತಾ ಅತ್ತೆ ಮನೆಯವರ ವಿರುದ್ಧ ದೂರು ನೀಡಿದ್ದಾರೆ. ಪತಿ ಗೋವರ್ಧನ್ ಆಸ್ತಿಗಾಗಿ ಕಿರುಕುಳ ನೀಡಿದರೆ, ಮಾವ ನಾಗರಾಜು ಲೈಂಗಿಕ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ವರದಕ್ಷಿಣೆ ಮತ್ತು ದೈಹಿಕ ದೌರ್ಜನ್ಯದ ಗಂಭೀರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಗಂಡ, ಅತ್ತೆ, ಮಾವನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸೊಸೆಗೆ ಅರೆಬರೆ ಬಟ್ಟೆ ಹಾಕೊಂಡು ಬಾ ಗಂಡನ ಬದಲು ನಾನು ಬರುತ್ತೇನೆ ಎಂದ ಮಾವ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 20, 2025 | 4:21 PM

Share

ಬೆಂಗಳೂರು, ನ.20: ಅತ್ತೆ-ಮಾವ ಎಂದರೆ ದೇವರಿಗೆ ಸಮ. ಅದರಲ್ಲೂ ಹೆಣ್ಮಕ್ಕಳಿಗೆ ಮಾವ ಎಂದರೆ ತಂದೆಗೆ ಸಮ, ಆದರೆ ಈ ಸುದ್ದಿ ಇದಕ್ಕೆ ವಿರುದ್ಧವಾಗಿದೆ. ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದಿರುವ  ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿದೆ. ನಿವೃತ್ತ ಡಿವೈಎಸ್ಪಿಯವರ ಪುತ್ರಿ ಅನಿತಾ ಎಂಬವವರು ತನ್ನ ಅತ್ತೆ ಮನೆಯಲ್ಲಿ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸ್​​​ ಠಾಣೆಯಲ್ಲಿ ದೂರು ನೀಡಿದ್ದಾರೆ. ಅನಿತಾ ಅವರು ಗಂಡ ಡಾ.ಗೋವರ್ಧನ್ ಮತ್ತು ಮಾವ ಪ್ರೊಫೆಸರ್ ನಾಗರಾಜು ವಿರುದ್ಧ ವರದಕ್ಷಿಣೆ ಕಿರುಕುಳ, ಅಶ್ಲೀಲ ಹೇಳಿಕೆಗಳು ಮತ್ತು ದೈಹಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನವೆಂಬರ್ 2, 2023 ರಂದು ಅನಿತಾ ಅವರು ಗೋವರ್ಧನ್​​ ಎಂಬುವವರನ್ನು ಮದುವೆಯಾಗಿದ್ದಾರೆ. ಭಾರೀ ಅದ್ಧೂರಿಯಲ್ಲಿ ಮದುವೆ ಮಾಡಲಾಯಿತು. ಅನಿತಾ ಅವರ ತಂದೆ ಮದುವೆಗಾಗಿ ಚಿನ್ನ, ಬೆಳ್ಳಿ ಮತ್ತು ಇತರ ಖರ್ಚುಗಳಿಗಾಗಿ ಸುಮಾರು 25 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಮದುವೆಯಾದ ಕೇವಲ 15 ದಿನಗಳ ನಂತರ ಪತಿಯ ಕಿರುಕುಳ ಶುರುವಾಗಿದೆ. ಗೋವರ್ಧನ್  ಅನಿತಾ ಅವರ ತಂದೆಯ ಆಸ್ತಿ ಮತ್ತು ಬಾಡಿಗೆ ಆದಾಯದಲ್ಲಿ ಪಾಲು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಅನಿತಾ ಆರೋಪಿಸಿದ್ದಾರೆ.

ಪತಿ ತನ್ನ ತಂದೆಯ ಆಸ್ತಿ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ತಂದೆಯ ಆಸ್ತಿ, ಹಣ ತಂದರೆ, ಬೇರೆಯವರ ಕೈ ಕೆಳಗೆ ಕೆಲಸ ಮಾಡುವುದನ್ನು ಬಿಟ್ಟು ಸ್ವಂತ ನರ್ಸಿಂಗ್ ಹೋಂ ಪ್ರಾರಂಭಿಸಬಹುದು ಎಂಬುದು ಗೋವರ್ಧನ್ ಅವರ ಆಸೆಯಾಗಿತ್ತು. ಇದರ ಜತೆಗೆ ಮಾವನ ಲೈಂಗಿಕ ಬೇಡಿಕೆಯ ಬಗ್ಗೆಯೂ ಅನಿತಾ ಹೇಳಿದ್ದಾರೆ.

ಇದನ್ನೂ ಓದಿ: ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಮಾವನ ಲೈಂಗಿಕ ಬೇಡಿಕೆ:

ಅನಿತಾ ಅವರು ಮಾವನ ಬಗ್ಗೆಯೂ ಗಂಭೀರ ಆರೋಪವನ್ನು ಮಾಡಿದ್ದಾರೆ. ಎಫ್‌ಐಆರ್ ಪ್ರಕಾರ , ಮಾವ ನಾಗರಾಜು ಅವರು ಅಶ್ಲೀಲವಾಗಿ ಮಾತನಾಡುತ್ತಿದ್ದರು ಎಂದು ಹೇಳಿದ್ದಾರೆ. ಇದು ಮಾತ್ರವಲ್ಲದೆ ದೈಹಿಕವಾಗಿ ಕಿರುಕುಳ ನೀಡಿದ್ದಾರೆ. “ನಿಮ್ಮ ಮದುವೆಯಾಗಿ ಕೆಲವು ತಿಂಗಳು ಕಳೆದಿವೆ. ಯಾಕೆ ಇನ್ನು ಮಕ್ಕಳು ಮಾಡಿಕೊಂಡಿಲ್ಲ, ಸರಿಯಾಗಿ ಸಂಸಾರ ಮಾಡುತ್ತಿಲ್ಲವೇ, ಇಲ್ಲದಿದ್ದರೆ, ನಾನು ಬರುತ್ತೇನೆ. ಮಾಡರ್ನ್ ಹುಡುಗಿಯಂತೆ ಅರ್ಧ ಬಟ್ಟೆ ಧರಿಸಿ ನನ್ನ ಮುಂದೆ ಬಾ” ಎಂದು ಅಸಭ್ಯವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಗಂಡ ಹಾಗೂ ಅತ್ತೆ ಬಳಿ ಹೇಳಿದ್ರೆ, ಇದು ಮನೆಯ ವಿಷಯ, ನೀನೇ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಗಂಡನ ಮನೆಯವರ ಆರ್ಥಿಕ ಮತ್ತು ದೈಹಿಕ ಕಿರುಕುಳದಿಂದ ಬೇಸತ್ತ ಅನಿತಾ ನೆಲಮಂಗಲ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಪೊಲೀಸರು ಪತಿ, ಮಾವ ಮತ್ತು ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 20 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ