ಬೈಕ್ ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್ ಸವಾರ
ಬೈಕ್ ಸವಾರನಿಗೆ ಬೈಕ್ ನಿಧಾನಕ್ಕೆ ಓಡಿಸಪ್ಪಾ ಎಂದಿದ್ದಕ್ಕೆ ವೃದ್ಧನನ್ನು ಒಂದೇ ಏಟಿಗೆ ಕೊಂದು ಹಾಕಿರುವ ಘಟನೆ ಹೈದರಾಬಾದ್‌ನ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ರಸ್ತೆ ದಾಟುತ್ತಿದ್ದ ವೃದ್ಧನೊರ್ವ ಎದುರಿಗೆ ಬಂದ ಬೈಕ್ ಸವಾರನಿಗೆ ಬೈಕ್ ನಿಧಾನಕ್ಕೆ ಓಡಿಸಪ್ಪಾ ಎಂದಿದ್ದಕ್ಕೆ ಏಕಾಏಕಿ ಬಂದು ಒಂದೇ ಏಟಿಗೆ ವೃದ್ಧನನ್ನು ಕೊಂದು ಹಾಕಿರುವ ಘಟನೆ ಹೈದರಾಬಾದ್‌ನ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೆಪ್ಟೆಂಬರ್ 30ರ ರಾತ್ರಿ ಈ ಘಟನೆ ನಡೆದಿದ್ದು, ಹೊಡೆದ ಏಟಿಗೆ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಗುರುವಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
@jsuryareddy ಎಂಬ ಟ್ವಿಟರ್ ಖಾತೆಯಲ್ಲಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ಸಿಸಿಟಿವಿ ದೃಶ್ಯಾವಳಿಗಳನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ