AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಪುಟಾಣಿ ಮಕ್ಕಳು ಹಾಗೂ ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೂ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ, ಆನೆಯೂ ಮುದ್ದಾಗಿ ಥ್ಯಾಂಕ್ಸ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಈ ಮುದ್ದಾದ ದೃಶ್ಯ ನೋಡಿ ನೆಟ್ಟಿಗರು ಫಿದಾ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Mar 15, 2026 | 7:13 PM

Share

ಆನೆಗಳ (elephants) ಆಟ ತುಂಟಾಟ ನೋಡುವುದೇ ಚಂದ. ಎಲ್ಲರಿಗೂ ತಿಳಿದಿರುವಂತೆ ಈ ಆನೆಗಳು  ಭಾವನಾತ್ಮಕ ಜೀವಿಗಳು. ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆಯಂತೆ. ಹೀಗಾಗಿ ಈ ಪ್ರಾಣಿಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತವೆ. ಹೀಗಾಗಿ ಗಜರಾಜನ ಜತೆಗಿನ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೊಂದಿಗೆ ಆನೆಯೊಂದು ಪ್ರೀತಿಯಿಂದ ವರ್ತಿಸಿದೆ. ಹೌದು ಐಸ್ ಕ್ರೀಮ್ ಕೊಟ್ಟ ಬಾಲಕಿಗೆ ಮುತ್ತು ನೀಡಿ ಧನ್ಯವಾದ ತಿಳಿಸಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

primepost07 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಆನೆಗೆ ಐಸ್ ಕ್ರೀಮ್ ಕೊಡುವುದನ್ನು ಕಾಣಬಹುದು. ಐಸ್ ಕ್ರೀಮ್ ಕೊಟ್ಟ ಖುಷಿಗೆ ಆನೆ ಪುಟ್ಟ ಹುಡುಗಿಗೆ ಥ್ಯಾಂಕ್ಸ್ ಹೇಳಿ ಮುತ್ತು ನೀಡಿದೆ. ಪುಟ್ಟ ಹುಡುಗಿಯೂ ಖುಷಿಯಿಂದ ನಕ್ಕಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Prime Post (@primepost07)

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಐಸ್ ಕ್ರೀಮ್ ಕೊಟ್ಟದ್ದಕ್ಕೆ ಈ ಗಜರಾಜನಿಗೆ ಎಷ್ಟು ಖುಷಿ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುಗ್ಧ ಮನಸ್ಸುಗಳ ಶುದ್ಧ ಗೆಳತನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Sun, 15 March 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ