AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ

ಯಾವುದೇ ವ್ಯಕ್ತಿ ಒಂದು ಕಂಪನಿಯಿಂದ ಉದ್ಯೋಗ ತೊರೆಯುವಾಗ ಔಪಚಾರಿಕವಾಗಿ ರಾಜೀನಾಮೆ ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಉದ್ಯೋಗಿ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದಿದ್ದು, ಈ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಾನು ಈ ರೀತಿ ರಾಜೀನಾಮೆ ಪತ್ರ ಬರೆಯುವ ಹಿಂದಿನ ಕಾರಣವನ್ನು ತಿಳಿಸಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 29, 2025 | 1:22 PM

Share

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ವೋಟ್ಪಿಸ್ಮಿಕ್‌ (Whotfismick) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಉದ್ಯೋಗಿಯು ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದಿರುವುದನ್ನು ಕಾಣಬಹುದು. ಕಂಪನಿ ನನ್ನನ್ನು ಹೇಗೆ ನಡೆಸಿಕೊಂಡಿತು ಎಂಬುದರ ಸಂಕೇತವಾಗಿ ನಾನು ಈ ಟಾಯ್ಲೆಟ್ ಪೇಪರ್‌ರನ್ನು ನನ್ನ ರಾಜೀನಾಮೆ ಪತ್ರ ಬರೆಯಲು ಆರಿಸಿಕೊಂಡೆ. ನಾನು ಈ ಕೆಲಸವನ್ನು ತ್ಯಜಿಸುತ್ತೇನೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ:ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ

ಡಿಸೆಂಬರ್ 23 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 1.6 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ವ್ಯಕ್ತಿಯೂ ಕಂಪನಿ ನಡೆಸಿಕೊಂಡ ರೀತಿ ತೀರಾ ವೈಯುಕ್ತಿಕವಾಗಿ ತೆಗೆದುಕೊಂಡ ಎನಿಸುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ಕಂಪನಿಗೆ ಮುಟ್ಟಿಕೊಳ್ಳುವಂತಹ ಉತ್ತರ ನೀಡಿದ ಉದ್ಯೋಗಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅತ್ಯದ್ಭುತ ಪ್ರತಿಭೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!