Viral: ಇದೇನಿದು ಆಶ್ಚರ್ಯ… ಹುಲ್ಲು ಬಿಟ್ಟು ಜೀವಂತ ಕೋಳಿಯನ್ನು ತಿಂದ ಹಸು; ವಿಡಿಯೋ ವೈರಲ್‌

ಈ ಪ್ರಪಂಚದಲ್ಲಿ ನಡೆಯುವ ಕೆಲವೊಂದು ಘಟನೆಗಳು ನಿಜಕ್ಕೂ ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಇದೀಗ ಅಂತಹದ್ದೊಂದು ಅಚ್ಚರಿಯ ಘಟನೆ ನಡೆದಿದ್ದು, ಸಸ್ಯಹಾರಿ ಪ್ರಾಣಿಯಾಗಿರುವ ಹಸು ಜೀವಂತ ಕೋಳಿಯೊಂದನ್ನು ತಿಂದಿದೆ. ಈ ಕುರಿತ ವಿಡಿಯೋವೊಂದು ವೈರಲ್‌ ಆಗಿದ್ದು, ಈ ಶಾಕಿಂಗ್‌ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Nov 29, 2024 | 10:58 AM

ಈ ಪ್ರಪಂಚದಲ್ಲಿ ನಮ್ಮ ಊಹೆಗೂ ನಿಲುಕದ ಕೆಲವೊಂದು ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಂತಹ ಘಟನೆಗಳ ಸುದ್ದಿಗಳನ್ನು ಕೇಳಿದಾಗ ಅರೇ ಹಿಂಗೂ ನಡೆಯಲು ಸಾಧ್ಯ ಉಂಟೇ ಎಂದು ನಾವುಗಳು ಬೆಚ್ಚಿ ಬೀಳುತ್ತೇವೆ. ಇದೀಗ ಇಂತಹದ್ದೇ ಮತ್ತೊಂದು ಅಚ್ಚರಿಯ ಘಟನೆ ನಡೆದಿದ್ದು, ಹಸುವೊಂದು ತಾನು ಸಸ್ಯಾಹಾರಿ ಎಂಬುದನ್ನೇ ಮರೆತು ಜೀವಂತ ಕೋಳಿಯನ್ನು ತಿಂದಿದೆ. ಈ ಕುರಿತ ವಿಡಿಯೋವೊಂದು ವೈರಲ್‌ ಆಗಿದ್ದು, ಈ ಶಾಕಿಂಗ್‌ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಸಸ್ಯಾಹಾರಿ ಪ್ರಾಣಿಗಳಲ್ಲಿ ಒಂದಾಗಿರುವಂತಹ ಹಸುಗಳು ಸಾಮಾನ್ಯವಾಗಿ ಹುಲ್ಲು, ಎಲೆಗಳು ಇತ್ಯಾದಿಗಳನ್ನು ತಿಂದು ಬದುಕುತ್ತವೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಹಸುವೊಂದು ತಾನು ಸಸ್ಯಾಹಾರಿ ಪ್ರಾಣಿಯೆಂಬುದನ್ನು ಮರೆತು ಹುಲ್ಲು ಜಗಿದಂತೆ ಜೀವಂತ ಕೋಳಿಯನ್ನು ಜಗಿದು ತಿಂದಿದೆ.

ಈ ಕುರಿತ ವಿಡಿಯೋವನ್ನು TheBrutaNature ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಕೊಟ್ಟಿಗೆಯಲ್ಲಿದ್ದ ದನವೊಂದು ಅಲ್ಲೇ ಪಕ್ಕದಲ್ಲಿ ಓಡಾಡುತ್ತಿದ್ದ ಕೋಳಿಯನ್ನು ಹಿಡಿದು ತಾನು ಸಸ್ಯಾಹಾರಿ ಎಂಬುದನ್ನು ಮರೆತು ಹುಲ್ಲು ಜಗಿದಂತೆ ಜೀವಂತ ಕೋಳಿಯನ್ನು ಬಾಯೊಳಗೆ ಹಾಕಿ ಜಗಿಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಮೆರಿಕದಲ್ಲಿರುವ ಈ ನಗರದಲ್ಲಿ ಇಂಟರ್​ನೆಟ್​ ಇಲ್ಲ, ಫೋನ್​ ಇಲ್ಲ, ವೈ-ಫೈ, ಮೈಕ್ರೋವೇವ್ ಇಲ್ಲವೇ ಇಲ್ಲ

ನವೆಂಬರ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 6.4 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಾನು ಇದೇ ಮೊದಲ ಬಾರಿಗೆ ಮಾಂಸಹಾರಿ ಹಸುವನ್ನು ನೋಡಿದ್ದುʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹುಶಃ ಪ್ರೋಟೀನ್‌ ಸಿಗಲೆಂದು ಕೋಳಿಯನ್ನು ತಿಂದಿರಬಹುದುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼದೇಹಕ್ಕೆ ಬೇಕಾದ ಅಗತ್ಯ ಖನಿಜಗಳ ಕೊರತೆಯಿಂದಾಗಿ ಹಸು ಕೋಳಿಯನ್ನು ತಿಂದಿರಬಹುದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:57 am, Fri, 29 November 24

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್