Video: ಕೇರಳದ ಗುರುವಾಯೂರು ದೇವಸ್ಥಾನದ ಕೊಳದಲ್ಲಿ ಪಾದ ತೊಳೆದು ವಿವಾದ ಸೃಷ್ಟಿಸಿಕೊಂಡ ಮಾಜಿ ಬಿಗ್ ಬಾಸ್ ಸ್ಪರ್ಧಿ
ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಸ್ಥಾನದ ಕೊಳಕ್ಕೆ ಅಪಚಾರ ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್ ಹಾಗೂ ಮಲಯಾಳಂನ ಮಾಜಿ ಬಿಗ್ ಬಾಸ್ ಸ್ಪರ್ಧಿ ಜಾಸ್ಮಿನ್ ಜಾಫರ್ ವಿರುದ್ಧ ಭಕ್ತರಿಂದ ಹಾಗೂ ದೇವಾಲಯದ ಆಡಳಿತ ಮಂಡಳಿಯಿಂದ ಅಕ್ರೋಶ ವ್ಯಕ್ತವಾಗಿದೆ. ಅಷ್ಟಕ್ಕೂ ಜಾಸ್ಮಿನ್ ಜಾಫರ್ ಮಾಡಿದ ಅಪಚಾರವೇನು? ದೇವಾಲಯದ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದೇಗೆ? ಇಲ್ಲಿದೆ ನೋಡಿ.

ಕೇರಳ, ಆಗಸ್ಟ್ 26: ಕೇರಳದ (Kerala) ಪುಣ್ಯಕ್ಷೇತ್ರ ಹಾಗೂ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಸ್ಥಾನದ (Guruvayur Temple) ಕೊಳಕ್ಕೆ ಅಪಚಾರ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಲಯಾಳಂನ ಮಾಜಿ ಬಿಗ್ ಬಾಸ್ ಸ್ಪರ್ಧಿ ಜಾಸ್ಮಿನ್ ಜಾಫರ್ (Jasmin Jaffar) ಅವರು ಗುರುವಾಯೂರು ದೇವಸ್ಥಾನದ ಕೊಳದಲ್ಲಿ ಕಾಲು ತೊಳೆದಿರುವ ಬಗ್ಗೆ ಇದೀಗ ವಿವಾದ ಸೃಷ್ಟಿಸಿದೆ. ಈ ವಿಡಿಯೋದಲ್ಲಿ ಜಾಫರ್ ದೇವಾಲಯದ ಪವಿತ್ರ ಕೊಳದಲ್ಲಿ ತನ್ನ ಪಾದಗಳನ್ನು ತೊಳೆಯುತ್ತಿರುವುದನ್ನು ಕಾಣಬಹುದು. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೇರಳದ ಹಿಂದೂ ಧಾರ್ಮಿಕ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವಾಲಯದ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ ಎಂದು ಇಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಈ ವಿಡಿಯೋವನ್ನು ಜಾಸ್ಮಿನ್ ಜಾಫರ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಹಿಂದೂ ನಾಯಕರು ಅಕ್ರೋಶ ಹೊರಹಾಕಿದ್ದಾರೆ. ಇನ್ನು ಜಾಸ್ಮಿನ್ ಜಾಫರ್ ಸೋಶಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್, 2025ರ ಮಲಯಾಳಂನ ಬಿಗ್ ಬಾಸ್ ಸ್ಪರ್ಧಿಯಾಗಿ ಖ್ಯಾತಿ ಗಳಿಸಿದರು. ಅವರದೇ ಆಗಿರುವ ಯೂಟ್ಯೂಬ್ ಚಾನೆಲ್ನಲ್ಲಿ ಅನೇಕ ವಿಚಾರದ ಬಗ್ಗೆ ಹಂಚಿಕೊಳ್ಳುತ್ತಿದ್ದರು. ತಮ್ಮ ಚಾನೆಲ್ ಮೂಲಕ ಜೀವನಶೈಲಿ, ಸೌಂದರ್ಯದ ಬಗ್ಗೆ ಟಿಪ್ಸ್ಗಳನ್ನು ನೀಡುತ್ತಿದ್ದರು. ಜಾಸ್ಮಿನ್ ಜಾಫರ್ ತಮ್ಮ ಯೂಟ್ಯೂಬ್‌ನಲ್ಲಿ 1.5 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೂಡ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಇವರು ಬಿಗ್ ಬಾಸ್ ಮಲಯಾಳಂ ಸೀಸನ್ 6 ರಲ್ಲಿ ಭಾಗವಹಿಸಿದ ನಂತರ ಇವರ ಜನಾಪ್ರಿಯತೆ ಇನ್ನು ಹೆಚ್ಚಾಗಿದೆ.
ವೈರಲ್ ಪೋಸ್ಟ್:

ಆದರೆ ಇದೀಗ ಅವರ ರೀಲ್ಸ್ ಹುಚ್ಚಾಟದಿಂದ ಧಾರ್ಮಿಕ ವಿಚಾರಕ್ಕೆ ಧಕ್ಕೆಯಾಗಿದೆ ಎಂದು ದೂರಿದ್ದು, ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದ ಪವಿತ್ರ ಕೊಳದಲ್ಲಿ ರೀಲ್ಸ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾತೃಭೂಮಿ ವರದಿ ಮಾಡಿದೆ. ಧಾರ್ಮಿಕ ಕಾನೂನಿನ ಪ್ರಕಾರ ತಪ್ಪು, ಈ ಹಿಂದೆಯೇ ಈ ಕೊಳದಲ್ಲಿ ಕಾಲುಗಳನ್ನು ತೊಳೆಯಬಾರದು ಎಂದು ಸುಪ್ರೀಂಕೋರ್ಟ್ ಆದೇಶವನ್ನು ನೀಡಿತ್ತು. ಇದೀಗ ಜಾಸ್ಮಿನ್ ಜಾಫರ್ ಅವರು ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ವಾವ್ಹ್ ವಂಡರ್‌ಫುಲ್, ಭಾರತ ಎಷ್ಟು ಸುಂದರವಾಗಿದೆ ನೋಡಿ ಎಂದ ವಿದೇಶಿಗ
ಈ ವಿಡಿಯೋ ಭಾರೀ ವಿರೋಧಗಳು ವ್ಯಕ್ತವಾದ ನಂತರ ವಿಡಿಯೋವನ್ನು ಡಿಲೀಟ್ ಮಾಡಿ, ಕ್ಷಮೆಯನ್ನು ಕೇಳಿದ್ದಾರೆ. ನಿರ್ಬಂಧಗಳ ಬಗ್ಗೆ ತನಗೆ ತಿಳಿದಿಲ್ಲ, ಯಾರನ್ನೂ ನೋಯಿಸುವುದು ಅಥವಾ ವಿವಾದವನ್ನು ಸೃಷ್ಟಿಸುವುದು ಉದ್ದೇಶವಾಗಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. “ನನ್ನನ್ನು ಪ್ರೀತಿಸುವವರಿಗೆ ಮತ್ತು ಇತರ ಎಲ್ಲರಿಗೂ, ನಾನು ಮಾಡಿದ ವೀಡಿಯೊ ದುಃಖವನ್ನುಂಟುಮಾಡಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅಜ್ಞಾನದಿಂದ ಸಂಭವಿಸಿದ ತಪ್ಪಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಲ್ಲಿನ ಆಡಳಿತ ಮಂಡಳಿ, ಕೊಳ ಅಪವಿತ್ರವಾಗಿರುವುದರಿಂದ ಅದನ್ನು ಶುದ್ಧೀಕರಣ ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಾಲಯದ ಆಡಳಿತಾಧಿಕಾರಿ ಒಬಿ ಅರುಣ್ ಕುಮಾರ್ ಅವರು ದೇವಾಲಯದ ಪೊಲೀಸರಿಗೆ ಔಪಚಾರಿಕ ದೂರು ದಾಖಲಿಸಿದ್ದು, ಚಿತ್ರೀಕರಣವು ದೇವಾಲಯದ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ. ನ್ಯಾಯಾಲಯದ ಆದೇಶದ ಅಡಿಯಲ್ಲಿ ದೇವಾಲಯದ ಕಾರಿಡಾರ್‌ನಲ್ಲಿ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಪೂರ್ವ ಲಿಖಿತ ಅನುಮತಿಯಿಲ್ಲದೆ ದೇವಾಲಯದ ಕೊಳದಲ್ಲಿ ಛಾಯಾಗ್ರಹಣ ಅಥವಾ ವೀಡಿಯೊಗ್ರಫಿಯನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








