AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬ್ರೇಕಪ್ ನಂತರ ಪ್ರತಿ ನಿಮಿಷಕ್ಕೆ 1 ರೂ. ಗೂಗಲ್ ಪೇ ಮಾಡ್ತಿದ್ದಾನೆ ಮಾಜಿ ಪ್ರಿಯಕರ, ಇದು ಪ್ರೀತಿ ಅಲ್ಲ ಹಿಂಸೆ

ಪ್ರೀತಿಸಿದವರು ಕೈ ಕೊಟ್ರೆ, ಅದರಿಂದಾಗುವ ನೋವು ಅಷ್ಟಿಷ್ಟಲ್ಲ. ಕೆಲವರು ಬ್ರೇಕಪ್ ನೋವಿನಿಂದ ಹೊರ ಬರಲಾರದೆ ಜೀವ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಾರೆ. ಕೆಲವರು ಕೈ ಕೊಟ್ಟ ಹುಡುಗಿಗೆ ನಾನಾ ರೀತಿಯಲ್ಲಿ ಹಿಂಸೆ ನೀಡುತ್ತಾರೆ. ಆದ್ರೆ ಇಲ್ಲೊಬ್ಬ ಯುವತಿಯೂ ತನಗೆ ಮಾಜಿ ಪ್ರಿಯಕರ ಹೇಗೆ ಹಿಂಸೆ ನೀಡುತ್ತಿದ್ದಾನೆ ಎಂಬುದನ್ನು ಹೇಳಿದ್ದಾಳೆ. ಈ ಯುವತಿಯ ಪೋಸ್ಟ್ ನೋಡಿದ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

Viral : ಬ್ರೇಕಪ್ ನಂತರ ಪ್ರತಿ ನಿಮಿಷಕ್ಕೆ 1 ರೂ. ಗೂಗಲ್ ಪೇ ಮಾಡ್ತಿದ್ದಾನೆ ಮಾಜಿ ಪ್ರಿಯಕರ, ಇದು ಪ್ರೀತಿ ಅಲ್ಲ ಹಿಂಸೆ
ಸಾಯಿನಂದಾ
| Edited By: |

Updated on: Nov 23, 2024 | 3:54 PM

Share

ಪ್ರೀತಿ ಮಾಯೆ ಹುಷಾರು ಕಣ್ಣೀರು ಮಾರೋ ಬಜಾರು ಎನ್ನುವ ಹಾಡಿದೆ. ಪ್ರೀತಿಯಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ಆದರೆ ಬ್ರೇಕಪ್ ಆದರೆ ಮುಗಿದೇ ಹೋಯಿತು. ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ ಆ ನೋವಿನಿಂದ ಹೊರಬರಲು ತುಂಬಾನೇ ಸಮಯ ಬೇಕಾಗುತ್ತದೆ. ಆದರೆ ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಇಲ್ಲೊಬ್ಬಳು ಯುವತಿಯೂ ತನ್ನ ಮಾಜಿ ಪ್ರಿಯಕರ ಹೇಗೆ ತನಗೆ ಹಿಂಸೆ ನೀಡುತ್ತಿದ್ದಾನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.

ಯುವತಿಯೂ ಆತನ ನಂಬರನ್ನು ಎಲ್ಲ ಕಡೆಯಲ್ಲಿಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಈ ಮಾಜಿ ಪ್ರಿಯಕರನೂ ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇಯನ್ನು ಆಯ್ಕೆ ಮಾಡ್ಕೊಂಡಿದ್ದಾನೆ. ಹೌದು, ಬ್ರೇಕಪ್ ನಂತರ ಆಕೆ ಮಾಜಿ ಪ್ರೇಮಿಯೂ ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನಂತೆ.

ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiiiದಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡ್ತಾರಾ ಎಂದೇನಿಸುತ್ತದೆ.

ಇದನ್ನೂ ಓದಿ: ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಈ ಪೋಸ್ಟ್ ಒಂದು ಲಕ್ಷದವರೆಗೂ ವೀಕ್ಷಣೆ ಕಂಡಿದ್ದು, ನೆಟ್ಟಿಗರು ಕಾಮೆಂಟ್ ಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡ್ಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು