Fact Check: ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ್ದು ಎಂದು ಕರ್ನಾಟಕದಲ್ಲಿ ಫೇಕ್ ವಿಡಿಯೋ ವೈರಲ್

ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ವೈರಲ್ ಆಗುತ್ತಿರುವ ವಿಡಿಯೋ 2020 ರಲ್ಲಿ ಗೋರಖ್‌ಪುರದಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ. ಇದಕ್ಕೂ ಸಂಬಲ್‌ಗೂ ಯಾವುದೇ ಸಂಬಂಧವಿಲ್ಲ.

Fact Check: ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ್ದು ಎಂದು ಕರ್ನಾಟಕದಲ್ಲಿ ಫೇಕ್ ವಿಡಿಯೋ ವೈರಲ್
Fact Check
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Nov 28, 2024 | 11:17 AM

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ವಿಡಿಯೋ ವೈರಲ್ ಆಗುತ್ತಿದೆ. ಇದು ಸಂಬಾಲ್‌ನಲ್ಲಿ ನಡೆದ ಘಟನೆ ಎಂದು ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿರುವ ವಿಡಿಯೋ ಎಂಬ ಹೇಳಿಕೆಯೊಂದಿಗೆ ಪೋಸ್ಟ್ ಹಂಚಿಕೊಳ್ಳಲಾಗುತ್ತದೆ. ಪೊಲೀಸರು ಮತ್ತು ಜನರ ನಡುವೆ ದೊಡ್ಡ ಗಲಾಟೆ ನಡೆದಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಉತ್ತರ ಪ್ರದೇಶ ಪೋಲೀಸರು ಇಂದು ತುಂಬಾ ಭಯಾನಕವಾಗಿ ಬ್ಯಾಟಿಂಗ್ ಮಾಡಿದ್ದಾರೆ ಮತ್ತು ಮೂವರನ್ನು ಶಾಂತಿದೂತ ಮುಸ್ಲಂಗಳನ್ನು ಸ್ವರ್ಗಕ್ಕೆ ಕಳುಹಿಸಿ ಕೊಟ್ಟಿದ್ದಾರೆ..!!’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ವೈರಲ್ ಆಗುತ್ತಿರುವ ವಿಡಿಯೋ 2020 ರಲ್ಲಿ ಗೋರಖ್‌ಪುರದಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ. ಇದಕ್ಕೂ ಸಂಬಲ್‌ಗೂ ಯಾವುದೇ ಸಂಬಂಧವಿಲ್ಲ.

ನಿಜಾಂಶ ತಿಳಿಯಲು ನಾವು ಗೂಗಲ್ ಲೆನ್ಸ್‌ನಲ್ಲಿ ವೈರಲ್ ವಿಡಿಯೋ ಕ್ಲಿಪ್‌ನ ಕೀಫ್ರೇಮ್‌ಗಳನ್ನು ಹುಡುಕಿದಾಗ, ಈ ವೀಡಿಯೊವನ್ನು 31 ಡಿಸೆಂಬರ್ 2019 ರಂದು ಸೋಷಿಯಲ್ ಮೀಡಿಯಾ ನ್ಯೂಸ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ‘‘ಭಾರತೀಯ ಪೊಲೀಸರು ಪೌರತ್ವ ಕಾನೂನು ವಿರೋಧಿ ಪ್ರತಿಭಟನಾಕಾರರನ್ನು ಹೊಡೆದಿದ್ದಾರೆ. CAA – NRC – CAA_NRC – India – CAAProtest _CAA’’ ಎಂದು ಶೀರ್ಷಿಕೆ ನೀಡಲಾಗಿದೆ.

ಹಾಗೆಯೆ ಜನವರಿ 2020 ರಲ್ಲಿ ಹಲವಾರು ಬಳಕೆದಾರರು ಫೇಸ್‌ಬುಕ್‌ನಲ್ಲಿ ಇದೇ ವಿಡಿಯೋವನ್ನು ಉತ್ತಮ ಕ್ವಾಲಿಟಿಯಲ್ಲಿ ಅಪ್‌ಲೋಡ್ ಮಾಡಿರುವುದನ್ನು ಸಹ ನಾವು ಕಂಡುಕೊಂಡಿದ್ದೇವೆ.

ಈ ಮೂಲಕ ಈ ವಿಡಿಯೋ ಹಳೆಯದು ಎಂಬುದು ಸ್ಪಷ್ಟವಾಯಿತು. ಬಳಿಕ ಈ ವಿಡಿಯೋ ನಿಖರವಾಗಿ ಎಲ್ಲಿಂದ ಬಂದಿದೆ ಎಂದು ತಿಳಿಯಲು ನಾವು ಪ್ರಯತ್ನಿಸಿದೆವು. 2019-2020ರಲ್ಲಿ ಅಪ್‌ಲೋಡ್ ಮಾಡಿದ ಈ ವಿಡಿಯೋದೊಂದಿಗೆ CAA ಮತ್ತು NRC ನಂತಹ ಕೀವರ್ಡ್‌ಗಳನ್ನು ಬಳಸಲಾಗಿದೆ. 2019-20ರಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಎಲ್ಲಿ ನಡೆದವು ಎಂಬುದನ್ನು ನೋಡಲು ನಾವು ಗೂಗಲ್​ನಲ್ಲಿ ಕೀವರ್ಡ್‌ ಮೂಲಕ ಹುಡುಕಿದ್ದೇವೆ.

ಆಗ ನಾವು ಹಲವಾರು ಸುದ್ದಿ ಪೋರ್ಟಲ್‌ಗಳ ಯೂಟ್ಯೂಬ್ ಚಾನಲ್‌ಗಳಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ವೈರಲ್ ವಿಡಿಯೋದ ಗ್ಲಿಂಪ್‌ಗಳನ್ನು ಕಾಣಬಹುದು. ಇಲ್ಲಿ ವಿಡಿಯೋ ಗೋರಖ್‌ಪುರದ್ದು ಎಂದು ಹೇಳಲಾಗಿದೆ. ಈ ಕುರಿತು ಟಿವಿ9 ಕನ್ನಡ ಕೂಡ ಡಿಸೆಂಬರ್ 20, 2019 ರಂದು ಯೂಟ್ಯೂಬ್​ನಲ್ಲಿ ವಿಡಿಯೋ ಸುದ್ದಿ ಮಾಡಿದ್ದು, ‘‘ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಲ್ಲು ತೂರಾಟ’’ ಎಂಬ ಹೆಡ್​ಲೈನ್​ ನೀಡಿದೆ.

ಹಾಗೆಯೆ ಟಿವಿ9 ಭಾರತ್ ವರ್ಷ ಕೂಡ ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಅಪ್ಲೋಡ್ ಮಾಡಿದೆ.

ಇದನ್ನೂ ಓದಿ: ಗೌತಮ್ ಅದಾನಿಯನ್ನು ಬಂಧಿಸಿರುವುದು ನಿಜವೇ?: ವೈರಲ್ ಫೋಟೋದ ಸತ್ಯಾಂಶ ಏನು?

ಖಚಿತಪಡಿಸಲು, ನಾವು ಗೂಗಲ್ ಮ್ಯಾಪ್ಸ್​ನಲ್ಲಿ ವೈರಲ್ ವಿಡಿಯೋದಲ್ಲಿ ಕಂಡುಬರುವ ಅಂಗಡಿಗಳ ಹೆಸರನ್ನು ಹುಡುಕಿದ್ದೇವೆ. ವೈರಲ್ ಆಗಿರುವ ವಿಡಿಯೋ ಗೋರಖ್‌ಪುರದ ನಖಾಸ್ ರಸ್ತೆಯಲ್ಲಿದೆ ಎಂಬುದು ಸ್ಪಷ್ಟವಾಗಿದೆ. ಈ ಮೂಲಕ ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಈ ಹಕ್ಕು ತಪ್ಪುದಾರಿಗೆಳೆಯುತ್ತಿದೆ ಎಂದು ಕಂಡುಹಿಡಿದಿದೆ. 2020 ರಲ್ಲಿ ಗೋರಖ್‌ಪುರದಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಜಾಮಾ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್