AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಬಾಂಗ್ಲಾದೇಶದಲ್ಲಿ 76 ವರ್ಷದ ಮುಸ್ಲಿಂ ವ್ಯಕ್ತಿ 12 ವರ್ಷದ ಹಿಂದೂ ಯುವತಿಯನ್ನು ಮದುವೆಯಾಗಿದ್ದು ನಿಜವೇ?

ಬಾಂಗ್ಲಾದೇಶದಲ್ಲಿ 76 ವರ್ಷದ ಮೊಹಮ್ಮದ್ ರೊಜೊಬ್ ಅಲಿ ನಾಲ್ಕನೇ ಬಾರಿಗೆ 12 ವರ್ಷದ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ವೈರಲ್ ವಿಡಿಯೋವನ್ನು ಸ್ಕ್ರಿಪ್ಟ್ ಮಾಡಲಾಗಿದೆ.

Fact Check: ಬಾಂಗ್ಲಾದೇಶದಲ್ಲಿ 76 ವರ್ಷದ ಮುಸ್ಲಿಂ ವ್ಯಕ್ತಿ 12 ವರ್ಷದ ಹಿಂದೂ ಯುವತಿಯನ್ನು ಮದುವೆಯಾಗಿದ್ದು ನಿಜವೇ?
Fact Check
ಪ್ರೀತಿ ಭಟ್​, ಗುಣವಂತೆ
| Edited By: |

Updated on:Dec 08, 2024 | 10:30 AM

Share

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ಒಬ್ಬ ಹಿರಿಯ ಪುರುಷ ಮತ್ತು ಬಾಲಕಿ ಎರಡು ವಿಭಿನ್ನ ಕುರ್ಚಿಗಳ ಮೇಲೆ ಕುಳಿತಿದ್ದಾರೆ. ಬಾಂಗ್ಲಾದೇಶದಲ್ಲಿ 76 ವರ್ಷದ ಮೊಹಮ್ಮದ್ ರೊಜೊಬ್ ಅಲಿ ನಾಲ್ಕನೇ ಬಾರಿಗೆ 12 ವರ್ಷದ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆಯೊಂದಿಗೆ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಒಬ್ಬ ಬಳಕೆದಾರರು ವಿಡಿಯೋನ್ನು ಹಂಚಿಕೊಂಡು ಹೀಗೆ ಬರೆದಿದ್ದಾರೆ, ‘‘ಬಾಂಗ್ಲಾದೇಶ: 76 ವರ್ಷದ ಮೊಹಮ್ಮದ್ ರೋಜೋಬ್ ಅಲಿ 12 ವರ್ಷದ ಹಿಂದೂ ಹುಡುಗಿಯನ್ನು ನಾಲ್ಕನೇ ಬಾರಿಗೆ ವಿವಾಹವಾದರು. ಅವಳಿಗೆ ಯಾರೂ ಇಲ್ಲ; ಅವಳು ಅನಾಥೆ, ಹಾಗಾಗಿ ಅವಳನ್ನು ನನ್ನ ಹೆಂಡತಿಯಾಗಿ ಮಾಡಿಕೊಂಡೆ ಎಂದು ಮೊಹಮ್ಮದ್ ರೋಜಾಬ್ ಹೇಳಿದ್ದಾರೆ. ಇವರೆಲ್ಲ ಮೊದಲು ಮನೆಯವರನ್ನೆಲ್ಲ ಕೊಂದು ಆಮೇಲೆ ಅದೇ ರೀತಿ ಸಣ್ಣ ಪುಟ್ಟ ಮುಗ್ಧ ಹುಡುಗಿಯರನ್ನು ಮದುವೆಯಾಗುತ್ತಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಇದು ನಿಜವಾಗಿ ನಡೆದ ಘಟನೆಯೇ ಅಲ್ಲ, ಬದಲಾಗಿ ಇದೊಂದು ಸ್ಕ್ರಿಪ್ಟೆಡ್ ವಿಡಿಯೋ ಆಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದೆವು. ಆಗ 26 ಸೆಪ್ಟೆಂಬರ್ 2024 ರಂದು MB TV ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಈ ವಿಡಿಯೋವನ್ನು ಅಪ್‌ಲೋಡ್ ಮಾಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಇದರಲ್ಲಿ ಸ್ಪಷ್ಟವಾಗಿ ಮನರಂಜನಾ ವಿಡಿಯೋಗಳನ್ನು ಇಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಈ ಚಾನಲ್‌ನಲ್ಲಿ ಮಾಹಿತಿ ನೀಡಲಾಗಿದೆ.

ಇದಲ್ಲದೆ, Mkd bd Tv ಎಂಬ ಹೆಸರಿನ ಮತ್ತೊಂದು ಯೂಟ್ಯೂಬ್ ಚಾನಲ್‌ನಲ್ಲಿ ಇದೇ ವಿಡಿಯೋವನ್ನು ನಾವು ಕಂಡುಕೊಂಡಿದ್ದೇವೆ. ಇದೇ ಚಾಲೆಲ್​ನಲ್ಲಿ ಕಿರು ಚಿತ್ರಗಳು ಮತ್ತು ಮನರಂಜನಾ ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗಿದೆ.

ಮನರಂಜನೆಗಾಗಿ ಈ ಎರಡೂ ಚಾನೆಲ್‌ಗಳಲ್ಲಿ ಮದುವೆಗೆ ಸಂಬಂಧಿಸಿದ ಅನೇಕ ಇತರ ವಿಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ನಾವು ಕಂಡುಕೊಂಡಿದ್ದೇವೆ. ಇದರಲ್ಲಿ ಕಾಣಿಸುವ ಪ್ರಮುಖ ಪಾತ್ರಗಳೆಲ್ಲವರೂ ಹಿರಿಯ ವಯಸ್ಸಿನವರೇ ಆಗಿದ್ದಾರೆ. ಒಂದು ವಿಡಿಯೋದ ಶೀರ್ಷಿಕೆಯಲ್ಲಿ ’95 ವರ್ಷದ ಮುದುಕ 20 ವರ್ಷದ ಹುಡುಗಿಯನ್ನು ಮದುವೆಯಾಗುತ್ತಿದ್ದಾನೆ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಹೀಗಾಗಿ ವೈರಲ್ ವಿಡಿಯೋವನ್ನು ಸ್ಕ್ರಿಪ್ಟ್ ಮಾಡಲಾಗಿದೆ ಮತ್ತು ಮನರಂಜನಾ ಉದ್ದೇಶಗಳಿಗಾಗಿ ಮಾಡಲಾಗಿದೆ ಎಂದು ಟಿವಿ9 ಕನ್ನಡ ಸತ್ಯ ಪರಿಶೀಲನೆಯು ಸ್ಪಷ್ಟಪಡಿಸುತ್ತದೆ. ಆದ್ದರಿಂದ ಬಾಂಗ್ಲಾದೇಶದಲ್ಲಿ 76 ವರ್ಷದ ಮೊಹಮ್ಮದ್ ರೊಜೊಬ್ ಅಲಿ ನಾಲ್ಕನೇ ಬಾರಿಗೆ 12 ವರ್ಷದ ಹಿಂದೂ ಹುಡುಗಿಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ.

ತಂದೆ-ಮಗಳ ಮದುವೆ ವಿಡಿಯೋ ವೈರಲ್:

ಇತ್ತೀಚೆಗಷ್ಟೆ ತಂದೆ-ಮಗಳ ಮದುವೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ಒಂದು ವೈರಲ್ ಆಗಿತ್ತು. ಮಗಳು ಹೆಂಡತಿಯಾದಳು! ತಂದೆ ಪತಿಯಾದರು! ಹಿಂದಿ-ಭಾರತೀಯರಲ್ಲಿ ಇದು ಸಾಮಾನ್ಯ ಸಂಗತಿಯೇ? ಅವರು ಬಿಹಾರಿಗಳೇ? ಎಂಬ ಪೋಸ್ಟ್ ಈ ವಿಡಿಯೋದೊಂದಿಗೆ ವೈರಲ್ ಆಗಿತ್ತು. (). ಆದರೆ, ಇದು ಕೂಡ ಸ್ಕ್ರಿಪ್ಟ್ ಮಾಡಲಾದ ವಿಡಿಯೋ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Sun, 8 December 24

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್