Fact Check: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹೇಳಿದ್ದಕ್ಕೆ ಬಿಜೆಪಿ ಶಾಸಕರನ್ನು ಹೊರಹಾಕಿದ್ದು ನಿಜವೇ?
ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಿಜೆಪಿ ಶಾಸಕರನ್ನು ಹೊರಹಾಕಲಾಯಿತು ಎಂಬ ಹೇಳಿಕೆಯೊಂದಿಗೆ ಈ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕ ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ವಿಷಯ ಮತ್ತೊಮ್ಮೆ ಚರ್ಚೆಯಲ್ಲಿದೆ. ವಾಸ್ತವವಾಗಿ, ಆರ್ಟಿಕಲ್ 370 ಮತ್ತು 35-ಎ ಮರುಸ್ಥಾಪನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವ್ಯಕ್ತಿಯೊಬ್ಬರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಅದೇ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯನ್ನು ಕೆಲವರು ಎತ್ತಿಕೊಂಡು ಹೊರಗೆ ಕರೆದೊಯ್ಯುವುದನ್ನು ಕಾಣಬಹುದು. ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಿಜೆಪಿ ಶಾಸಕರನ್ನು ಹೊರಹಾಕಲಾಯಿತು ಎಂಬ ಹೇಳಿಕೆಯೊಂದಿಗೆ ಈ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕ ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ.
Fact Check:
ವೈರಲ್ ಕ್ಲೈಮ್ ಅನ್ನು ತನಿಖೆ ಮಾಡಲು ಟಿವಿ9 ಕನ್ನಡ ಸಂಬಂಧಿತ ಕೀವರ್ಡ್‌ಗಳೊಂದಿಗೆ ಗೂಗಲ್ನಲ್ಲಿ ಹುಡುಕಿದೆ. ಆಗ ನವೆಂಬರ್ 08, 2024 ರಂದು ಎಎನ್‌ಐ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ ನಾವು ವಿಡಿಯೋವನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ‘ಅಖಾಡ’ ಆಗಿ ಮಾರ್ಪಟ್ಟಿದೆ ಮತ್ತು ಬಾವಿಗೆ ಪ್ರವೇಶಿಸಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಆದೇಶದ ಮೇರೆಗೆ ಮಾರ್ಷಲ್‌ಗಳು ಹೊರಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ.
370 ನೇ ವಿಧಿಯನ್ನು ತೆಗೆದುಹಾಕುವ ವಿಷಯದ ಬಗ್ಗೆ ನವೆಂಬರ್ 8 ರಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕೋಲಾಹಲ ಮುಂದುವರೆದಿದೆ ಎಂದು ಈ ವಿಡಿಯೋದ ವಿವರಣೆಯಲ್ಲಿ ಹೇಳಲಾಗಿದೆ. ಕುಪ್ವಾರದ ಪಿಡಿಪಿ ಶಾಸಕ ಆರ್ಟಿಕಲ್ 370 ರ ಮರುಸ್ಥಾಪನೆಯ ಬ್ಯಾನರ್ ಅನ್ನು ತೋರಿಸಿದ ನಂತರ ಸದನದಲ್ಲಿ ಕೋಲಾಹಲ ಉಂಟಾಯಿತು, ಇದನ್ನು ಅನುಸರಿಸಿ ಬಿಜೆಪಿ ಶಾಸಕರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೋಗಿದರು. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರ ಆದೇಶದ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಅಧಿವೇಶನದ 5 ನೇ ದಿನವಾದ ನವೆಂಬರ್ 8 ರಂದು ಸದನದ ಬಾವಿಗೆ ಪ್ರವೇಶಿಸಿದ ಬಿಜೆಪಿ ಶಾಸಕರನ್ನು ಮಾರ್ಷಲ್‌ಗಳು ಹೊರಹಾಕಿದರು ಎಂಬ ಮಾಹಿತಿ ಇದೆ.
ಬಾರಾಮುಲ್ಲಾ ಲೋಕಸಭಾ ಕ್ಷೇತ್ರದ ಸಂಸದ ಇಂಜಿನಿಯರ್ ರಶೀದ್ ಅವರ ಸಹೋದರ ಖುರ್ಷಿದ್ ಅಹ್ಮದ್ ಶೇಖ್ ಅವರನ್ನು ಮಾರ್ಷಲ್‌ಗಳು ವಿಧಾನಸಭೆಯಿಂದ ಹೊರಗೆ ಕರೆದೊಯ್ದರು. ಸದನದಲ್ಲಿ 370ನೇ ವಿಧಿ ವಿರುದ್ಧ ತರಲಾದ ನಿರ್ಣಯವನ್ನು ಬಿಜೆಪಿ ನಿರಂತರವಾಗಿ ವಿರೋಧಿಸುತ್ತಿದೆ. ಈ ಅವಧಿಯಲ್ಲಿ ಸದನದಲ್ಲಿ ತಳ್ಳಾಟ, ಗದ್ದಲವೂ ಕಂಡು ಬಂತು. 370 ನೇ ವಿಧಿ ಮರುಸ್ಥಾಪನೆಗೆ ಸಂಬಂಧಿಸಿದ ಎರಡು ಪ್ರಸ್ತಾಪಗಳ ಮೇಲೆ ವಿಧಾನಸಭೆಯಲ್ಲಿ ಈ ಗದ್ದಲ ನಡೆದಿದೆ.
ಇದನ್ನೂ ಓದಿ: ಸಲೂನ್ ಅಂಗಡಿಯಲ್ಲಿ ತಲೆಗೆ ಮಸಾಜ್ ಮಾಡುವಾಗ ವ್ಯಕ್ತಿ ಸಾವನ್ನಪ್ಪಿದ್ದು ನಿಜವೇ?
ಹೀಗಾಗಿ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಬಿಜೆಪಿ ಶಾಸಕರನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಿಂದ ಹೊರಹಾಕಲಾಗಿಲ್ಲ. ವಿಧಾನಸಭೆಯ ಅಧಿವೇಶನದಲ್ಲಿ 370 ನೇ ವಿಧಿಯ ಗದ್ದಲದ ನಂತರ ಸ್ಪೀಕರ್ ಆದೇಶದ ಮೇರೆಗೆ ಮಾರ್ಷಲ್‌ಗಳಿಂದ ಇವರನ್ನು ಹೊರಹಾಕಲಾಯಿತು ಎಂದು ಟಿವಿ9 ಕನ್ನಡ ಸ್ಪಷ್ಟಪಡಿಸುತ್ತದೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:03 am, Fri, 15 November 24