Fact Check: ಗೌತಮ್ ಅದಾನಿಯನ್ನು ಬಂಧಿಸಿರುವುದು ನಿಜವೇ?: ವೈರಲ್ ಫೋಟೋದ ಸತ್ಯಾಂಶ ಏನು?

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವೈರಲ್ ಚಿತ್ರವು ನಿಜವಲ್ಲ ಎಂಬುದು ಕಂಡುಬಂದಿದೆ. ಇದು ಕೃತಕ ಬುದ್ಧಿಮತ್ತೆ (AI) ಉಪಕರಣದ ಸಹಾಯದಿಂದ ರಚಿಸಲಾದ ಫೋಟೋ ಆಗಿದೆ.

Fact Check: ಗೌತಮ್ ಅದಾನಿಯನ್ನು ಬಂಧಿಸಿರುವುದು ನಿಜವೇ?: ವೈರಲ್ ಫೋಟೋದ ಸತ್ಯಾಂಶ ಏನು?
Fact Check
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Nov 28, 2024 | 10:36 AM

ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರು ಅಮೆರಿಕದ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಅಮೆರಿಕದ ನ್ಯಾಯಾಲಯವೊಂದು ಗೌತಮ್ ಅದಾನಿ ಮತ್ತು ಇತರ ಏಳು ಜನರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ. ಇದಕ್ಕೆ ಪೂರಕವಾಗಿ ಗೌತಮ್ ಅದಾನಿ ಅವರ ಫೋಟೋ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಇವರನ್ನು ಬಂಧಿಸಿರುವುದನ್ನು ಕಾಣಬಹುದು.

ವೈರಲ್ ಆಗುತ್ತಿರುವುದು ಏನು?

ನವೆಂಬರ್ 21, 2024 ರಂದು ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ, ‘‘ಯುಎಸ್ ಫೆಡರಲ್ ನ್ಯಾಯಾಲಯವು ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಬಂಧನ ವಾರಂಟ್ ಹೊರಡಿಸಿದೆ. ಈ ಬಂಧನ ವಾರಂಟ್ ಅನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೂ ಕಳುಹಿಸಲಾಗುತ್ತದೆ. ಇದು ಮೋದಿ ಸರಕಾರಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವೈರಲ್ ಚಿತ್ರವು ನಿಜವಲ್ಲ ಎಂಬುದು ಕಂಡುಬಂದಿದೆ. ಇದು ಕೃತಕ ಬುದ್ಧಿಮತ್ತೆ (AI) ಉಪಕರಣದ ಸಹಾಯದಿಂದ ರಚಿಸಲಾದ ಫೋಟೋ ಆಗಿದೆ. ನವೆಂಬರ್ 21, 2024 ರಂದು ಟಿವಿ9 ಹಿಂದಿಯಲ್ಲಿ ಪ್ರಕಟವಾದ ವರದಿಯ ಪ್ರಕಾರ, ಅದಾನಿ ಗ್ರೂಪ್ ಭಾರತದಲ್ಲಿ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ $ 265 ಮಿಲಿಯನ್ ಅಥವಾ ಸುಮಾರು 2200 ಕೋಟಿ ರೂಪಾಯಿಗಳ ಲಂಚವನ್ನು ನೀಡಿದೆ ಎಂದು ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿ ಹೇಳುತ್ತದೆ. ಮುಂದಿನ 20 ವರ್ಷಗಳಲ್ಲಿ ಅದಾನಿ ಗ್ರೂಪ್ ಇದರಿಂದ 2 ಬಿಲಿಯನ್ ಡಾಲರ್ ಲಾಭ ಗಳಿಸುವ ನಿರೀಕ್ಷೆ ಇತ್ತು. ಲಂಚದ ಹಣವನ್ನು ಸಂಗ್ರಹಿಸಲು ಅದಾನಿ ಅಮೆರಿಕ, ವಿದೇಶಿ ಹೂಡಿಕೆದಾರರು ಮತ್ತು ಬ್ಯಾಂಕ್‌ಗಳಿಗೆ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಅಮೆರಿಕದ ಹೂಡಿಕೆದಾರರ ಹಣವನ್ನು ಯೋಜನೆಯಲ್ಲಿ ಹೂಡಿಕೆ ಮಾಡಿರುವುದರಿಂದ ಅಮೆರಿಕದಲ್ಲಿ ಪ್ರಕರಣ ದಾಖಲಾಗಿದೆ. ಯುಎಸ್ ಕಾನೂನಿನ ಪ್ರಕಾರ, ಆ ಹಣವನ್ನು ಲಂಚವಾಗಿ ನೀಡುವುದು ಅಪರಾಧ ಎಂದು ಬರೆಯಲಾಗಿದೆ.

ಮತ್ತೊಂದು ವರದಿಯ ಪ್ರಕಾರ, ಅದಾನಿ ಗ್ರೂಪ್ SEC ಮಾಡಿದ ಆರೋಪಗಳನ್ನು ನಿರಾಕರಿಸಿದೆ. ನಮ್ಮ ಗುಂಪು ಪಾರದರ್ಶಕತೆ ಮತ್ತು ಎಲ್ಲಾ ನಿಯಮಗಳನ್ನು ಅನುಸರಿಸುತ್ತದೆ. ಭವಿಷ್ಯದಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸುತ್ತದೆ ಎಂದು ಅದಾನಿ ಗ್ರೂಪ್ ಷೇರುದಾರರಿಗೆ ಭರವಸೆ ನೀಡಿದೆ.

ಈ ಮೂಲಕ ಅದಾನಿಯನ್ನು ಬಂಧಿಸಲಾಗಿದೆ ಎಂಬ ಆರೋಪ ಹುಸಿ ಎಂಬುದು ನಮ್ಮ ತನಿಖೆಯಿಂದ ಸ್ಪಷ್ಟವಾಗಿದೆ. ಇದಿಷ್ಟೆ ಅಲ್ಲದೆ ಸಂಬಂಧಿತ ಕೀವರ್ಡ್‌ಗಳನ್ನು ಬಳಸಿ ನಾವು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದೇವೆ. ಆಗ ಅದಾನಿಯನ್ನು ಬಂಧಿಸಲಾಗಿಲ್ಲ ಎಂದು ಕಂಡುಬಂದಿದೆ. ಅದಾನಿಯನ್ನು ಬಂಧಿಸಿದ್ದರೆ ಅದು ಸುದ್ದಿಯಾಗುತ್ತಿತ್ತು. ಅಂಥದ್ದೇನೂ ಆಗಲಿಲ್ಲ. ಅಮೆರಿಕದ ನ್ಯಾಯಾಲಯ ನೀಡಿರುವ ಬಂಧನ ವಾರಂಟ್ ಬಗ್ಗೆ ಅದಾನಿ ಸಮೂಹದ ಪ್ರತಿಕ್ರಿಯೆಯನ್ನೂ ನೋಡಿದ್ದೇವೆ. ತಮ್ಮ ಗುಂಪು ಯಾವುದೇ ವಂಚನೆ ಮಾಡಿಲ್ಲ ಮತ್ತು ಕಾನೂನು ವ್ಯವಸ್ಥೆಗಳೊಂದಿಗೆ ಹೋರಾಡುತ್ತೇವೆ ಎಂದು ಅದಾನಿ ಗ್ರೂಪ್ ಹೇಳಿಕೆಯನ್ನು ಇಲ್ಲಿ ನೋಡಬಹುದು.

ನಂತರ ನಾವು ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಿದ್ದೇವೆ. ಇದರಲ್ಲಿ ಅವರನ್ನು ಬಂಧಿಸಿರುವುದನ್ನು ಕಾಣಬಹುದು. ಈ ಚಿತ್ರದಲ್ಲಿ ಅನೇಕ ನ್ಯೂನತೆಗಳು ಕಂಡುಬಂದಿವೆ. ಅದಾನಿಯ ತೋಳನ್ನು ಹಿಡಿಯುವ ಪೊಲೀಸ್ ಅಧಿಕಾರಿ ಆರು ಬೆರಳುಗಳನ್ನು ಹೊಂದಿದ್ದಾನೆ. ಅಧಿಕಾರಿಗಳ ಮುಖಗಳು ವಿರೂಪಗೊಂಡಂತೆ ಕಂಡುಬರುತ್ತವೆ. ಇದು AI ಉಪಕರಣಗಳ ಸಹಾಯದಿಂದ ತಯಾರಿಸುವ ಸಾಧ್ಯತೆಯನ್ನು ತೋರಿಸುತ್ತದೆ.

ಇದನ್ನೂ ಓದಿ: Fact Check: ಎಳನೀರು ಮಾರುತ್ತಿರುವ ತನ್ನ ತಾಯಿಗೆ ಸರ್​ಪ್ರೈಸ್ ನೀಡಿದ ಸೈನಿಕ: ಈ ವಿಡಿಯೋ ಶೇರ್ ಮಾಡುವ ಮುನ್ನ ಎಚ್ಚರ

ಆದ್ದರಿಂದ ನಾವು AI-ಚಾಲಿತ ಮಲ್ಟಿಮೀಡಿಯಾ ತಪಾಸಣೆ ಸಾಧನಗಳೊಂದಿಗೆ ಈ ಚಿತ್ರವನ್ನು ಪರಿಶೀಲಿಸಿದ್ದೇವೆ. ಹೈವ್ ಮಾಡರೇಶನ್ ಮತ್ತು ಸೈಟ್ ಎಂಜಿನ್ ಪರಿಕರಗಳ ವಿಶ್ಲೇಷಣೆಯಲ್ಲಿ, AI ನಿಂದ ಈ ಫೋಟೋವನ್ನು ರಚಿಸುವ ಸಂಭವನೀಯತೆ 100 ಪ್ರತಿಶತವಾಗಿದೆ.

ಹೀಗಾಗಿ ಗೌತಮ್ ಅದಾನಿಯನ್ನು ಬಂಧಿಸಲಾಗಿದೆ ಎಂಬ ಹೇಳಿಕೆ ಸುಳ್ಳು ಮತ್ತು ಈ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ಚಿತ್ರವನ್ನು AI ಉಪಕರಣದ ಸಹಾಯದಿಂದ ರಚಿಸಲಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್