AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

ಮದುವೆಯ ದಿನ ವಧು ಸಂಪ್ರದಾಯ ಬದ್ಧವಾಗಿ ರೇಶ್ಮೆ ಸೀರೆ ಅಥವಾ ಲೆಹಾಂಗ ತೊಡುತ್ತಾಳೆ. ಆದ್ರೆ ಇತ್ತೀಚಿಗೆ ಲಕ್ನೋದ ವಧುವೊಬ್ಬಳು ಸೀರೆ, ಲೆಹಂಗಾ ಬದಲು ಬನಾರಸಿ ಬಿಕಿನಿ ತೊಟ್ಟು ಹಸೆಮಣೆ ಏರಿದ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಮದುಮಗಳು ಬಿಕಿನಿ ತೊಟ್ಟು ಹಸೆಮಣೆ ಏರಿದ್ದು ನಿಜಾನಾ? ಈ ವೈರಲ್‌ ಫೋಟೊದ ಹಿಂದಿನ ಸತ್ಯಾಂಶ ಏನೆಂಬುದನ್ನು ನೋಡೋಣ.

Fact Check: ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Dec 04, 2024 | 5:10 PM

Share

ಮದುವೆ ಸಮಾರಂಭಗಳಲ್ಲಿ ಮದುಮಕ್ಕಳು ಸೇರಿದಂತೆ, ವಿವಾಹ ಸಮಾರಂಭಕ್ಕೆ ಆಗಮಿಸುವ ಪ್ರತಿಯೊಬ್ಬರು ಕೂಡಾ ಸೀರೆ, ಲೆಹಂಗಾ, ಪಂಚೆ, ಶೇರ್ವಾನಿ ಇತ್ಯಾದಿ ಸಾಂಪ್ರದಾಯಿಕ ಉಡುಗೆಗಳನ್ನೇ ತೊಡುತ್ತಾರೆ. ಆದ್ರೆ ಇತ್ತೀಚಿಗೆ ಲಕ್ನೋದ ವಧುವೊಬ್ಬಳು ಸಾಂಪ್ರದಾಯಿಕ ಉಡುಗೆಗಳಾದಂತಹ ಸೀರೆ, ಲೆಹಂಗಾ ಬಿಟ್ಟು ಹಳದಿ ಬಣ್ಣದ ಬನಾರಸಿ ಬಿಕಿನಿ ತೊಟ್ಟು ಹಸೆಮಣೆ ಏರಿದಂತಹ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಫೋಟೋ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು. ಲಕ್ನೋದ ವಧು ಬಿಕಿನಿ ತೊಟ್ಟು ಹಸೆಮಣೆ ಏರಿದ್ದು ನಿಜಾನಾ? ಈ ವೈರಲ್‌ ಫೋಟೊದ ಹಿಂದಿನ ಸತ್ಯಾಂಶ ಇಲ್ಲಿದೆ.

ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ?

ಇತ್ತೀಚಿಗಂತೂ ಹೆಚ್ಚಾಗಿ ಯಾವುದೋ ಒಬ್ಬ ವ್ಯಕ್ತಿಯ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಎಐ ತಂತ್ರಜ್ಞಾನದಿಂದ ರಚಿತವಾದ ಡೀಪ್‌ ಫೇಕ್‌ ವಿಡಿಯೋಗಳು, ಫೋಟೋಗಳೇ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅದರಲ್ಲೂ ಸೆಲೆಬ್ರಿಟಿಗಳಿಗ ಡೀಪ್‌ಫೇಕ್‌ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ವಧು ಬಿಕಿನಿ ತೊಟ್ಟು ಹಸೆಮಣೆ ಏರಿದಂತಹ ಫೋಟೋ ಕೂಡಾ ಎಐ ರಚಿತ ಫೋಟೋವಾಗಿದ್ದು, ಇದು ನೈಜ ಘಟನೆಯಲ್ಲ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: ಬಾತ್ ಟವೆಲ್ ತೊಟ್ಟು ಮೆಟ್ರೋದಲ್ಲಿ ಸುತ್ತಿದ ಬೆಡಗಿಯರು; ವಿಡಿಯೋ ವೈರಲ್

ವೈರಲ್​​ ವಿಡಿಯೋ  ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಶೇರ್ವಾನಿ ಧರಿಸಿ ನಿಂತಿದ್ದ ವರನ ಪಕ್ಕದಲ್ಲಿ ಹಳದಿ ಬಣ್ಣದ ಬನಾರಸಿ ಬಿಕಿನಿ ತೊಟ್ಟು ನಿಂತಿದ್ದ ವಧು ವರಮಾಲೆಯನ್ನು ಕೈಯಲ್ಲಿ ಹಿಡಿದು ನಿಂತಿದ್ದ ಫೋಟೋ ವೈರಲ್‌ ಆಗಿತ್ತು. ಇದು ಲಕ್ನೋದ ವಧು ಎಂದು ಸುಳ್ಳು ಸುದ್ದಿಯನ್ನು ಕೂಡಾ ಹಬ್ಬಿಸಲಾಗಿತ್ತು. ವಾಸ್ತವದಲ್ಲಿ ಇದು ನೈಜ ಘಟನೆಯಲ್ಲ ಬದಲಿಗೆ ಇದೊಂದು ಎಐ ರಚಿತ ಫೋಟೋವಾಗಿದೆ.

Marriage season byu/Son-Prodigal inDesiAdultfusion

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:59 am, Mon, 2 December 24

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್