Fact Check: ಸ್ವಂತ ಅಣ್ಣನನ್ನೇ ಮದುವೆಯಾಗಿ ಗರ್ಭಿಣಿಯಾದ ತಂಗಿ?: ವೈರಲ್ ವಿಡಿಯೋದ ನಿಜಾಂಶ ಇಲ್ಲಿದೆ
ಇನ್ಸ್ಟಾ, ಎಕ್ಸ್ನಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮನೆಯವರ ವಿರೋಧದ ನಡುವೆಯೂ ತನ್ನ ಸಹೋದರಿಯನ್ನು ಮದುವೆಯಾದನೆಂದು ಹೇಳಿಕೊಳ್ಳುವ ಒಬ್ಬ ಹುಡುಗ ಹುಡುಗಿ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾನೆ. ಸಹೋದರ-ಸಹೋದರಿಯರ ಮದುವೆ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದ ಸತ್ಯಾಸತ್ಯತೆನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಇದನ್ನು ಮನರಂಜನಾ ಉದ್ದೇಶಕ್ಕಾಗಿ ಮಾತ್ರ ರಚಿಸಲಾಗಿದೆ ಎಂದು ತಿಳಿದುಬಂದಿದೆ.
ಹುಡುಗಿಯೊಬ್ಬಳು ತನ್ನ ಸಹೋದರನನ್ನು ಮದುವೆಯಾಗುವುದಾಗಿ ಒಪ್ಪಿಕೊಂಡು ಮಗುವನ್ನು ಪಡೆಯುತ್ತಿದ್ದೇನೆ ಎಂದು ಹೇಳುವ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು ಈ ನೈಜ್ಯ ಘಟನೆ ಎಂದು ನಂಬಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. 1 ನಿಮಿಷದ 30 ಸೆಕೆಂಡ್‌ಗಳ ವಿಡಿಯೋದಲ್ಲಿ, ಹುಡುಗಿಯೊಬ್ಬಳು ತನ್ನ ಸಹೋದರನನ್ನು ಮದುವೆಯಾಗಿ ಒಂದೂವರೆ ತಿಂಗಳಿನ ಗರ್ಭಿಣಿಯಾಗಿದ್ದಾಳೆ ಎಂದು ಹೇಳುತ್ತಿರುವುದು ಕಂಡುಬರುತ್ತದೆ.
ಇನ್ಸ್ಟಾ, ಎಕ್ಸ್ನಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮನೆಯವರ ವಿರೋಧದ ನಡುವೆಯೂ ತನ್ನ ಸಹೋದರಿಯನ್ನು ಮದುವೆಯಾದನೆಂದು ಹೇಳಿಕೊಳ್ಳುವ ಒಬ್ಬ ಹುಡುಗ ಹುಡುಗಿ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾನೆ. ಸಹೋದರ-ಸಹೋದರಿಯರ ಮದುವೆ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.
View this post on Instagram
Fact Check:
ಈ ವಿಡಿಯೋದ ಸತ್ಯಾಸತ್ಯತೆನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಇದನ್ನು ಮನರಂಜನಾ ಉದ್ದೇಶಕ್ಕಾಗಿ ಮಾತ್ರ ರಚಿಸಲಾಗಿದೆ ಎಂದು ತಿಳಿದುಬಂದಿದೆ. ಕನ್ಹಯ್ಯಾ ಸಿಂಗ್ ಎಂಬ ಕಂಟೆಂಟ್ ಕ್ರಿಯೇಟರ್‌ನಿಂದ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ವಿಡಿಯೋವು ಮನರಂಜನಾ ಉದ್ದೇಶಗಳಿಗಾಗಿ ಮಾಡಲ್ಪಟ್ಟಿದೆ ಎಂದು ಕ್ಲಿಪ್ನ ಮಧ್ಯದಲ್ಲಿ ತೋರಿಸಲಾಗಿದೆ.
ಮೊದಲಿಗೆ ನಾವು ನಿಜಾಂಶವನ್ನು ತಿಳಿದುಕೊಳ್ಳಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ್ಯಂತ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ. ಆಗ ಫೇಸ್‌ಬುಕ್‌ನಲ್ಲಿ ಕಂಟೆಂಟ್ ಕ್ರಿಯೆಟರ್ನ ಪ್ರೊಫೈಲ್ ಅನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಕನ್ಹಯ್ಯಾ ಸಿಂಗ್ ಎಂಬವರು 1 ಜನವರಿ 2025 ರಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ವೈರಲ್ ವಿಡಿಯೋ ದೀರ್ಘ ಆವೃತ್ತಿಯನ್ನು ಅಪ್‌ಲೋಡ್ ಮಾಡಿದ್ದಾರೆ.
ವಿಡಿಯೋದ ದೀರ್ಘ ಆವೃತ್ತಿಯಲ್ಲಿ, ಹುಡುಗ ತನ್ನ ಸ್ವಂತ ಸಹೋದರನಲ್ಲ, ಆದರೆ ತನ್ನ ತಾಯಿಯ ಚಿಕ್ಕಪ್ಪನ ಮಗ ಎಂದು ಹುಡುಗಿ ಹೇಳುತ್ತಿರುವುದು ನೋಡಬಹುದು. ವಿಡಿಯೋಯೊವನ್ನು ನಿರ್ಮಿಸಿದ ರಚನೆಕಾರ ತನ್ನ ಫೇಸ್‌ಬುಕ್ ಬಯೋದಲ್ಲಿ “ತಮಾಷೆ ವಿಡಿಯೋ” ಮಾಡುವ ” ವಿಡಿಯೋ ಕ್ರಿಯೆಟರ್” ಎಂದು ತನ್ನನ್ನು ಉಲ್ಲೇಖಿಸಿಕೊಳ್ಳುವುದನ್ನು ನಾವು ಗಮನಿಸಿದ್ದೇವೆ. ಸಿಂಗ್ ಅವರ ಫೇಸ್‌ಬುಕ್ ಪುಟದಲ್ಲಿ ಇಂತಹ ಇನ್ನಷ್ಟು ಸ್ಕ್ರಿಪ್ಟ್ ವಿಡಿಯೋಗಳು ಇವೆ.
ಈ ಮಾಹಿತಿಯ ಆಧಾರದ ಮೇಲೆ ಹುಡುಗಿಯೊಬ್ಬಳು ತನ್ನ ಸಹೋದರನನ್ನು ಮದುವೆಯಾಗಿ ಒಂದೂವರೆ ತಿಂಗಳಿನ ಗರ್ಭಿಣಿಯಾಗಿದ್ದಾಳೆ ಎಂದು ಹೇಳುತ್ತಿರುವ ಈ ವಿಡಿಯೋ ಸ್ಕ್ರಿಪ್ಟ್ ಮಾಡಿರುವುದು ಎಂದು ನಾವು ಖಚಿತವಾಗಿ ಹೇಳುತ್ತೇವೆ.
ಈ ರೀತಿಯ ಸ್ಕ್ರಿಪ್ಟ್ ಮಾಡಿದ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಕೆಲವು ಅಮಾಯಕರು ಇದನ್ನು ನಿಜವೆಂದು ಪರಿಗಣಿಸಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಸಲೂನ್ ಅಂಗಡಿಯಲ್ಲಿ ತಲೆಗೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೌರಿಕರು ತಲೆ ಮತ್ತು ಕುತ್ತಿಗೆಗೆ ಹೊಡೆಯುವ ಮೂಲಕ ಮಸಾಜ್ ಮಾಡುತ್ತಾರೆ. ಮಸಾಜ್ ಸಮಯದಲ್ಲಿ ಯುವಕನು ಅಸ್ವಸ್ಥಗೊಂಡಿರುವುದು ಕಂಡುಬರುತ್ತದೆ.
ಈ ವಿಡಿಯೋವನ್ನು ಅನೇಕರಿ ಶೇರ್ ಮಾಡಿ, ಕಟ್ಟಿಂಗ್ ಸಲೂನ್ ಗಳಲ್ಲಿ ಮಸಾಜ್ ಮಾಡಿಸಿಕೊಳ್ಳುವ ಮುನ್ನ ಎಚ್ಚರ. ಇದು ಎಷ್ಟು ಅಪಾಯಕಾರಿ ಎಂಬುದನ್ನು ಈ ವಿಡಿಯೋನಲ್ಲಿ ನೋಡಿ. ಜಾಗ್ರತೆಯಾಗಿರಿ ಎಂದು ಬರೆದುಕೊಂದ್ದರು. ಈ ವಿಡಿಯೋವನ್ನು ನೀವು ಇಲ್ಲಿ ನೋಡಬಹುದು.
ಆದರೆ, ಇದರಲ್ಲಿ ಯಾವುದೂ ನಿಜವಿಲ್ಲ, ಇದು ಕೂಡ ಒಂದು ಸ್ಕ್ರಿಪ್ಟ್ ಮಾಡಿದ ವಿಡಿಯೋ ಆಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಈ ವಿಡಿಯೋ ಮಾಡಲಾಗಿದೆಯಂತೆ. ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಈ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಮಾಡಿರುವ ವಿಡಿಯೋವನ್ನು ಅಸಲಿ ಎಂದು ಪರಿಗಣಿಸಿ ಅನೇಕರು ಸಾಮಾಜಿಕ ತಾಣಗಳಲ್ಲಿ ಶೇರ್ ಮಾಡಿದ್ದರು.
ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ