AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಕೊರೋನಾ ಮುಕ್ತವಾದ ‘ವಿಶ್ವ’? ಕೋವಿಡ್ -19 ನಮ್ಮ ಹತ್ತಿರ ಎಲ್ಲಿಯೂ ಇಲ್ಲ ಎಂದ WHO ಮಹಾನಿರ್ದೇಶಕ

ಜನರ ಬದುಕನ್ನು ದುಸ್ಥಿತಿಗೆ ತಳ್ಳಿದ ಮಹಾಮಾರಿ ಕೊರೋನಾ ವಿಶ್ವದಿಂದಲೇ ತೊಲಗಿದೆಯಾ? ಕೋವಿಡ್-19 ಜನರ ಬಳಿ ಇಲ್ಲ ಎಂದು WHO ಮಹಾನಿರ್ದೇಶಕರು ಹೇಳಿರುವುದು ನಿಜವೇ? ಈ ಬಗ್ಗೆ ನಡೆಸಿದ ಫ್ಯಾಕ್ಟ್ ಚೆಕ್ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ.

Fact Check: ಕೊರೋನಾ ಮುಕ್ತವಾದ 'ವಿಶ್ವ'? ಕೋವಿಡ್ -19 ನಮ್ಮ ಹತ್ತಿರ ಎಲ್ಲಿಯೂ ಇಲ್ಲ ಎಂದ WHO ಮಹಾನಿರ್ದೇಶಕ
WHO ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್
TV9 Web
| Updated By: Rakesh Nayak Manchi|

Updated on: Jul 14, 2022 | 11:05 AM

Share

ಇಡೀ ವಿಶ್ವದ ಆರ್ಥಿಕ ಸ್ಥಿತಿಗತಿ ಹಾಗೂ ಜನರ ಬದುಕನ್ನು ದುಸ್ಥಿತಿಗೆ ತಳ್ಳಿದ ಮಹಾಮಾರಿ ಕೊರೋನಾದ ಬಗ್ಗೆ ಅಚ್ಚರಿಯ ಸುದ್ದಿಯೊಂದು ಹರಿದಾಡುತ್ತಿದೆ. ಅದರಲ್ಲೂ ವಿಶ್ವ ಆರೋಗ್ಯ ಸಂಸ್ಥೆ (WHO) ಮಹಾನಿರ್ದೇಶಕರು ಹೇಳಿದ್ದಾಗಿ ಸುದ್ದಿ ಹರಿದಾಡುತ್ತಿರುವುದು ಕುತೂಹಲ ಕೆರಳಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಂತೆ, “ಧನ್ಯವಾದ ದೇವರೆ, ಕೋವಿಡ್ -19 ನಮ್ಮ ಹತ್ತಿರ ಎಲ್ಲಿಯೂ ಇಲ್ಲ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ( Tedros Adhanom Ghebreyesus) ಹೇಳಿದ್ದಾಗಿ ಸುದ್ದಿಯೊಂದು ಹರಿದಾಡುತ್ತಿದೆ.

ಇದನ್ನೂ ಓದಿ: Viral Video: ಗೋಲ್ಗಪ್ಪ ಪ್ರಿಯರೇ ಇಲ್ಲಿ ನೋಡಿ… ಗೋಲ್ಗಪ್ಪ ನೀರಿನ ರುಚಿಯನ್ನು ಹೆಚ್ಚಿಸಲು ಟಾಯ್ಲೆಟ್ ಕ್ಲೀನರ್ ಬಳಕೆ

“COVID-19 ನಮ್ಮ ಹತ್ತಿರ ಎಲ್ಲಿಯೂ ಇಲ್ಲ,” ಎಂದು ಪಂಜಾಬಿ ನ್ಯೂಸ್ ಪೋರ್ಟಲ್‌ನ ಪೋಸ್ಟ್​ನಲ್ಲಿ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರನ್ನು ಉಲ್ಲೇಖಿಸಿದ್ದು, AFWA ನಡೆಸಿದ ಫ್ಯಾಕ್ಟ್​ ಚೆಕ್​ನಲ್ಲಿ ಇದು ಸುಳ್ಳು ಎಂದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಂತೆ “ಕೋವಿಡ್ -19 ನಮ್ಮ ಹತ್ತಿರ ಎಲ್ಲಿಯೂ ಇಲ್ಲ” ಎಂದು WHO ಮುಖ್ಯಸ್ಥರು ಎಲ್ಲೂ ಹೇಳಿಲ್ಲ. ಬದಲಾಗಿ “ವೈರಸ್‌ನ ಹೊಸ ಅಲೆಗಳು ಎಲ್ಲಿಯೂ ಹತ್ತಿರದಲ್ಲಿಲ್ಲ ಎಂಬುದನ್ನಷ್ಟೇ ಹೇಳಿರುವುದು ಫ್ಯಾಕ್ಟ್​ ಚೆಕ್​ನಲ್ಲಿ ತಿಳಿದುಬಂದಿದೆ.

ವೈರಲ್ ಆಗುತ್ತಿರುವ ಪೋಸ್ಟ್ ಕೆನಡಾ ಮೂಲದ ಪಂಜಾಬಿ ಟಿವಿ ಚಾನೆಲ್ ಪ್ರೈಮ್ ಏಷ್ಯಾ ಟಿವಿಯ ಲೋಗೋವನ್ನು ಹೊಂದಿದೆ. ಈ ಸುದ್ದಿಯ ಫೇಸ್‌ಬುಕ್ ಪೋಸ್ಟ್ ಅನ್ನು ಪರಿಶೀಲಿಸಿದಾಗ ಅದೇ ಪೋಸ್ಟ್ ಅನ್ನು ಅಲ್ಲಿ ಕಂಡುಬಂದಿದೆ. ಅದೇ ಪೋಸ್ಟ್ ಅನ್ನು ಪಂಜಾಬ್ ಟುಡೆ 24 ಮತ್ತು ಪಂಜಾಬ್ ಲೈವ್‌ನಲ್ಲಿ ಸಹ ಹಂಚಿಕೊಳ್ಳಲಾಗಿದೆ. ವಾಸ್ತವವಾಗಿ ಕೋವಿಡ್ ಹೆಮ್ಮಾರಿ ಜನರ ನಡುವೆಯಿಂದ ಮುಕ್ತವಾಗಿಲ್ಲ.

ಇದನ್ನೂ ಓದಿ: Viral Video: ಟೋಲ್ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡ “ದಿ ಗ್ರೇಟ್ ಖಲಿ”

ಡಬ್ಲ್ಯೂಎಚ್​ಒ ಮುಖ್ಯಸ್ಥರು ಹೇಳಿದ್ದೇನು?

“ವೈರಸ್‌ನ ಹೊಸ ಅಲೆಗಳು ಕೋವಿಡ್ -19 ಎಲ್ಲಿಯೂ ಹತ್ತಿರದಲ್ಲಿಲ್ಲ ಎಂದು ಮತ್ತೆ ತೋರಿಸುತ್ತವೆ” ಎಂದು ಜುಲೈ 12 ರಂದು ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. “ವೈರಸ್ ಮುಕ್ತವಾಗಿ ಚಾಲನೆಯಲ್ಲಿದೆ. ತೀವ್ರತರವಾದ ಪ್ರಕರಣಗಳಿಗೆ ಆಸ್ಪತ್ರೆಗೆ ದಾಖಲಾಗುವ ಮತ್ತು ಜನರ ಸಂಖ್ಯೆ ಹೆಚ್ಚುತ್ತಿರುವ ದೇಶಗಳು ತಮ್ಮ ಸಾಮರ್ಥ್ಯದ ಆಧಾರದ ಮೇಲೆ ರೋಗದ ಹೊರೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿಲ್ಲ. ಕೋವಿಡ್-19 ಸ್ಥಿತಿಯನ್ನು ಸಾಮಾನ್ಯವಾಗಿ ದೀರ್ಘ ಕೋವಿಡ್ ಎಂದು ಕರೆಯಲಾಗುತ್ತದೆ. ವೈಜ್ಞಾನಿಕ ಸಮುದಾಯಗಳು, ರಾಜಕಾರಣಿಗಳು ಮತ್ತು ಸಾರ್ವಜನಿಕರ ನಡುವೆ ರೋಗದ ಅಪಾಯದ ಗ್ರಹಿಕೆಯಲ್ಲಿ ಸಂಪರ್ಕ ಕಡಿತಗೊಂಡಿದೆ ಎಂದು ಅಧಾನೊಮ್ ಘೆಬ್ರೆಯೆಸಸ್ ಹೇಳಿದರು.

ಇದನ್ನೂ ಓದಿ: Viral News: ಬಾಲಕನನ್ನು ಮೊಸಳೆ ನುಂಗಿದೆ ಎಂದುಕೊಂಡ ಜನ; ಹುಡುಗನ ಕಾಪಾಡಲು ಮಾಡಿದ ಪ್ಲಾನ್ ಏನು ಗೊತ್ತಾ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ