AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದೆಂಥಾ ಫುಟ್ಬಾಲ್‌ ಪ್ರೇಮ; ಸಾವಿನ ಮನೆಯಲ್ಲಿ ಶವದ ಮುಂದೆ ಫುಟ್ಬಾಲ್‌ ಮ್ಯಾಚ್‌ ವೀಕ್ಷಿಸಿದ ಕುಟುಂಬಸ್ಥರು

ಒಂದು ಮನೆಯಲ್ಲಿ ಸಾವು ಸಂಭವಿಸಿದರೆ ಅಲ್ಲಿ ದುಃಖದ ವಾತಾವರಣ ಮಡುಗಟ್ಟಿರುತ್ತದೆ. ಎಲ್ಲರ ಕಣ್ಣಲ್ಲೂ ಕಣ್ಣೀರು ತುಂಬಿರುತ್ತದೆ. ಆದರೆ ಇಲ್ಲೊಂದು ಸಾವಿನ ಮನೆಯಲ್ಲಿ ದುಃಖವನ್ನೆಲ್ಲಾ ಮರೆತು ಶವದ ಮುಂದೆಯೇ ಕುಟುಂಬಸ್ಥರು ಹಾಯಾಗಿ ಕುಳಿತು ಫುಟ್ಬಾಲ್‌ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಇದೆಂಥಾ ಫುಟ್ಬಾಲ್‌ ಪ್ರೇಮ; ಸಾವಿನ ಮನೆಯಲ್ಲಿ ಶವದ ಮುಂದೆ ಫುಟ್ಬಾಲ್‌ ಮ್ಯಾಚ್‌ ವೀಕ್ಷಿಸಿದ ಕುಟುಂಬಸ್ಥರು
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 04, 2024 | 5:29 PM

Share

ಸಾವಿನ ಮನೆಯ ಸೂಕಕ ಹೇಳತೀರದು. ಬಂಧು ಬಳಗದವರು ತಮ್ಮ ಆಪ್ತಕರನ್ನು ಕಳೆದುಕೊಂಡು ದುಃಖವನ್ನು ಸಹಿಸಿಕೊಳ್ಳಲಾರದೆ ಮೃತ ದೇಹದ ಮುಂದೆ ಕಣ್ಣೀರು ಹಾಕುತ್ತಾ ಕುಳಿತಿರುತ್ತಾರೆ. ಇಂತಹ ಒಳ್ಳೆ ವ್ಯಕ್ತಿ ಮತ್ತೆ ಬಾರನೆಂಬ ಬೇಸರವನ್ನು ಹೊರಹಾಕುತ್ತಿರುತ್ತಾರೆ. ಒಟ್ಟಿನಲ್ಲಿ ಸಾವಿನ ಮನೆಯಲ್ಲಿ ಸೂತಕದ ಛಾಯೆ ಆವರಿಸಿರುತ್ತದೆ. ಆದರೆ ಇಲ್ಲೊಂದು ಸಾವಿನ ಮನೆಯಲ್ಲಿ ಬಂಧು-ಬಳಗದವರು ಜೊತೆಯಾಗಿ ಶವದ ಮುಂದೆಯೇ ದೊಡ್ಡ ಪ್ರೊಜೆಕ್ಟರ್‌ ಅಳವಡಿಸಿ ಫುಟ್‌ಬಾಲ್‌ ಪಂದ್ಯವನ್ನು ವೀಕ್ಷಿಸಿದ್ದಾರೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಘಟನೆ ಚಿಲಿ ದೇಶದಲ್ಲಿ ನಡೆದಿದ್ದು, ಸಾವಿನ ಮನೆಯಲ್ಲಿ ಶವದ ಮುಂದೆಯೇ ಕುಟುಂಬಸ್ಥರು ತಮ್ಮ ದುಃಖವನ್ನೆಲ್ಲಾ ಮರೆತು ದೊಡ್ಡ ಪ್ರೊಜೆಕ್ಟರ್‌ನಲ್ಲಿ ಚಿಲಿ ಮತ್ತು ಪೆರು ನಡುವಿನ ರೋಚಕ ಕೋಪಾ ಅಮೇರಿಕನ್‌ ಫುಟ್ಬಾಲ್‌ ಪಂದ್ಯವನ್ನು ವೀಕ್ಷಿಸಿದ್ದಾರೆ.

VisionPais2050 ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದ್ದು, “ಇದು ಇಂದು ನಾವು ನೋಡುತ್ತಿರುವ ಅತ್ಯಂತ ವಿಚಿತ್ರ ಸಂಗತಿಯಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ (ಎಕ್ಸ್​​​ ಖಾತೆಯಿಂದ)

ವೈರಲ್‌ ವಿಡಿಯೋದಲ್ಲಿ ಶವದ ಮುಂದೆಯೇ ಕುಟುಂಬಸ್ಥರು ರೋಚಕ ಫುಟ್ಬಾಲ್‌ ಪಂದ್ಯವನ್ನು ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಸಾವಿನ ಮನೆಯಲ್ಲಿದ್ದ ಕುಟುಂಬಸ್ಥರು ತಮ್ಮ ದುಃಖವನ್ನೆಲ್ಲಾ ಬದಿಗಿಟ್ಟು ಶವದ ಮುಂದೆಯೇ ದೊಡ್ಡ ಪ್ರೊಜೆಕ್ಟರ್‌ ಅಳವಡಿಸಿ ಚಿಲಿ ಮತ್ತು ಪೆರು ದೇಶಗಳ ನಡುವಿನ ರೋಚಕ ಕೋಪಾ ಅಮೇರಿಕನ್‌ ಫುಟ್‌ಬಾಲ್‌ ಪಂದ್ಯವನ್ನು ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌

ಜೂನ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ವಿಚಿತ್ರ ಸಂಗತಿಯನ್ನು ನೋಡಿ ಜನ ಹಿಂಗೂ ಇರ್ತಾರಾ ಎಂದು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು