AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ನಡುರಸ್ತೆಯಲ್ಲೇ ಅಪ್ಪ ಮಗಳ ಕ್ಯೂಟ್ ಡಾನ್ಸ್, ಎಷ್ಟು ಚೆಂದ ನೋಡಿ

ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ. ಮಗಳಿಗೂ ಅಷ್ಟೇ ತಂದೆಯೆಂದರೆ ಅಚ್ಚುಮೆಚ್ಚು. ಈ ಅಪ್ಪ ಮಗಳ ಸುಂದರ ಬಾಂಧವ್ಯಕ್ಕೆ ಸಾಕ್ಷಿಯಾಗುವ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್‌ ಮಿಡಿಯಾದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ನಡುರಸ್ತೆಯಲ್ಲೇ ಅಪ್ಪ ಮಗಳು ಕೈ ಕೈ ಹಿಡಿದು ಸ್ಟೆಪ್ ಹಾಕಿದ್ದಾರೆ. ಈ ಚೆಂದದ ಡಾನ್ಸ್ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆಯ ಸುರಿಮಳೆ ವ್ಯಕ್ತವಾಗಿದೆ.

Viral : ನಡುರಸ್ತೆಯಲ್ಲೇ ಅಪ್ಪ ಮಗಳ ಕ್ಯೂಟ್ ಡಾನ್ಸ್, ಎಷ್ಟು ಚೆಂದ ನೋಡಿ
ಸಾಯಿನಂದಾ
| Edited By: |

Updated on: Dec 01, 2024 | 10:52 AM

Share

ತಾಯಿಯು ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ ಮಾತ್ರ ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಅಪ್ಪ ಅಂದ್ರೆ ಆಕಾಶ. ತನ್ನ ಜೀವಮಾನವನ್ನೇ ತನ್ನ ಹೆಂಡತಿ ಮಕ್ಕಳು, ಕುಟುಂಬಕ್ಕಾಗಿಯೇ ಮೀಸಲಿಡುತ್ತಾನೆ. ತನ್ನ ಕಷ್ಟವನ್ನು ಬದಿಗಿಟ್ಟು ಮಕ್ಕಳ ಮುಖದಲ್ಲಿ ನಗು ಮೂಡಿಸಲು ಪ್ರಯತ್ನಿಸುತ್ತಾನೆ. ಅದರಲ್ಲಿ ಹೆಣ್ಣು ಮಕ್ಕಳಿಗೆ ತಂದೆಯೆಂದರೆ ಅಚ್ಚು ಮೆಚ್ಚು. ಮೊದಲ ಹೀರೋ ಅಪ್ಪನೇ ಆಗಿರುತ್ತಾನೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಪ್ಪ ಹಾಗೂ ಪುಟಾಣಿ ಮಗಳು ನಡುರಸ್ತೆಯಲ್ಲೇ ಡಾನ್ಸ್ ಮಾಡಿದ್ದು, ಈ ದೃಶ್ಯವು ಎಲ್ಲರ ಹೃದಯ ಗೆದ್ದಿದೆ.

ಶಾಲೆಯಿಂದ ಮಗಳನ್ನು ಮನೆಗೆ ಕರೆ ತರುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿ ಅಪ್ಪ ಖುಷಿಯಿಂದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಪ್ಪನ ಕೈ ಹಿಡಿದು ನಡೆದುಕೊಂಡು ಬರುತ್ತಿದ್ದ ಪುಟಾಣಿ ಮಗಳು ಕೂಡ ತಾನು ಡಾನ್ಸ್ ಮಾಡುವ ಮೂಲಕ ಸಾಥ್ ನೀಡಿದ್ದಾಳೆ. ಅಪ್ಪ ಹಾಗೂ ಮಗಳು ಡಾನ್ಸ್ ಮಾಡುತ್ತಿರುವುದನ್ನು ಪಕ್ಕದ ರಸ್ತೆಯಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋವನ್ನು christosavatarawakeing ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: 52 ಕೋಟಿ ಕೊಟ್ಟು ಹರಾಜಿನಲ್ಲಿ ಖರೀದಿಸಿದ್ದ ಬಾಳೆಹಣ್ಣನ್ನು ಒಂದೇ ಕ್ಷಣದಲ್ಲಿ ತಿಂದು ಮುಗಿಸಿದ ವ್ಯಕ್ತಿ

ಈ ವಿಡಿಯೋ 42 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರೊಬ್ಬರು, ‘ಈ ವಿಡಿಯೋವು ನಿಜಕ್ಕೂ ಅದ್ಭುತವಾಗಿದೆ’ ಎಂದಿದ್ದಾರೆ. ಮತ್ತೊಬ್ಬರು, ‘ಈ ಹಾಡು 90 ರ ದಶಕದ ಬಹಳಷ್ಟು ನೆನಪುಗಳನ್ನು ಕಣ್ಣ ಮುಂದೆ ತರುತ್ತದೆ. ನಗು ಹಾಗೂ ಅಳು ಮಿಶ್ರಿತವಾದ ಆನಂದ ಬಾಷ್ಪವು ಬರುತ್ತದೆ. ತಂದೆ ಮತ್ತು ಮಗಳು ತಮ್ಮ ನಡಿಗೆಯಲ್ಲಿಯೇ ಒಟ್ಟಿಗೆ ನೃತ್ಯ ಮಾಡುವುದನ್ನು ನೋಡಲು ನಿಜಕ್ಕೂ ಸುಂದರವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು, ‘ಇದು ನಿಜಕ್ಕೂ ಅತ್ಯದ್ಭುತವಾದ ಡಾನ್ಸ್’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ