AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ

ತಂದೆಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೀಗ ತಂದೆಯೊಬ್ಬ ತನ್ನ ಮಗಳ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾನೆ. ಟ್ರಕ್ ಚಾಲಕನಾಗಿರುವ ಈ ವ್ಯಕ್ತಿ ತನ್ನ ವಾಹನದ ಒಳಗೆ ಡೆಕೋರೇಷನ್ ಮಾಡಿ ಮಗಳನ್ನು ಖುಷಿ ಪಡಿಸಲು ಪ್ರಯತ್ನಿಸಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 10, 2026 | 3:57 PM

Share

ಅಪ್ಪ (father) ಅಂದ್ರೆ ಹೆಣ್ಣು ಮಕ್ಕಳಿಗೆ ಪ್ರಾಣಕ್ಕಿಂತ ಹೆಚ್ಚು. ಅಪ್ಪಂದಿರು ಕೂಡ ತಮ್ಮ ಮಗಳ ಖುಷಿಗಾಗಿ ಏನು ಬೇಕಾದ್ರೂ ಮಾಡಲು ಸಿದ್ಧವಿರುತ್ತಾನೆ. ಈ ತಂದೆ ಮಗಳ ಸಂಬಂಧವನ್ನು ವಿವರಿಸಲು ಪದಗಳಿಲ್ಲ. ಇದೀಗ ಟ್ರಕ್ ಓಡಿಸಿ ಜೀವನ ನಡೆಸುವ  ವ್ಯಕ್ತಿಯೊಬ್ಬ ತನ್ನ ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ. ತನ್ನ ಟ್ರಕ ಒಳಗೆ ಸುಂದರವಾಗಿ ಅಲಂಕರಿಸಿ ಮಗಳಿಗೆ ಸರ್ಪ್ರೈಸ್ ನೀಡಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಂದೆಯ ಪ್ರೀತಿ ಸಾರುವ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಚೀನಾ ಟ್ರಾವೆಲ್ ಜಾಯ್ (Chinatraveljoy) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಮಗಳ ಹುಟ್ಟುಹಬ್ಬಕ್ಕೆ ತಂದೆಯೊಬ್ಬ ತನ್ನ ಟ್ರಕನ್ನು ಅಲಂಕಾರ ಮಾಡಿ ಸರ್ಪ್ರೈಸ್ ನೀಡಿದ್ದಾನೆ. ಟ್ರಕ್‌ನ ಒಳಗೆ ಆಕಾಶಬುಟ್ಟಿಗಳು, ದೀಪಗಳಿಂದ ಅಲಂಕರಿಸಲಾಗಿದೆ. ಮಗಳಿಗಾಗಿ ಉಡುಗೊರೆಗಳನ್ನು ತಂದು ಇಟ್ಟಿರುವುದನ್ನು ಕಾಣಬಹುದು.  ಮಗಳು ಟ್ರಕ್ ಹಿಂದೆ ಬಂದು ನಿಂತುಕೊಂಡಿದ್ದು, ಈ ವ್ಯಕ್ತಿ  ಟ್ರಕ್ ಹಿಂಬದಿ ಬಾಗಿಲು ತೆರೆದು ಸರ್ಪ್ರೈಸ್ ನೀಡಿರುವುದನ್ನು ನೀವು ನೋಡಬಹುದು. ಆ ಬಳಿಕ ಪುಟ್ಟ ಮಗಳನ್ನು ಮೇಲೆತ್ತಿ ಟ್ರಕ್ ಒಳಗೆ ಬಿಟ್ಟಿದ್ದು, ತಂದೆಯ ಸರ್ಪ್ರೈಸ್ ನೋಡಿ ಮಗಳು ಖುಷಿ ಪಟ್ಟಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಂದೆಯ ಬರ್ತ್ಡೇಗೆ ಬಾಲ್ಯದ ಸ್ನೇಹಿತರನ್ನೇ ಮನೆಗೆ ಆಹ್ವಾನಿಸಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಮಗಳು

ಈ ವಿಡಿಯೋ ಹನ್ನೊಂದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಒಂದೇ ಒಂದು ಪದ ಸಾಕು ಅದುವೇ ವಾವ್ಹ್ ಎಂದಿದ್ದಾರೆ. ಇನ್ನೊಬ್ಬರು, ಮಗಳ ಖುಷಿಗಾಗಿ ತಂದೆ ಏನು ಬೇಕಾದ್ರೂ ಮಾಡ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಈ ದೃಶ್ಯ ನೋಡಿ ನನ್ನ ಅಪ್ಪ ನೆನಪಾದ್ರು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Mon, 10 August 26

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ