Viral Video: ಕೆನಡಾದಲ್ಲಿರುವ ಮಗಳೊಂದಿಗೆ ಅಪ್ಪನ ಅಚ್ಚರಿಯ ಭೇಟಿ

Father and Daughter : ದೂರದಲ್ಲಿರುವ ನಿಮ್ಮ ಪ್ರೀತಿಪಾತ್ರರು ಅಚಾನಕ್ ಆಗಿ ನೀವು ಕೆಲಸದ ಸ್ಥಳದಲ್ಲಿ ಭೇಟಿ ಕೊಟ್ಟರೆ ಹೇಗಿರುತ್ತದೆ? ಅಂಥ ಸನ್ನಿವೇಶವನ್ನೇ ನೀವು ವಿಡಿಯೋದಲ್ಲಿ ಕಾಣಬಹುದು. ಮಿಲಿಯನ್​ ಜನರ ಹೃದಯ ಗೆದ್ದಿದೆ ಇದು.

Viral Video: ಕೆನಡಾದಲ್ಲಿರುವ ಮಗಳೊಂದಿಗೆ ಅಪ್ಪನ ಅಚ್ಚರಿಯ ಭೇಟಿ
ಕೆನಡಾದಲ್ಲಿರುವ ಮಗಳಿಗೆ ಅಪ್ಪ ಅಚಾನಕ್​ ಬೇಟಿ ಕೊಟ್ಟಾಗಿನ ಕ್ಷಣಗಳು
Follow us
ಶ್ರೀದೇವಿ ಕಳಸದ
|

Updated on:Jun 26, 2023 | 11:44 AM

Canada: ಮಕ್ಕಳ ಮುಖದಲ್ಲಿ ನಗು ತರಿಸಲು ಅಪ್ಪಂದಿರು ಮಾಡುವ ಸಾಹಸಗಳಿಗೆ ಎಣೆ ಇಲ್ಲ. ಅದರಲ್ಲಿಯೂ ಮಗನಿಗಿಂತ ಮಗಳಿಗಾಗಿ ಈ ವಿಷಯದಲ್ಲಿ ಹೆಚ್ಚು ಆಸ್ಥೆ ವಹಿಸುತ್ತಾರೆ. ಹೆಣ್ಣುಮಕ್ಕಳಿಗೂ  ಅಷ್ಟೇ ಅಪ್ಪ ಎಂದರೆ ಆನೆಬಲ. (Father’s Love) ಇದೀಗ ವೈರಲ್ ಆಗಿರುವ ಈ ಅಪ್ಪ ಮಗಳ ವಿಡಿಯೋ ನೋಡಿ. ಕೆನಡಾದ ಮಳಿಗೆಯೊಂದರಲ್ಲಿ ಮಗಳು ಕೆಲಸದಲ್ಲಿ ಮಗ್ನಳಾದಾಗ ಅಪ್ಪ ಹೀಗೆ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದರೆ ಹೇಗಿರಬೇಡ? ಮಾತು ಹೊಮ್ಮದೇ ಪರಸ್ಪರ ಅಪ್ಪಿಕೊಂಡು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Shrutva? (@shrutva_desai)

ಶ್ರುತ್ವಾ ದೇಸಾಯಿ ಈ ವಿಡಿಯೋ ಅನ್ನು ಇನ್​ಸ್ಟಾನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರುತ್ವಾ ಕೆನಡಾದಲ್ಲಿ  ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಮಳಿಗೆಯೊಂದರಲ್ಲಿ ಪಾರ್ಟೈಮ್​ ಕೆಲಸವನ್ನೂ ಮಾಡುತ್ತಿದ್ದಾರೆ. ಅಪ್ಪ ತನ್ನ ಉದ್ಯೋಗದ ಸ್ಥಳಕ್ಕೆ ಅಚಾನಕ್ ಆಗಿ ಭೇಟಿ ನೀಡಿದಾಗ ಆ ಕ್ಷಣಗಳು ಹೇಗಿದ್ದವು ಎನ್ನುವುದನ್ನು ಅವರು ನೆಟ್ಟಿಗರೊಂದಿಗೆ ಹಂಚಿಕೊಂಡಿದ್ದಾರೆ. ನೆಟ್ಟಿಗರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : Viral Video: ಕೋಕ್​ ಸ್ಟುಡಿಯೋದ ”ಕನ ಯಾರೀ” ಹಾಡಿಗೆ ಫ್ರೀ ಸ್ಟೈಲ್​ ನೃತ್ಯ 

ಈ ವಿಡಿಯೋ ಅನ್ನು ಈತನಕ 1.6 ಮಿಲಿಯನ್​ ಜನರು ನೋಡಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮಿಬ್ಬರಿಗೂ ದೇವರು ಒಳ್ಳೆಯದನ್ನು ಮಾಡಲಿ. ಇಂಥ ಅಪ್ಪಂದಿರು ಬೆರಳೆಣಿಕೆಯಷ್ಟು ಜನ ಮಾತ್ರ. ನನಗೆ ನನ್ನ ತಂದೆಯ ನೆನಪುಕ್ಕಿತು. ಹೆಣ್ಣುಮಕ್ಕಳು ಯಾವತ್ತೂ ತಂದೆಯಿಂದ ದೂರ ಇರಬಾರದು ಎಂದು ನನ್ನ ಅನಿಸಿಕೆ. ಇಂದು ನಾನು ಆನ್​ಲೈನ್​ನಲ್ಲಿ ನೋಡಿದ ಅತ್ಯಂತ ಸುಂದರವಾದ ವಿಡಿಯೋ ಇದು. ಇವರ ಕುಟುಂಬ ಆರೋಗ್ಯ ಮತ್ತು ಸಂತೋಷದಿಂದ ಕೂಡಿರಲಿ… ಅಂತೆಲ್ಲ ಪ್ರತಿಕ್ರಿಯಿಸಿದ್ದರೆ ನೆಟ್ಟಿಗರು.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:43 am, Mon, 26 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ