AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಗೆ ನೋವಾದ್ರೆ ತಂದೆಯ ಕಣ್ಣಲ್ಲಿ ನೀರು ಬರುತ್ತೆ : ಎಷ್ಟು ಚಂದ ನೋಡಿ ಈ ಬಾಂಧವ್ಯ

ಹೆಣ್ಣು ಮಕ್ಕಳೆಂದರೆ ತಂದೆಗೆ ಅಚ್ಚು ಮೆಚ್ಚು. ಹೌದು, ತಂದೆಯಾದವನು ತನಗೆ ಎಷ್ಟೇ ನೋವಾದರೂ ಸಹಿಸಿಕೊಳ್ಳುತ್ತಾನೆ . ಆದರೆ ತನ್ನ ಮಗಳ ಕಣ್ಣಲ್ಲಿ ಒಂದು ಹನಿ ನೀರು ಬಂದರೂ ಅದನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್ಟ ಕಂದಮ್ಮನು ಜೋರಾಗಿ ಅಳುತ್ತಿದ್ದರೆ ಇತ್ತ ತಂದೆಯೂ ಕಣ್ಣೀರು ಸುರಿಸಿದ್ದು, ಈ ಹೃದಯ ಸ್ಪರ್ಶಿ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ.

ಮಗಳಿಗೆ ನೋವಾದ್ರೆ ತಂದೆಯ ಕಣ್ಣಲ್ಲಿ ನೀರು ಬರುತ್ತೆ : ಎಷ್ಟು ಚಂದ ನೋಡಿ ಈ ಬಾಂಧವ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:May 23, 2025 | 7:33 PM

Share

ಅಪ್ಪ (father) ಎಂದರೆ ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ ಹಾಗೂ ಕಾಳಜಿ. ಹೀಗಾಗಿ ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಇದೀಗ ಅಪ್ಪ ಮಗಳ ಬಾಂಧವ್ಯ (father daughter relationship)ದ ವಿಡಿಯೋವೊಂದು ವೈರಲ್ ಆಗಿದ್ದು ಪುಟಾಣಿ ಕಂದಮ್ಮನಿಗೆ ನರ್ಸ್ ಒಬ್ಬರು ಲಸಿಕೆ ಚುಚ್ಚುತ್ತಿದ್ದಂತೆ ನೋವಿನಿಂದ ಜೋರಾಗಿ ಅಳುತ್ತಿದ್ದು, ಇದನ್ನು ಸಹಿಸಲಾಗದೇ ಮಗುವಿನೊಂದಿಗೆ ತಂದೆಯೂ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ.

momos.usa ಹೆಸರಿನ ಖಾತೆಯಲ್ಲಿ ಹೃದಯಸ್ಪರ್ಶಿ ವಿಡಿಯೋವೊಂದು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟ್ಟ ಕಂದಮ್ಮವೊಂದು ತನ್ನ ತಂದೆಯ ಮಡಿಲಿನಲ್ಲಿ ಮಲಗಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ನರ್ಸ್ ವೊಬ್ಬರು ಮಗುವಿನ ಕಾಲಿಗೆ ಲಸಿಕೆ ನೀಡುತ್ತಿದ್ದಂತೆ ನೋವಿನಿಂದ ಜೋರಾಗಿ ಮಗು ಅಳುತ್ತಿರುವುದನ್ನು ನೋಡಬಹುದು. ಇದನ್ನು ನೋಡಿದ ತಂದೆಯೂ ಜೋರಾಗಿ ಕಣ್ಣೀರು ಸುರಿಸಿದ್ದಾನೆ.

ಇದನ್ನೂ ಓದಿ : ಹಿಂದೂ ಜೋಡಿ ಮದುವೆಗೆ ಅಡ್ಡಿ ಪಡಿಸಿದ ಮಳೆ, ವೇದಿಕೆ ಬಿಟ್ಟುಕೊಟ್ಟ ಮುಸ್ಲಿಂ ಜೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು 3.6 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಈ ವಿಡಿಯೋ ನೋಡಿ ನನ್ನ ಕಣ್ಣಲ್ಲಿಯೂ ನೀರು ಬಂತು ಎಂದಿದ್ದಾರೆ. ಇನ್ನೊಬ್ಬರು, ತಂದೆ ಎಷ್ಟೇ ಬಲಿಷ್ಠನಾಗಿದ್ದರೂ ಮಗಳ ಕಣ್ಣಲ್ಲಿ ನೀರು ಕಂಡರೆ ಮನಸ್ಸು ಕುಗ್ಗಿ ಹೋಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನನ್ನ ಮಗಳಿಗೆ ಚುಚ್ಚು ಮದ್ದು ಕೊಟ್ಟಾಗ ನಾನು ಹೀಗೆಯೇ ಅತ್ತಿದ್ದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Fri, 23 May 25

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು