AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಪ್ರಾಣದೊಂದಿಗೆ ಚೆಲ್ಲಾಟ ಆಡಿದ ಯುವಕ ಕಪಾಳಕ್ಕೆ ಬಾರಿಸಿದ ಮೀನುಗಾರ

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಏನೇ ಸಮಸ್ಯೆ ಬಂದರೂ ಎಲ್ಲದಕ್ಕೂ ಸಾವೇ ಪರಿಹಾರವೆಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಾರೆ. ಈಗಂತೂ  ಆತ್ಮಹತ್ಯೆಯ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿದೆ. ಅದೇ ರೀತಿಯ ಘಟನೆ ಇಲ್ಲೊಂದು ನಡೆದಿದ್ದು, ವೈಯಕ್ತಿಕ ಸಮಸ್ಯೆಗಳ ಕಾರಣ ಪ್ರೇಮಿಗಳಿಬ್ಬರು ನದಿಗೆ ಹಾರಿ ಅತ್ಮಹತ್ಯೆ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಮೀನುಗಾರರೊಬ್ಬರು ಆ ಇಬ್ಬರ ಪ್ರಾಣವನ್ನು ರಕ್ಷಿಸಿ ಬಳಿಕ ಸಾಯುವ ನಿರ್ಧಾರ ಮಾಡಿದ್ದಕ್ಕೆ ಪ್ರೇಮಿಯ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ. 

Viral Video: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಪ್ರಾಣದೊಂದಿಗೆ ಚೆಲ್ಲಾಟ ಆಡಿದ ಯುವಕ ಕಪಾಳಕ್ಕೆ ಬಾರಿಸಿದ ಮೀನುಗಾರ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 19, 2024 | 3:58 PM

Share

ಜೀವನದಲ್ಲಿ ಏನಾದ್ರೂ ಸಮಸ್ಯೆ ಬಂದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದು ಫ್ಯಾಷನ್‌ ಆಗಿಬಿಟ್ಟಿದೆ. ಅದರಲ್ಲೂ ಈ ಅಮರ ಪ್ರೇಮಿಗಳು ತಮ್ಮ ಪ್ರೀತಿಗೆ ಮನೆಯವರು ಒಪ್ಪದಿದ್ದರೆ, ಇದಕ್ಕೆಲ್ಲಾ ಸಾವು ಒಂದೇ ಪರಿಹಾರವೆಂದು ಇಬ್ಬರೂ ಜೊತೆಗೆ ನದಿಗೆ ಹಾರಿಯೋ ಅಥವಾ ವಿಷ ಸೇವಿಸಿಯೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇಂತಹ ಹಲವಾರು ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಸದ್ಯ ಅಂತಹದೇ ಘಟನೆಯೊಂದು ನಡೆದಿದ್ದು, ವೈಯಕ್ತಿಕ ಸಮಸ್ಯೆಗಳ ಕಾರಣದಿಂದ ಪ್ರೇಮಿಗಳಿಬ್ಬರು ನದಿಗೆ ಹಾರಿ ಅತ್ಮಹತ್ಯೆ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಮೀನುಗಾರರೊಬ್ಬರು ಆ ಇಬ್ಬರ ಪ್ರಾಣವನ್ನು ರಕ್ಷಿಸಿ ಬಳಿಕ ಸಾಯುವ ನಿರ್ಧಾರ ಮಾಡಿದ್ದಕ್ಕೆ ಪ್ರೇಮಿಯ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಗೋಲಘಾಟ್‌ ಬಳಿಯ ಗೋಮತಿ ನದಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರು ನದಿಗೆ ಹಾರುವುದನ್ನು ಕಂಡ ಮೀನುಗಾರರು ತಮ್ಮ ಜೀವದ ಹಂಗನ್ನು ತೊರೆದು ಆ ಇಬ್ಬರ ಪ್ರಾಣವನ್ನು ರಕ್ಷಿಸಿದ್ದಾರೆ. ನಂತರ ಆತ್ಮಹತ್ಯೆಯಂತಹ ಹುಚ್ಚು ನಿರ್ಧಾರವನ್ನು ತೆಗೆದುಕೊಂಡಿದ್ದಕ್ಕಾಗಿ ಮೀನುಗಾರರೊಬ್ಬರು  ಕೋಪದಲ್ಲಿ ಪ್ರೇಮಿಯ ಕಪಾಳಕ್ಕೆ ಸರಿಯಾಗಿ ಬಾರಿಸಿದ್ದಾರೆ.

ವೈರಲ್​​ ವಿಡಿಯೋ:

ಈ ವಿಡಿಯೋವನ್ನು ಪ್ರಿಯಾ ಸಿಂಗ್‌ (@priyarjaputlive) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ನದಿಗೆ ಹಾರಿದ ಪ್ರೇಮಿಗಳನ್ನು ರಕ್ಷಿಸಿ ನದಿ ದಡದ ಬಳಿ ಕರೆತಂದು ಬಳಿಕ ಪ್ರಾಣದೊಂದಿಗೆ ಆಟವಾಡುವುದು ನಿಮಗೆಲ್ಲಾ ತಮಾಷೆಯಾಗಿaಬಿಟ್ಟಿದೆಯಾ ಎನ್ನುತ್ತಾ ಮೀನುಗಾರರರೊಬ್ಬರು ಕೋಪದಲ್ಲಿ ಪ್ರೇಮಿಯ ಕಪಾಳಕ್ಕೆ  ಬಾರಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಜೀವದ ಗೆಳತಿಯರು ಸೇರಿ ಶುರು ಮಾಡಿದ ಗೌಡತಿ’ಸ್​​​ ಕಿಚನ್, ಇದು ಮಹಿಳೆಯರ ಸ್ಫೂರ್ತಿ ಕಥೆ 

ಜೂನ್‌ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ 97 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆತನಿಗೆ ಇನ್ನೂ ಬಾರಿಸಬೇಕಿತ್ತು ಎನ್ನುತ್ತಾ ಮೀನುಗಾರರ ಕೆಲಸಕ್ಕೆ ನೆಟ್ಟಿಗರು ಭೇಷ್‌ ಎಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ