Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jul 23, 2023 | 4:50 PM

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ