AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ
ಅಕ್ಷತಾ ವರ್ಕಾಡಿ
|

Updated on:Mar 27, 2024 | 2:51 PM

Share

ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಸೋಮವಾರ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧದ ಮಸೂದೆಗೆ ಸಹಿ ಹಾಕಿದರು. ಈ ಮೂಲಕ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಇದಲ್ಲದೇ 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸೋಶಿಯಲ್​ ಮೀಡಿಯಾ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಟ್ರೈನ್ ಚಕ್ರಗಳಿ​ಗೆ ರಬ್ಬರ್ ಟೈರ್ ಹಾಕಿದರೆ ಅದು ಸರಾಗವಾಗಿ ಚಲಿಸುತ್ತದಾ? ಈ ವೈರಲ್ ವೀಡಿಯೊ ನೋಡಿ

ನೂತನ ಕಾಯ್ದೆ ಪ್ರಕಾರ, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್​​ ಮಾಡುವಂತೆ ಸೂಚನೆ ನೀಡಲಾಗಿದೆ. NetChoice, Facebook  ಮೆಟಾ ಪ್ಲಾಟ್‌ಫಾರ್ಮ್‌ಗಳು, TikTok ಮತ್ತು Snap ಅನ್ನು ಒಳಗೊಂಡಿರುವ ಟೆಕ್-ಇಂಡಸ್ಟ್ರಿ ಟ್ರೇಡ್ ಅಸೋಸಿಯೇಷನ್, ಕಳೆದ ಜೂನ್‌ನಲ್ಲಿ ಅರ್ಕಾನ್ಸಾಸ್ ಕಾನೂನನ್ನು ನಿಲ್ಲಿಸಲು ಮೊಕದ್ದಮೆ ಹೂಡಿತ್ತು. 40 ಕ್ಕೂ ಹೆಚ್ಚು ರಾಜ್ಯಗಳು ಮೆಟಾ ವಿರುದ್ಧ ಮೊಕದ್ದಮೆ ಹೂಡಿದ ನಂತರ ವಿಷಯ ನಿರ್ಬಂಧಗಳು ಬಂದವು. ಈ ಕಾಯ್ದೆಯಿಂದ ನಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಹಾಗೂ ಉತ್ತಮ ಭವಿಷ್ಯ ರೂಪಿಸಲು ಪೋಷಕರಿಗೆ ಸಹಾಯವಾಗಲಿದೆ ಎಂದು ಗವರ್ನರ್ ರಾನ್ ಡೆಸ್ಯಾಂಟಿಸ್ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Wed, 27 March 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ