ಉತ್ತರಾಖಂಡ: 7 ತಿಂಗಳ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆ
ಕೆಲವು ಸಂದರ್ಭಗಳಲ್ಲಿ ತಾಯಿಯ ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣದೊಳಗೆ ಮತ್ತೊಂದು ಭ್ರೂಣವು ರೂಪುಗೊಳ್ಳುತ್ತದೆ ಎಂದು ಹೇಳಲಾಗುತ್ತದೆ. ದೇಶದಲ್ಲಿ ಈವರೆಗೆ ಇಂತಹ 200ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ವೈದ್ಯರು ಹೇಳಿದ್ದಾರೆ.
ಉತ್ತರಾಖಂಡದಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಬೆಳೆಯುತ್ತಿರುವುದು ಪತ್ತೆಯಾಗಿದ್ದು, ತಕ್ಷಣವೇ ಮಗುವಿಗೆ ಆಪರೇಷನ್ ಮಾಡಿ ಮಗುವಿನ ಹೊಟ್ಟೆಯಿಂದ ಭ್ರೂಣವನ್ನು ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದರು. ಇಂತಹ ಪ್ರಕರಣ ಇದೇ ಮೊದಲೇನಲ್ಲಾ ಈ ಹಿಂದೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿತ್ತು. ಇದೊಂದು ಅಪರೂಪದ ಪ್ರಕರಣ ಎಂದು ತಜ್ಞರು ತಿಳಿಸಿದ್ದಾರೆ.
ಈ ಅಚ್ಚರಿಯ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ನಡೆದಿದೆ. ಮಗುವಿಗೆ ಆಗಾಗ ಹೊಟ್ಟೆನೋವಿನಿಂದ ಅಳುತ್ತಿತ್ತು. ಇದನ್ನು ಗಮನಿಸಿದ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಹೊಟ್ಟೆಯ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ವರದಿ ನೋಡಿದಾಗ, ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಬೆಳೆಯುತ್ತಿರುವುದು ಪತ್ತೆಯಾಗಿದೆ. ಇದನ್ನೆಲ್ಲ ಮಗುವಿನ ಕುಟುಂಬಸ್ಥರಿಗೆ ಹೇಳಿದಾಗ ಬೆಚ್ಚಿಬಿದ್ದಿದ್ದಾರೆ. ಪ್ರಾರಂಭದಲ್ಲಿ ಮಗುವಿನ ಹೊಟ್ಟೆಯಲ್ಲಿ ಗೆಡ್ಡೆ ಇದೆ ಎಂದು ಎಲ್ಲರೂ ಭಾವಿಸಿದ್ದರು.
ಇದನ್ನೂ ಓದಿ: ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ ವೈದ್ಯರು ತಕ್ಷಣ ಆಪರೇಷನ್ ಮಾಡಲು ನಿರ್ಧರಿಸಿದ್ದಾರೆ. ಪೋಷಕರ ಒಪ್ಪಿಗೆ ಮೇರೆಗೆ ಮಗುವಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ. ಕೆಲವು ಸಂದರ್ಭಗಳಲ್ಲಿ ತಾಯಿಯ ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣದೊಳಗೆ ಮತ್ತೊಂದು ಭ್ರೂಣವು ರೂಪುಗೊಳ್ಳುತ್ತದೆ ಎಂದು ಹೇಳಲಾಗುತ್ತದೆ. ದೇಶದಲ್ಲಿ ಈವರೆಗೆ ಇಂತಹ 200ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ವೈದ್ಯರು ಹೇಳಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ