AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌

ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದೆ. ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ, ಮನನೊಂದು ಆತ್ಮಹತ್ಯೆಗೆ ಶರಣಾದ ಡೆಲಿವರಿ ಬಾಯ್‌
ಮಹಿಳೆ ಬೈದಿದ್ದಕ್ಕೆ ಆತ್ಮಹತ್ಯೆಗೆ ಮಾಡಿಕೊಂಡ ಡೆಲಿವರಿ ಬಾಯ್‌
ಅಕ್ಷತಾ ವರ್ಕಾಡಿ
|

Updated on: Sep 19, 2024 | 4:36 PM

Share

ಚೆನ್ನೈ: 19 ವರ್ಷದ ಫುಡ್ ಡೆಲಿವರಿ ಬಾಯ್‌ ಮಂಗಳವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಳತ್ತೂರಿನಲ್ಲಿ ನಡೆದಿದೆ. ಈತ ತಡವಾಗಿ ಡೆಲಿವರಿ ಮಾಡಿದಕ್ಕೆ ಮಹಿಳೆಯೊಬ್ಬಳು ಬಾಯಿಗೆ ಬಂದಂತೆ ಬೈದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.

ಕೊಳತ್ತೂರು ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದ್ದು, ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ಮನೆಯ ಅಡ್ರಸ್​​​ ಸಿಗದೇ ಇದ್ದ ಕಾರಣ ದಿನಸಿ ತಲುಪಿಸುವಷ್ಟರಲ್ಲಿ ತಡವಾಯಿತು. ಇದರಿಂದ ಕೋಪಗೊಂಡ ಮಹಿಳೆ ಡೆಲಿವರಿ ಕಂಪನಿಗೆ ದೂರು ನೀಡಿ, ಈ ಯುವಕನನ್ನು ಮತ್ತೆ ಡೆಲಿವರಿಗಾಗಿ ಕಳುಹಿಸಬೇಡಿ ಎಂದು ಕೇಳಿಕೊಂಡಿದ್ದರು. ಕಂಪನಿಯ ಕಡೆಯಿಂದ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತೀಯ ಮಸಾಲೆ ಕೊಳಕು ಎಂದು ಟೀಕಿಸಿದ ಆಸ್ಟ್ರೇಲಿಯನ್ ಯೂಟ್ಯೂಬರ್

ಎರಡು ದಿನಗಳ ನಂತರ, ಶುಕ್ರವಾರ, ಕೆಲಸ ಕಳೆದುಕೊಂಡ ಯುವಕ ಮಹಿಳೆಯ ಮನೆಗೆ ಕಲ್ಲು ಎಸೆದು ಕಿಟಕಿಯ ಗಾಜನ್ನು ಒಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಿಳೆ ಕೊರಟ್ಟೂರು ಪೊಲೀಸರಿಗೆ ದೂರು ನೀಡಿದ್ದು, ಸಿಎಸ್‌ಆರ್‌ ಜಾರಿ ಮಾಡಲಾಗಿತ್ತು. ಇದಲ್ಲದೇ ಯುವಕನ ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಿ ಬಿಡಲಾಗಿತ್ತು. ಇದರಿಂದ ಮನನೊಂದ ಯುವಕ ಮಂಗಳವಾರ ತನ್ನ ಮನೆಯಲ್ಲಿ ಡೆತ್​ನೋಟ್​​​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು