Video: ಮನೆಯಲ್ಲೇ ರಕ್ತ ಪರೀಕ್ಷೆ ಮಾಡುವ ಸೇವೆ ಕಂಡು ಅಚ್ಚರಿ ವ್ಯಕ್ತಪಡಿಸಿದ ವಿದೇಶಿ ಮಹಿಳೆ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ಜನರ ನಡೆನುಡಿಗೆ ಹಾಗೂ ಇಲ್ಲಿನ ವಿನೂತನ ಸೌಕರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದೀಗ ವಿದೇಶಿ ಮಹಿಳೆಯೊಬ್ಬರು ಭಾರತದಲ್ಲಿರುವ ಆರೋಗ್ಯ ಸೇವೆಯನ್ನು ಮೆಚ್ಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆಯಲ್ಲೇ ರಕ್ತ ಪರೀಕ್ಷೆ ಮಾಡುವ ಸೇವೆ ಕಂಡು ಅಚ್ಚರಿ ವ್ಯಕ್ತಪಡಿಸಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋ
Image Credit source: Instagram

Updated on: Jul 19, 2026 | 3:55 PM

ಮುಂಬೈ, ಜುಲೈ 19: ವಿದೇಶಿಗರು (foreigner) ಭಾರತಕ್ಕೆ ಭೇಟಿ ನೀಡಿ ಇಲ್ಲಿನ ಪ್ರತಿಯೊಂದು ಕ್ಷಣವನ್ನು ಖುಷಿಯಿಂದ ಕಳೆಯುತ್ತಾರೆ. ಭಾರತದ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ವಿವಿಧ ರುಚಿಕರ ಖಾದ್ಯಗಳನ್ನು ಸವಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಭಾರತೀಯರಿಗೆ ಸಾಮಾನ್ಯ ಎನಿಸುವ ಮನೆ ಬಾಗಿಲಿನ ರಕ್ತ ಪರೀಕ್ಷೆ ಸೇವೆಗೆ ವಿದೇಶಿ ಮಹಿಳೆ ಫುಲ್ ಫಿದಾ ಆಗಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅಮೆರಿಕನ್ ಮಹಿಳೆ ಮನೆಯಿಂದಲೇ ರಕ್ತ ಪರೀಕ್ಷೆ ಮಾಡಿಸಿಕೊಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಲಿಜ್ ಅಂಡ್ ಶಿವ್ (Liz and shiv) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಭಾರತೀಯ ಮನೆ ಬಾಗಿಲಿನ ರಕ್ತ ಪರೀಕ್ಷೆ ಸೇವೆಯನ್ನು ಶ್ಲಾಘಿಸಿದ್ದಾರೆ. ಈ ವಿದೇಶಿ ಮಹಿಳೆ ಮನೆ ಬಾಗಿಲಿಗೆ ಬಂದು ರಕ್ತ ಮಾಡುವ ಈ ಸೇವೆಗೆ ಹೆಚ್ಚುವರಿ ಹಣ ಪಾವತಿಸಿಲ್ಲ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ಕ್ಲಿಪಿಂಗ್‌ನಲ್ಲಿ ತನ್ನ ಅನುಭವ ಬಿಚ್ಚಿಟ್ಟ ಲಿಜ್ ಭಾರತದಲ್ಲಿ ಈ ರೀತಿ ಸೇವೆಯಿದೆ ಎಂದು ನಿಜಕ್ಕೂ ನಂಬಲಾಗದು. ನಾನು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿತ್ತು. ಆಸ್ಪತ್ರೆಯಿಂದ ಸಿಬ್ಬಂದಿಯೊಬ್ಬರು ರಕ್ತದ ಮಾದರಿಯನ್ನು ಸಂಗ್ರಹಿಸಲು ನಾನಿರುವ ಅಪಾರ್ಟ್‌ಮೆಂಟ್‌ಗೆ ಬಂದರು. ಮನೆಗೆ ಬಂದು ರಕ್ತ ಪರೀಕ್ಷೆ ಮಾಡಿಸಿದ್ದಕ್ಕೆ ಶುಲ್ಕವನ್ನು ಆಸ್ಪತ್ರೆ ಸಿಬ್ಬಂದಿ ಪಡೆದಿಲ್ಲ. ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಿಸಿದರೆ ಖರ್ಚು ಆಗುವಷ್ಟೇ ಈ ಸೇವೆಗೆ ಆಗಿದೆ ಎಂದು ಹೇಳಿದ್ದಾರೆ.

ನಾನು ಈ ರೀತಿ ಸೇವೆ ಭಾರತದಲ್ಲಿ ಮಾತ್ರ ನೋಡಿದ್ದೇನೆ, ಬೇರೆಲ್ಲಿಯೂ ಇಂತಹ ಸೌಲಭ್ಯವಿಲ್ಲ. ಆಸ್ಪತ್ರೆಗೆ ಹೋಗಿ ಅಪಾಯಿಂಟ್‌ಮೆಂಟ್‌ ತೆಗೆದುಕೊಂಡು ಕಾಯುವುದಕ್ಕಿಂತ ಕ್ಷಣಾರ್ಧದಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತದೆ. ಮನೆಯಲ್ಲಿ ಕುಳಿತುಕೊಂಡೆ ರಕ್ತ ಪರೀಕ್ಷೆ ಆಯ್ತು ಎಂದು ಹೇಳಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇದೇನು ವಿಶೇಷವಲ್ಲ, ಭಾರತದಲ್ಲಿ ಕಾಮನ್ ಎಂದಿದ್ದಾರೆ. ಮತ್ತೊಬ್ಬರು, ವಿದೇಶಿಗರಿಗೆ ಇದು ನಿಜಕ್ಕೂ ಅಚ್ಚರಿಯಾಗುತ್ತದೆ. ಭಾರತೀಯರಿಗೆ ಹೊಸದೇನು ಅನಿಸಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಭಾರತದಲ್ಲಿ ಧನಾತ್ಮಕ ಅಂಶ ಗುರುತಿಸಿದ್ದಕ್ಕೆ ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 3:54 pm, Sun, 19 July 26

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us