AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ

ಭಾರತೀಯರ ನಡೆ ನುಡಿ, ಒಳ್ಳೆಯ ಗುಣ, ಅತಿಥಿ ಸತ್ಕಾರ, ಅಪರಿಚಿತ ವ್ಯಕ್ತಿಗಳಿಗೆ ತೋರುವ ಪ್ರೀತಿಯನ್ನು ವಿದೇಶಿಗರು ಇಷ್ಟ ಪಡುತ್ತಾರೆ. ಇದೀಗ ಭಾರತೀಯ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಒಳ್ಳೆತನವನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 10, 2026 | 1:08 PM

Share

ಭಾರತೀಯರು (Indian) ವಿಶಾಲ ಹೃದಯದವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ನಮ್ಮದು. ಹೀಗಾಗಿ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ವಿದೇಶಿಗರು (foreigner) ಸಹಜವಾಗಿ ಮನಸೋಲುವುದಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ವ್ಯಾಪಾರಿ ಫ್ರೀಯಾಗಿ ಕಿವಿಯೋಲೆ ಕೊಡುತ್ತಿದ್ದಂತೆ ವಿದೇಶಿ ಮಹಿಳೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಓಲಾ ಲಿಲ್ಲಿ (Ola Lily) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದೆ. ವಿದೇಶಿ ಮಹಿಳೆ ಭಾರತದ ಬೀದಿಯಲ್ಲಿ ಸುತ್ತುತ್ತಿದ್ದ ವೇಳೆ ಬೀದಿ ಬದಿ ವ್ಯಾಪಾರಿಯೊಬ್ಬರು ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡುವುದನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ಈ ಕಿವಿಯೋಲೆಗೆ ದುಡ್ಡು ಎಷ್ಟು ಎಂದು ಕೇಳುತ್ತಿದ್ದು, ಅದಕ್ಕೆ ದುಡ್ಡು ಕೊಡೋದು ಬೇಡ, ನನ್ನ ಲೆಕ್ಕದಲ್ಲಿ ಗಿಫ್ಟ್ ಎಂದು ಭಾರತೀಯ ವ್ಯಕ್ತಿ ಹೇಳಿದ್ದಾನೆ. ತನಗೆ ಇಷ್ಟವಾದ ಕಿವಿಯೋಲೆಯನ್ನು ಎತ್ತಿಕೊಂಡು ಕಿವಿಗೆ ಹಾಕುತ್ತಿರುವ ವಿದೇಶಿ ಮಹಿಳೆಯ ಖುಷಿ ಮುಖದಲ್ಲಿ ವ್ಯಕ್ತವಾಗುತ್ತಿದೆ.

ವೈರಲ್‌ ವಿಡಿಯೋ ಇಲ್ಲಿದೆ

View this post on Instagram

A post shared by Ola Lily (@olalilyx)

ಇದನ್ನೂ ಓದಿ: ಸಣ್ಣ ವಿಷ್ಯಗಳನ್ನು ಸಂಭ್ರಮಿಸುವ ಭಾರತೀಯರ ಗುಣವನ್ನು ಮೆಚ್ಚಿಕೊಂಡ ವಿದೇಶಿ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದಿವೆ. ಒಬ್ಬ ಬಳಕೆದಾರ, ಇಂತಹ ಕ್ಷಣಗಳನ್ನು ಭಾರತದಲ್ಲಿ ಮಾತ್ರ ನೋಡಲು ಸಾಧ್ಯ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾರತೀಯರು ನಿಜಕೂ ಹೃದಯವಂತರು ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ದೇಶದ ಜನರಿಗೆ ನಮ್ಮವರು ಬಂದಾಗ ಇದೇ ರೀತಿ ನಡೆದುಕೊಳ್ಳಲು ಹೇಳಿ ಎಂದು ವಿದೇಶಿ ಮಹಿಳೆಗೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ