ಹಿಮಾಲಯನ್​ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅಧಿಕಾರಿಗಳು: ವಿಡಿಯೋ ವೈರಲ್​

ಹಿಮಾಲಯದ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಪರ್ವೀನ್​ ಕಸ್ವಾನ್​ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಹಿಮಾಲಯನ್​ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅಧಿಕಾರಿಗಳು: ವಿಡಿಯೋ ವೈರಲ್​
ಕರಡಿಯ ರಕ್ಷಣೆ
Follow us
TV9 Web
| Updated By: Pavitra Bhat Jigalemane

Updated on: Mar 02, 2022 | 9:41 AM

ಪ್ರತೀ ಜೀವಿಗೆ ಸ್ವಾತಂತ್ರ್ಯ ಎನ್ನುವುದು ಅಗತ್ಯವಾಗಿರುತ್ತದೆ. ತಮ್ಮದೇ ಪ್ರಪಂಚದಲ್ಲಿ ಸ್ವಚ್ಛಂದವಾಗಿ ಜೀವಿಸುವ ಜೀವಿಗಳನ್ನು ಕಟ್ಟಿಹಾಕುವ ಹಕ್ಕು ಯಾರಿಗೂ ಇರುವುದಿಲ್ಲ. ಇಲ್ಲೊಂದು ಹಿಮಾಲಯದ ಕಪ್ಪು ಕರಡಿ(Himalayan Black Bear)ಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ(IFS Officer) ಪರ್ವೀನ್​ ಕಸ್ವಾನ್​(Praveen Kaswan) ಅವರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋ 44 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಅರಣ್ಯ ಅಧಿಕಾರಿಗಳ ಗುಂಪು  ಕರಡಿಯನ್ನು ಸೆರೆಹಿಡಿದು ಬಲೆಯಲ್ಲಿ ಹಾಕಿ ನಂತರ ಕಾಡಿನ ಕಡೆಗೆ ಮುಖ ಮಾಡಿ ಇಟ್ಟು ದೂರ ಹೋಗುತ್ತಾರೆ. ಎಲ್ಲರೂ ದೂರ ಹೋದಂತೆ  ಕರಡಿ ಬಲೆಯಿಂದ ಹೊರಬಂದು ಕಾಡಿನೆಡೆಗೆ ಓಡಿಹೋಗುತ್ತದೆ. ಈ ಕುರಿತು ಪರ್ವೀನ್​ ಅವರು, ವಿಡಿಯೋ ಹಂಚಿಕೊಂಡು, ಸ್ವಾತಂತ್ರ್ಯ ಹೇಗಿದೆ! ಹಿಮಾಲಯದ ಕಪ್ಪು ಕರಡಿ ಸಿಲುಕಿಕೊಂಡಿತ್ತು. ನಮ್ಮ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಜನರು ಮತ್ತು ಪ್ರಾಣಿಗಳಿಗೆ ಯಾವುದೇ ಅಪಾಯವಾಗದಂತೆ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಕರಡಿಯನ್ನು ಸೆರೆಹಿಡಿದ ನಂತರ ವೈದ್ಯಕೀಯ ಚಿಕಿತ್ಸೆ ನೀಡಿ ಕಾಡಿಗೆ ಬಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ , ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಕಿರು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನೆಟ್ಟಿಗರು ವಿಡಿಯೋ ನೋಡಿ, ಉತ್ತಮ ಕೆಲಸ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು