Viral Video: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬೀಳುತ್ತಿರುವ ಭೀಕರ ದೃಶ್ಯ ಇಲ್ಲಿದೆ ನೋಡಿ
ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ
ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಜೈಪುರದ ಪಾರ್ಕೋಟ್‌ನ ಕಲ್ಯಾಣ್‌ಜಿ ಕಾ ರಸ್ತಾ ಪ್ರದೇಶದಲ್ಲಿ ಮನೆಯೊಂದರ ಕಾವಲು ಗೋಡೆ ಕುಸಿದಿದೆ. ಇದಾದ ಕೆಲವೇ ದಿನಗಳಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೂ ಕೂಡ ಕುಸಿದಿದೆ. ಈ ಕಟ್ಟಡ ಕುಸಿದು ಬಿದ್ದಿದ್ದರಿಂದ ಅಕ್ಕಪಕ್ಕದ ಇತರ ಮನೆಗಳಿಗೂ ಭಾರಿ ಹಾನಿಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಭೀಕರ ಘಟನೆಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ
ಕಟ್ಟಡಕ್ಕೆ ಕುಸಿದು ಬಿದ್ದಿದ್ದರಿಂದ ಪಕ್ಕದ ಇನ್ನೊಂದು ಕಟ್ಟಡಕ್ಕೆ ವಾಲಿ ನಿಂತಿರುವುದನ್ನು ಕಂಡು ಅಧಿಕಾರಿಗಳು… ಮೊದಲು ಸ್ಥಳೀಯರಿಗೆ ಪರಿಸ್ಥಿತಿ ಅಪಾಯಕಾರಿ ಎಂದು ಎಚ್ಚರಿಸಿದರು. ತಡರಾತ್ರಿ ಮನೆ ತೆರವು ಮಾಡಲಾಗಿದೆ. ಸಮೀಪದ ಇತರ ಮನೆಗಳನ್ನೂ ತೆರವು ಮಾಡಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಮನೆಯ ಸುತ್ತಮುತ್ತ ಯಾರೂ ಪ್ರವೇಶಿಸದಂತೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸುಮಾರು 15 ಮಂದಿಯನ್ನು ಇಲ್ಲಿಂದ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ