AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳೆಯರಿಗೆ ಇದು ಸುರಕ್ಷಿತ ದೇಶ; ಬೆಳಗ್ಗಿನ ಜಾವ 4.30 ಕ್ಕೆ ಒಂಟಿಯಾಗಿ ಫ್ರಾನ್ಸ್ ಬೀದಿಯಲ್ಲಿ ಓಡಾಡಿದ ಯುವತಿ

ವಿದೇಶದಲ್ಲಿ ಉದ್ಯೋಗ, ಶಿಕ್ಷಣಕ್ಕಾಗಿ ತೆರಳುವ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಹೆತ್ತವರಿಗೆ ಭಯವಿರುತ್ತದೆ. ಆದರೆ ಇದೀಗ ಫ್ರಾನ್ಸ್ ಎಷ್ಟು ಸೇಫ್ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಪ್ರಾನ್ಸ್‌ನಲ್ಲಿ ನೆಲೆಸಿರುವ ಯುವತಿ ಕಾಲೇಜಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಬೆಳಗಿನ ಜಾವ 4:30ಕ್ಕೆ ಒಂಟಿಯಾಗಿ ನಡೆದುಕೊಂಡು ಮನೆಗೆ ಬಂದಿದ್ದಾಳೆ. ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ ಹೆಣ್ಣು ಮಕ್ಕಳು ಸೇಫ್ ಆಗಿದ್ದಾರೆ ಎನ್ನುವುದನ್ನು ಸಾರಿ ಹೇಳುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಹಿಳೆಯರಿಗೆ ಇದು ಸುರಕ್ಷಿತ ದೇಶ; ಬೆಳಗ್ಗಿನ ಜಾವ 4.30 ಕ್ಕೆ ಒಂಟಿಯಾಗಿ ಫ್ರಾನ್ಸ್ ಬೀದಿಯಲ್ಲಿ ಓಡಾಡಿದ ಯುವತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 23, 2026 | 11:04 AM

Share

ಫ್ರಾನ್ಸ್, ಜೂನ್ 23: ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸೇಫ್ಟಿ ಅನ್ನೋದೇ ಇಲ್ಲ. ಹೀಗಾಗಿರುವಾಗ ಫ್ರಾನ್ಸ್ ನಲ್ಲಿ (France) ನೆಲೆಸಿರುವ ಯುವತಿಗೆ (young woman) ಈ ದೇಶ ಸುರಕ್ಷಿತ ಎನ್ನುವ ಅನುಭವವಾಗಿದೆ. ಭಾರತೀಯ ಯುವತಿ ಬೆಳಗಿನ ಜಾವ 4.30 ಕ್ಕೆ ಕಾಲೇಜು ಘಟಿಕೋತ್ಸವ ಮುಗಿಸಿ ಮನೆಗೆ ನಡೆದುಕೊಂಡೇ ಹೋಗಿದ್ದಾಳೆ. ತನಗೆ ಯಾವುದೇ ಸಮಸ್ಯೆ ಆಗಿಲ್ಲ, ಯಾರು ತೊಂದರೆ ಮಾಡಿಲ್ಲ ಎಂದು ಹೇಳಿದ್ದಾಳೆ. ಈ ವಿಡಿಯೋ ಸದ್ಯ ಆನ್ಲೈನ್‌ನಲ್ಲಿ ಚರ್ಚೆ ಹುಟ್ಟು ಹಾಕಿದೆ. ನೆಟ್ಟಿಗರು ಈ ಯುವತಿಯ ಮಾತನ್ನು ಒಪ್ಪಿಕೊಂಡಿದ್ದಾರೆ.

ಶುಭಂಗಿ ವ್ಯಾಸ್ (Shubhangi Vyas) ಎಂಬ ಯುವತಿ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ. ಈ ಕ್ಲಿಪಿಂಗ್ ನಲ್ಲಿ ಯುವತಿ ಘಟಿಕೋತ್ಸವ ಸಮಾರಂಭದ ನಂತರ ಕಾಲೇಜು ವಿದ್ಯಾರ್ಥಿಗಳಿಗಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಹೀಗಾಗಿ ಈ ಕಾರ್ಯಕ್ರಮ ಮುಗಿದ ನಂತರ ಬೆಳಗಿನ ಜಾವ 4.30 ಕ್ಕೆ ಮನೆಗೆ ನಡೆದುಕೊಂಡು ಹೋಗಲು ನಿರ್ಧಾರ ಮಾಡಿದೆ. ಈಗ ಸಮಯ ಬೆಳಗ್ಗೆ 4:30 ಆಗಿದೆ. ನಾನು ಮನೆಗೆ ನಡೆಯುತ್ತಾ ಹೋಗುತ್ತಿದ್ದೇನೆ. ಯಾರೂ ನನಗೆ ಇಲ್ಲಿ ತೊಂದರೆ ನೀಡುತ್ತಿಲ್ಲ, ಕಿರುಕುಳ ನೀಡುತ್ತಿಲ್ಲ, ನನ್ನನ್ನು ಯಾರು ಕೂಡ ಪ್ರಶ್ನಿಸುತ್ತಿಲ್ಲ. ಈ ರೀತಿಯ ಸುರಕ್ಷತೆ ಮತ್ತು ಸ್ವಾತಂತ್ರ್ಯವನ್ನು ನಾವು ಬೇರೆಲ್ಲಿ ಸಿಗುತ್ತದೆ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Video: ಮೊದಲ ಬಾರಿಗೆ ಅಜ್ಜ ಅಜ್ಜಿಯನ್ನು ಲಂಡನ್‌ಗೆ ಕರೆದೊಯ್ದ ಮೊಮ್ಮಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಭಾರತಕ್ಕೆ ಹೋಲಿಸಿದ್ರೆ ವಿದೇಶವೇ ಹೆಣ್ಣು ಮಕ್ಕಳಿಗೆ ಸೇಫ್ ಎಂದಿದ್ದಾರೆ. ಇನ್ನೊಬ್ಬರು, ನಮ್ಮ ದೇಶದಲ್ಲಿ ರಾತ್ರಿ ಬಿಡಿ ಹಗಲಿನಲ್ಲಿ ಓಡಾಡುವುದೇ ಕಷ್ಟ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಮ್ಮ ದೇಶದಲ್ಲಿ ಇಷ್ಟು ಸುರಕ್ಷಿತವಾಗಿ ಓಡಾಡುವುದು ಕನಸಿನ ಮಾತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ