Video: ಫ್ರೀ ಬಸ್ ಎಫೆಕ್ಟ್, ಕಿಟಕಿ ಪಕ್ಕದ ಸೀಟಿನಲ್ಲಿ ಕುಳಿತು ಹಲ್ಲುಜ್ಜುತ್ತಾ ಪ್ರಯಾಣಿಸಿದ ಮಹಿಳೆ

Video: ಫ್ರೀ ಬಸ್ ಎಫೆಕ್ಟ್, ಕಿಟಕಿ ಪಕ್ಕದ ಸೀಟಿನಲ್ಲಿ ಕುಳಿತು ಹಲ್ಲುಜ್ಜುತ್ತಾ ಪ್ರಯಾಣಿಸಿದ ಮಹಿಳೆ

ಅಕ್ಷತಾ ವರ್ಕಾಡಿ
|

Updated on:Jul 30, 2024 | 5:42 PM

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಬಸ್ಸಿನಲ್ಲಿ ಹಲ್ಲುಜ್ಜುತ್ತಾ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ "ಉಚಿತ ಬಸ್ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ" ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ರಾಜ್ಯಾದ್ಯಂತ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಭಾಗವಾಗಿ, ರಾಜ್ಯದ ಮಹಿಳೆಯರಿಗೆ ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಒದಗಿಸಲಾಗಿದೆ. ಆದರೆ ಸರಕಾರ ತಂದಿರುವ ಈ ಯೋಜನೆಯನ್ನು ಕೆಲ ಮಹಿಳೆಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಟಿಜಿಎಸ್ ಆರ್‌ಟಿಸಿ ಬಸ್‌ನಲ್ಲಿ ಚಾಲಕನ ಹಿಂದಿನ ಸೀಟಿನಲ್ಲಿ ಮಹಿಳೆಯೊಬ್ಬರು ಕುಳಿತಿರುವುದನ್ನು ಕಾಣಬಹುದು. ಆದರೆ, ಮಹಿಳೆ ಕಿಟಕಿ ಪಕ್ಕದ ಸೀಟಿನಲ್ಲಿ ಕುಳಿತು ಹಲ್ಲುಜ್ಜುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಉಚಿತ ಬಸ್ ಯೋಜನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬಂಕ್​ನಲ್ಲಿ ಕಾಯುತ್ತಿದ್ದಾಗಲೇ ದಿಢೀರ್ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published on: Jul 30, 2024 03:06 PM